ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ! | JANATA NEWS

ಹುಬ್ಬಳ್ಳಿ : ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆಯಾಗಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬೋಗೆನಾಗರಕೊಪ್ಪದಲ್ಲಿ ನಡೆದಿದ್ದು, ಪತಿ ಹಾಗೂ ಆತನ ಕುಟುಂಬಸ್ಥರು ಮನೆ ಬಿಟ್ಟು ಪರಾರಿ ಆಗಿದ್ದಾರೆ.
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬೋಗೆನಾಗರಕೊಪ್ಪದ ಸುಮಂಗಲಾ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ಐದು ವರ್ಷಗಳ ಹಿಂದೆ ಸುಮಂಗಲಾ- ಪ್ರವೀಣ್ ತಿಪ್ಪಣ್ಣವರ್ ಮದುವೆ ಆಗಿತ್ತು. ಮದುವೆ ಬಳಿಕ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎಂದಿರುವ ಸುಮಂಗಲಾ ಕುಟುಂಬಸ್ಥರು, ಆಕೆಯ ಪತಿ ಮತ್ತಿತರರ ವಿರುದ್ಧ ದೂರು ನೀಡಿದ್ದಾರೆ.
ಸುಮಂಗಲಾ ಸಾವಿನ ಬೆನ್ನಲ್ಲೇ ಆಕೆಯ ಪತಿ ಹಾಗೂ ಕುಟುಂಬಸ್ಥರು ಮನೆ ಬಿಟ್ಟು ಪರಾರಿ ಆಗಿದ್ದಾರೆ. ಈ ಕುರಿತು ಪತಿ ಪ್ರವೀಣ್ ಹಾಗೂ ಆತನ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.