Sun,Oct26,2025
ಕನ್ನಡ / English

ಕಾವೇರಿ ನೀರು ನಿಲ್ಲಿಸದಿದ್ದರೆ, ಸೆ.12ರ ನಂತರ ಕಾವೇರಿ ರಕ್ಷಣಾ ಯಾತ್ರೆ ಆರಂಭ | JANATA NEWS

08 Sep 2023

ಮಂಡ್ಯ : ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸದಿದ್ದರೇ ಸೆಪ್ಟಂಬರ್ 12 ರ ನಂತರ ಕಾವೇರಿ ಕೊಳ್ಳದ ಜಿಲ್ಲೆಗಳ ಜನರೊಂದಿಗೆ ಸೇರಿ ಕಾವೇರಿ ರಕ್ಷಣಾ ಯಾತ್ರೆ ನಡೆಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಮಂಡ್ಯ ಜಿಲ್ಲೆಯ ಕೆ ಆರ್ ಎಸ್ ಭೇಟಿ ನೀಡಿ ನೀರಿನ ವಸ್ತು ಸ್ಥಿತಿ ಪರಿಶೀಲನೆಯ ನಂತರ ಮಾತನಾಡಿದ ಅವರು, ಈ ವರ್ಷ ಮಳೆ ಕೊರತೆಯಾಗಿರುವುದು ಮೇ, ಜೂನ್ ತಿಂಗಳ ಪ್ರಾರಂಭದಲ್ಲಿಯೇ ಗೊತ್ತಾಗಿದೆ.

ಆದರೂ ಸರ್ಕಾರ ಸಂಪೂರ್ಣವಾಗಿ ಕಾವೇರಿ ವ್ಯಾಪ್ತಿಯ ನಾಲ್ಕು ಡ್ಯಾಮ್ ಗಳ ನಿರ್ವಹಣೆಯಲ್ಲಿ ವಿಫಲವಾಗಿದೆ‌. ಕುಡಿಯುವ ನೀರಿಗೆ ಅನುಕೂಲವಾಗಲು ಕೆರೆಗಳಿಗೆ ರೈತರ ಹೊಲಗಳಿಗೆ ಜೂನ್ ತಿಂಗಳಲ್ಲಿ ನೀರು ಬಿಡಬೇಕಿತ್ತು. ಐಸಿಸಿ ಮೀಟಿಂಗ್ ಜೂನ್ ನಲ್ಲಿ ಕರೆಯುವ ಬದಲು ಆಗಸ್ಟ್‌ನಲ್ಲಿ ಕರೆದಿದ್ದಾರೆ.

ಕರ್ನಾಟಕ ಸರಕಾರ 5,000 ಕ್ಯುಸೆಕ್ಸ್ ಗಿಂತ ಜಾಸ್ತಿ ನೀರನ್ನು ಬಿಡುತ್ತಿರುವ ಸಂಶಯ ಹುಟ್ಟಿಕೊಂಡಿರುವುದರಿಂದ ಒಳಗಡೆ ಹೋಗಿ ಒಳಹರಿವಿನ ವಿವರ ನೋಡಿದರೆ ಗೊತ್ತಾಗುತ್ತದೆ. ಜಲಾಶಯದಲ್ಲಿನ ವಸ್ತುಸ್ಥಿತಿ ಅರಿಯುವುದು ಮತ್ತು ಮುಂದೆ ಅನಾಹುತ ಆಗದಂತೆ ಸರ್ಕಾರವನ್ನು ಎಚ್ಚರಿಸುವುದು ನಿಯೋಗದ ಉದ್ದೇಶವಾಗಿದೆ ಎಂದು ಬೊಮ್ಮಾಯಿ ಹೇಳಿದರು

ಕುಡಿಯುವ ನೀರಿಗೆ ಅನುಕೂಲವಾಗಲು ಕೆರೆಗಳಿಗೆ ರೈತರ ಹೊಲಗಳಿಗೆ ಜೂನ್ ತಿಂಗಳಲ್ಲಿ ನೀರು ಬಿಡಬೇಕಿತ್ತು. ಐಸಿಸಿ ಮೀಟಿಂಗ್ ಜೂನ್ ನಲ್ಲಿ ಕರೆಯುವ ಬದಲು ಆಗಸ್ಟ್‌ನಲ್ಲಿ ಕರೆದಿದ್ದಾರೆ. ತಮಿಳುನಾಡಿನವರು 15000 ಕ್ಯೂಸೆಕ್ಸ್ ನೀರು ಕೇಳಿದ ಮೇಲೆ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳದೇ ಕಾಲ ಹರಣ ಮಾಡಿದೆ ಎಂದು ಆರೋಪಿಸಿದರು.

