Thu,Sep11,2025
ಕನ್ನಡ / English

ಕಲುಷಿತ ನೀರು ಸೇವನೆಯಿಂದ ಮೂವರ ಸಾವು | JANATA NEWS

03 Aug 2023

ಚಿತ್ರದುರ್ಗ : ಕವಾಡಿಗರಹಟ್ಪಿಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿದ್ದು, 100ಕ್ಕೂ ಅಧಿಕ ಮಂದಿ ಅಸ್ವಸ್ವರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿತ್ರದುರ್ಗದ ಕವಾಡಿಗರಹಟ್ಟಿಯಲ್ಲಿ ವಿಷಕಾರಿ ನೀರು ಸೇವನೆಯಿಂದ ಸಾವುಗಳು ಸಂಭವಿಸಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಜನರ ಬಳಿ ತಹಶೀಲ್ದಾರ್ ನಾಗವೇಣಿ ನೇತೃತ್ವದ ತಂಡಕ್ಕೆ ತೆರಳಿ ವಿಚಾರಿಸಿದಾಗ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ.

ಘಟನೆ ನಡೆದು ಇಷ್ಟು ದಿನವಾದ್ರೂ ಈವರೆಗೂ ಸೂಕ್ತ ಅನ್ನ ಮತ್ತು ನೀರಿನ ವ್ಯವಸ್ಥೆ ಕಲ್ಪಿಸಿಲ್ಲವೆಂದು ಕಿಡಿಕಾರಿದ್ದಾರೆ. ಈ ವೇಳೆ ತಹಸೀಲ್ದಾರ್ ನಾಗವೇಣಿ ಜತೆ ಪ್ರತಿಭಟನಾಕಾರರು ವಾಗ್ವಾದ ನಡೆಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಗ್ರೂಪ್ ಉದ್ಯೋಗಿಯಾಗಿರುವ ಪಂಪ್ ಆಪರೇಟರ್ ಸಿ.ಹೆಚ್. ಪ್ರಕಾಶ್ ಬಾಬು ಅವರನ್ನು ಜಿಲ್ಲಾಧಿಕಾರಿ ಜಿಆರ್ ಜೆ ದಿವ್ಯಪ್ರಭು ಅಮಾನತು ಮಾಡಿದ್ದಾರೆ.

ಘಟನೆ ಕುರಿತಂತೆ ಜಿಲ್ಲಾಡಳಿತದಿಂದ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ, ತನಿಖೆಗೆ ಆದೇಶಿಸಿದ್ದು, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿದೆ. ಈ ತಂಡ ಸ್ಥಳ ಪರಿಶೀಲನೆ ಮಾಡಿ ಮೂರು ದಿನಗಳ ಒಳಗಾಗಿ ವರದಿ ನೀಡುವಂತೆ ಸೂಚಿಸಲಾಗಿದೆ.

ಅಸ್ವಸ್ಥರ ಆರೋಗ್ಯ ವಿಚಾರಿಸಿದ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ, ಕಲುಷಿತ ನೀರು ಸೇವಿಸಿ ಮೃತರಾದವರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು. ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

RELATED TOPICS:
English summary :Three people died due to drinking contaminated water

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...