Tue,Oct28,2025
ಕನ್ನಡ / English

ಹಿಂದೂ ಮುಖಂಡರ ಮೇಲೆ ಪ್ರಚೋದನಕಾರಿ ಭಾಷಣ ಕೇಸ್; ಹೋರಾಟ ಹತ್ತಿಕ್ಕುವ ಪ್ರಯತ್ನ - ಶಾಸಕ ಸುವರ್ಣ | JANATA NEWS

04 Aug 2023

ಉಡುಪಿ : ವೀಡಿಯೋ ಪ್ರಕರಣದ ಬಗ್ಗೆ ಕೇಸು ದಾಖಲಿಸಲು ಮೀನಾಮೇಷ ಎಣಿಸಿ ವಿಳಂಬವಾಗಿ 8 ದಿನಗಳ ಬಳಿಕ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸ್ ಇಲಾಖೆ ಹಿಂದೂ ಮುಖಂಡರ ವಿರುದ್ಧ ತರಾತುರಿಯಲ್ಲಿ ಸುಮೋಟೋ ಕೇಸ್ ದಾಖಲಿಸುವಲ್ಲಿ ವಿಶೇಷ ಆಸಕ್ತಿ ವಹಿಸಿದೆ, ಎಂದು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಹಿಂದೂ ಮುಖಂಡರ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲಾಗಿರುವ ಕ್ರಮಕ್ಕೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ವೀಡಿಯೋ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಹಿಂದೂ ಮುಖಂಡರಾದ ಶರಣ್ ಪಂಪ್ ವೆಲ್, ದಿನೇಶ್ ಮೆಂಡನ್ ಹಾಗೂ ಬಿಜೆಪಿ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ ವಿರುದ್ಧ ಸುಮೋಟೋ ಕೇಸ್ ದಾಖಲಿಸಿರುವ ಪೊಲೀಸ್ ಇಲಾಖೆಯ ಕ್ರಮಕ್ಕೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಕೈಗೊಂಬೆಯಾಗಿ ಪೋಲಿಸ್ ಇಲಾಖೆ ಕೆಲಸ ನಿರ್ವಹಿಸುತ್ತಿದ್ದು, ಪ್ರಕರಣದ ಆರಂಭದ ದಿನದಿಂದಲೂ ಸರಕಾರ ನಿರಂತರವಾಗಿ ಪೋಲಿಸ್ ಇಲಾಖೆಯ ಮೇಲೆ ಒತ್ತಡ ತರುತ್ತಿದ್ದು ಪ್ರಕರಣವನ್ನು ಮುಚ್ಚಿ ಹಾಕುವ ಹುನ್ನಾರ ನಡೆಸುತ್ತಿದೆ. ಉಡುಪಿಯಲ್ಲಿ ನಿನ್ನೆ ನಡೆದ ಪ್ರತಿಭಟನೆಯಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗಿಯಾಗಿ ಪ್ರಕರಣದ ವಿರುದ್ಧ ಜನಕ್ರೋಶ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಹತಾಶರಾಗಿರುವ ರಾಜ್ಯ ಸರ್ಕಾರ ಪೋಲಿಸ್ ಇಲಾಖೆಯ ಮೂಲಕ ಹಿಂದೂ ಮುಖಂಡರ ಮೇಲೆ ಕೇಸ್ ದಾಖಲಿಸುವ ಮೂಲಕ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನದಲ್ಲಿ ತೊಡಗಿದೆ. ವೀಡಿಯೋ ಪ್ರಕರಣದ ಬಗ್ಗೆ ಕೇಸು ದಾಖಲಿಸಲು ಮೀನಾಮೇಷ ಎಣಿಸಿ ವಿಳಂಬವಾಗಿ 8 ದಿನಗಳ ಬಳಿಕ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸ್ ಇಲಾಖೆ ಹಿಂದೂ ಮುಖಂಡರ ವಿರುದ್ಧ ತರಾತುರಿಯಲ್ಲಿ ಸುಮೋಟೋ ಕೇಸ್ ದಾಖಲಿಸುವಲ್ಲಿ ವಿಶೇಷ ಆಸಕ್ತಿ ವಹಿಸಿದೆ. ರಾಜ್ಯ ಸರ್ಕಾರ ಜಿಹಾದಿ ಶಕ್ತಿಗಳ ಓಲೈಕೆಗಾಗಿ ಹಿಂದೂ ಮುಖಂಡರ ವಿರುದ್ಧ ಕೇಸ್ ದಾಖಲಿಸಿದ್ದು, ಇದರಿಂದ ಯಾವೊಬ್ಬ ಹಿಂದೂ ಕಾರ್ಯಕರ್ತ ಧೃತಿಗೆಡದೆ ಸಂತ್ರಸ್ಥ ವಿದ್ಯಾರ್ಥಿನಿಯರ ರಕ್ಷಣೆಗೆ ಸದಾ ಜೊತೆ ನಿಲ್ಲಲಿದ್ದಾರೆ, ಎಂದು ಯಶಪಾಲ್ ಸುವರ್ಣ ಟ್ವೀಟ್ ಮಾಡಿದ್ದಾರೆ.

English summary : Provocative speech case against Hindu leaders; Efforts to suppress the protest - MLA Suvarna

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...