ತಮಿಳುನಾಡಿನವರು ಕುರುವೈ ಬೆಳೆಗೆ ಈಗಾಗಲೇ 32 ಟಿಎಂಸಿ ಬದಲು 60 ಟಿಎಂಸಿ ನೀರು ಬಳಕೆ ಮಾಡಿಕೊಂಡಿದ್ದಾರೆ. ಆದರೂ ಅವರ ಬೇಡಿಕೆಯಂತೆ ಪ್ರತಿದಿನ ನೀರು ಹರಿಸುತ್ತಿದ್ದಾರೆ. ಈ ಬಗ್ಗೆ ಸರ್ವ ಪಕ್ಷ ಸಭೆಯಲ್ಲೆ ಕೇಳಿದಾಗ ಇನ್ನು ಮುಂದೆ ನೀರು ಬಿಡುವುದಿಲ್ಲ ಅಂತ ಹೇಳಿ, ನಿರಂತರ ನೀರು ಹರಿಸುತ್ತಿದ್ದಾರೆ. ಸಿಡಬ್ಲುಎಂಎ ಎದುರು ಸರಿಯಾಗಿ ವಾದ ಮಾಡಿದ್ದರೆ ಸುಮಾರು 15 ಟಿಎಂಸಿ ನೀರು ಉಳಿಯುತ್ತಿತ್ತು ಎಂದರು.

ರಾಜ್ಯ ಸರ್ಕಾರ ಸೆ. 12 ನೇ ತಾರೀಖಿನ ನಂತರವೂ ನೀರು ಬಿಡುವ ಸಾಧ್ಯತೆ ಇದೆ. ಸುಪ್ರೀಂಕೋರ್ಟ್ ವಿಚಾರಣೆ ನಡೆಯುವವರೆಗೂ ನೀರು ಹರಿಯುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಕಾವೇರಿ ಮಕ್ಕಳಿಗೆ ಅನ್ಯಾಯ ಮಾಡಿದಂತಾಗುತ್ತದೆ.

ಮಂಡ್ಯ ಜಿಲ್ಲೆಯೊಂದರಲ್ಲೆ ಸುಮಾರು 4 ಲಕ್ಷ ಎಕರೆ ಬೆಳೆ ಒಣಗುತ್ತಿದೆ. ಕೃಷಿ ಅಧಿಕಾರಿಗಳು ಒಣ ಬೇಸಾಯದ ಬೆಳೆ ಬೆಳೆಯುವಂತೆ ಸೂಚನೆ ನೀಡುತ್ತಿದ್ದಾರೆ. ತಮಿಳುನಾಡಿನ ಬೆಳೆಗೆ ನೀರು ಹರಿಸುತ್ತಿದ್ದಾರೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಈ ಕಡೆಗೆ ಗಮನ ಹರಿಸಿಲ್ಲ. ಸಿಎಂ ನೀರು ಬಿಡುವುದಿಲ್ಲ ಅಂತ ಹೇಳಿದ ಇಪ್ಪತ್ನಾಲ್ಕು ಗಂಟೆಯಲ್ಲಿ ಆದೇಶ ಇದೆ ನೀರು ಬಿಟ್ಟಿದ್ದೇವೆ ಅಂತ ಡಿಸಿಎಂ ಹೇಳುತ್ತಾರೆ.

ಕೆಆರ್ ಎಸ್ ಡ್ಯಾಮ್ ನಲ್ಲಿ ಕೇವಲ 13 ಟಿಎಂಸಿ ನೀರು ಮಾತ್ರ ಬಳಕೆಗೆ ಇದೆ. ಮುಂದಿನ ಮೇ ವರೆಗೂ ಇನ್ನೂ ಎರಡು ಟಿಎಂಸಿ ನೀರು ಆವಿಯಾಗಿ ಹೋಗುತ್ತದೆ. ಇದರಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. ರಾಜ್ಯದ ಜನರು ಇದನ್ನು ಕ್ಷಮಿಸುವುದಿಲ್ಲ ಎಂದರು.

ಕಾಂಗ್ರೆಸ್ ‌ನಾಯಕರ ಹೇಳಿಕೆಗಳನ್ನು ನೋಡಿದರೆ, ತಮಿಳುನಾಡಿನ ಓಲೈಕೆಗೆ ರಾಜಕಾರಣ ಮಾಡುತ್ತಿದ್ದಾರೆ. ಕಾವೇರಿ ಹಿನ್ನೀರು ಸಂಪೂರ್ಣ ಖಾಲಿಯಾಗಿದೆ. ಸರ್ಕಾರ ಇನ್ನೂ ನೀರು ಹರಿಸಿದರೆ ಈ ಪರಿಸ್ಥಿತಿಯಲ್ಲಿ ನಾವು ಕಾವೇರಿ ಮಕ್ಕಳಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದರು.

RELATED TOPICS:
English summary :If the Cauvery water does not stop, the Cauvery Rescue Yatra will start after September 12

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...