ನಾಗಮಂಗಲದಲ್ಲಿ ಆಡಳಿತ ಪಕ್ಷದ ಒತ್ತಡದಿಂದ ಪೊಲೀಸರು ಮೂಕ ಪ್ರೇಕ್ಷಕರಾಗಿ ಕೈಕಟ್ಟಿ ಕುಳಿತರು - ಬಿಜೆಪಿ | JANATA NEWS
ಬೆಂಗಳೂರು : ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ಮಸೀದಿ ಬಳಿ ಬರುತ್ತಿದ್ದಂತೆ ಮೆರವಣಿಗೆ ಮೇಲೆ ನಿರ್ದಿಷ್ಟ ಸಮುದಾಯದವರು ನಡೆಸಿದ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಭಾರೀ ಟೀಕೆ ವ್ಯಕ್ತವಾಗಿದೆ.
ಸಮಾಜದ ಶಾಂತಿ ಮತ್ತು ನೆಮ್ಮದಿಗೆ ಧಕ್ಕೆ ತರುತ್ತದೆ ಎಂದು ಕಲ್ಲು ತೂರಾಟವನ್ನು ಸ್ವತಃ ಮುಖ್ಯಮಂತ್ರಿ ಖಂಡಿಸಿದರೂ, ರಾಜ್ಯ ಸರ್ಕಾರ ತಪ್ಪಿತಸ್ಥರನ್ನು ರಕ್ಷಿಸುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ನಿನ್ನೆ ಸಂಜೆ ಮಂಡ್ಯದಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಹಿಂಸಾಚಾರ ನಡೆದಿದ್ದು, ನಿರ್ದಿಷ್ಟ ಸಮುದಾಯದವರು ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಸೆ.14ರವರೆಗೆ ಈ ಪ್ರದೇಶದಲ್ಲಿ ನಾಲ್ಕಕ್ಕಿಂತ ಹೆಚ್ಚು ಜನರು ಸೇರುವುದನ್ನು ತಡೆಯುವ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
"ನಾಗಮಂಗಲದಲ್ಲಿ ನಡೆದ ಘಟನೆ ಪೂರ್ವನಿಯೋಜಿತ ಕೃತ್ಯ. ಆಡಳಿತ ಪಕ್ಷದ ಒತ್ತಡದಿಂದ ಪೊಲೀಸರು ಮೂಕ ಪ್ರೇಕ್ಷಕರಾಗಿ ಕೈಕಟ್ಟಿ ಕುಳಿತುಕೊಂಡಿದ್ದರು. ಹಿಂದೂ ವಿರೋಧಿ ಸಿದ್ದರಾಮಯ್ಯ ಸರ್ಕಾರದ ಪ್ರೋತ್ಸಾಹದಿಂದಾಗಿ ದೇಶದ್ರೋಹಿಗಳು ಅಟ್ಟಹಾಸ ಮೆರೆಯುತ್ತಿದ್ದಾರೆ. ಅನ್ಯಾಯಕ್ಕೊಳಗಾದ ಹಿಂದೂಗಳಿಗೆ ನ್ಯಾಯ ಹಾಗೂ ಪರಿಹಾರವನ್ನು ತಕ್ಷಣವೇ ಒದಗಿಸಬೇಕು. ಬಂಧನಕ್ಕೊಳಗಾದ ಅಮಾಯಕ ಹಿಂದೂ ಕಾರ್ಯಕರ್ತರನ್ನು ಬಿಡುಗಡೆಗೊಳಿಸಬೇಕು, ದೇಶದ್ರೋಹಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳಬೇಕು.", ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ.ವಿಜಯೆಂದ್ರ ಒತ್ತಾಯಿಸಿದ್ದಾರೆ.
"ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಈಗಾಗಲೇ 50ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆಯಾಗಿದೆ. ಕಳೆದ ಒಂದೂವರೆ ವರ್ಷಗಳಿಂದ ಯಾವುದೇ ಗಲಭೆ, ಗಲಾಟೆ, ಹಿಂಸಾಚಾರಗಳು ನಡೆಯದೆ ಸರ್ವಜನಾಂಗದ ಶಾಂತಿಯ ತೋಟದಂತಿದ್ದ ನಾಡನ್ನು, ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸಲು ಯತ್ನಿಸುವ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಪ್ರಚೋದನೆಗಳಿಗೆ ಒಳಗಾಗದೆ ಶಾಂತಿ, ಸಂಯಮ ಕಾಪಾಡಿಕೊಳ್ಳುವ ಮೂಲಕ ನಮ್ಮೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ," ಎಂದು ಸಿದ್ದರಾಮಯ್ಯ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ನಾಗಮಂಗಲದಲ್ಲಿ ನಡೆದ ಘಟನೆ ಪೂರ್ವನಿಯೋಜಿತ ಕೃತ್ಯ. ಆಡಳಿತ ಪಕ್ಷದ ಒತ್ತಡದಿಂದ ಪೊಲೀಸರು ಮೂಕ ಪ್ರೇಕ್ಷಕರಾಗಿ ಕೈಕಟ್ಟಿ ಕುಳಿತುಕೊಂಡಿದ್ದರು. ಹಿಂದೂ ವಿರೋಧಿ ಸಿದ್ದರಾಮಯ್ಯ ಸರ್ಕಾರದ ಪ್ರೋತ್ಸಾಹದಿಂದಾಗಿ ದೇಶದ್ರೋಹಿಗಳು ಅಟ್ಟಹಾಸ ಮೆರೆಯುತ್ತಿದ್ದಾರೆ.
— BJP Karnataka (@BJP4Karnataka) September 12, 2024
ಅನ್ಯಾಯಕ್ಕೊಳಗಾದ ಹಿಂದೂಗಳಿಗೆ ನ್ಯಾಯ ಹಾಗೂ ಪರಿಹಾರವನ್ನು ತಕ್ಷಣವೇ ಒದಗಿಸಬೇಕು.… pic.twitter.com/8DGCSWD9Y6