Sun,Oct26,2025
ಕನ್ನಡ / English

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ 158.81 ಕೋಟಿ ರೂ. ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿ ಕೈಗೊಳ್ಳಲು ಕೇಂದ್ರಕ್ಕೆ ಪ್ರಸ್ತಾವನೆ! | JANATA NEWS

29 Jul 2023

ಮಂಡ್ಯ : ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ 158.81 ಕೋಟಿ ರೂ.ಗಳ ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ, ನವೆಂಬರ್ ನಂತರ ಕೆಲಸ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಅವರು ಇಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಗಣಂಗೂರು ಗ್ರಾಮದ ಬಳಿ ಎಕ್ಸಪ್ರೆಸ್​ವೇ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ವಾಹನಗಳ ವೇಗವನ್ನ ಸೆರೆಹಿಡಿಯಲು ಹೊಸ ತಂತ್ರಜ್ಞಾನದೊಂದಿಗೆ ಅಳವಡಿಸಲಾಗಿರುವ ಸ್ಪೀಡ್ ಡಿಟೆಕ್ಟರ್‌ಗೆ ಮಂಡ್ಯ ಹೊರವಲಯದ ಉಮ್ಮಡಹಳ್ಳಿ ಗೇಟ್ ಬಳಿ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಚಲುವರಾಯಸ್ವಾಮಿ, ಶಾಸಕ ಗಣಿಗರವಿ ಸೇರಿದಂತೆ ಹಲವು ಅಧಿಕಾರಿಗಳು ಸಾಥ್ ನೀಡಿದರು.

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ ಸ್ಪೀಡ್ ಡಿಟೆಕ್ಟರ್​ಗಳನ್ನು ಅಳವಡಿಸಿರಲಿಲ್ಲ. ಹಾಗಾಗಿ ಅಪಘಾತಗಳು ಹೆಚ್ಚಾಗಿದ್ದವು. ಜುಲೈ ತಿಂಗಳಲ್ಲಿ ಅಪಘಾತಗಳು ಕಡಿಮೆಯಾಗಿವೆ. ಜೂನ್ ತಿಂಗಳಲ್ಲಿ 20 ಅಪಘಾತಗಳಾಗಿದ್ದರೆ, ಜುಲೈನಲ್ಲಿ 5 ಅಪಘಾತಗಳು ಸಂಭವಿಸಿವೆ. ಸ್ಪೀಡ್ ಡಿಟೆಕ್ಟರ್​ಗಳನ್ನು 10 ಕಿಮೀ ಅಂತರದಲ್ಲಿ ಅಳವಡಿಸಿದರೆ ಅಪಘಾತಗಳನ್ನು ಕಡಿಮೆ ಮಾಡಲು ಸಾಧ್ಯ. ಮುಖ್ಯ ಕಾರ್ಯದರ್ಶಿಗಳು ಎನ್.ಹೆಚ್.ಎ. ಐ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ನನ್ನ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

ಎಕ್ಸ್​ಪ್ರೆಸ್​ವೇ ನಲ್ಲಿ ಕೆಲವು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಿದ್ದು ಅದಕ್ಕಾಗಿಯೇ ಕಾಮಗಾರಿ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಸರ್ವಿಸ್ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ.

ಗುತ್ತಿಗೆದಾರರ ಬಿಲ್ ಬಾಕಿ ವಿಚಾರವಾಗಿ ಮಾತನಾಡಿದ ಅವರು ಗುತ್ತಿಗೆದಾರರ ಬಿಲ್ ಬಾಕಿ ನಾವು ಉಳಿಸಿಕೊಂಡಿಲ್ಲ, ಹಿಂದಿನ ಸರ್ಕಾರ ಉಳಿಸಿಕೊಂಡಿತ್ತು. ಟೋಲ್ ಸಂಗ್ರಹ ನಾವು ಮಾಡಲ್ಲ.

ಹೆದ್ದಾರಿ ಪೂರ್ಣಗೊಳ್ಳದೆ ಟೋಲ್ ಸಂಗ್ರಹವಾಗುತ್ತಿರುವ ಬಗ್ಗೆ ಮಾತನಾಡಿ ಎನ್.ಹೆಚ್.ಐ.ಎ ಅವರು ಸಂಗ್ರಹ ಮಾಡುವುದು. ದೆಹಲಿಗೆ ತೆರಳಿದಾಗ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದರು.

RELATED TOPICS:
English summary :158.81 crore on Bangalore-Mysore Expressway. Proposal to the center to carry out additional work at cost!

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...