ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಸಿಬಿಐ ಬಂಧನ : ನ್ಯಾಯಾಲಯದಿಂದ ಶಿಕ್ಷೆ ಪ್ರಮಾಣ ಪ್ರಕಟ.. | JANATA NEWS
ಬೆಂಗಳೂರು : ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಸಂಜೆ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕರ್ನಾಟಕದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ವಿಶೇಷ ನ್ಯಾಯಾಲಯ ದೋಷಿ ಎಂದು ಘೋಷಿಸಿದ ನಂತರ ಸಿಬಿಐ ಅವರನ್ನು ಬಂಧಿಸಿದೆ.
2010 ರಲ್ಲಿ 200 ಕೋಟಿ ರೂಪಾಯಿ ಮೌಲ್ಯದ ಕಬ್ಬಿಣದ ಅದಿರನ್ನು ಕದ್ದು ಅಕ್ರಮವಾಗಿ ರಫ್ತು ಮಾಡಿದ ಆರೋಪದಲ್ಲಿ ಅವರು ತಪ್ಪಿತಸ್ಥರು ಎನ್ನಲಾಗಿದೆ.
ಪ್ರಕರಣದ ವಿಚಾರಣೆ ನಡೆಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಇಂದು ಶುಕ್ರವಾರ ಶಿಕ್ಷೆ ಪ್ರಮಾಣದ ಅರ್ಜಿಯನ್ನು ವಿಚಾರಣೆ ನಡೆಸಿ ಶನಿವಾರ ಶಿಕ್ಷೆಯನ್ನು ಪ್ರಕಟಿಸುವುದಾಗಿ ತಿಳಿಸಿದರು.
ಬೇಲೆಕೇರಿ ಬಂದರಿನಲ್ಲಿ ಅನುಮತಿಯಿಲ್ಲದೆ 11,312 ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಅಕ್ರಮವಾಗಿ ಸಾಗಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಇಂದು ಪ್ರಕಟಿಸಬೇಕಿತ್ತು. ಸೈಲ್ ಮತ್ತು ಇತರ ಇಬ್ಬರು ಆರೋಪಿಗಳನ್ನು ತಕ್ಷಣವೇ ಕಸ್ಟಡಿಗೆ ತೆಗೆದುಕೊಳ್ಳುವಂತೆ ವಿಶೇಷ ನ್ಯಾಯಾಲಯವು ಸಿಬಿಐಗೆ ಆದೇಶಿಸಿದೆ ಮತ್ತು ಶಿಕ್ಷೆಯ ಪ್ರಮಾಣವನ್ನು ನಾಳೆ (ಅಕ್ಟೋಬರ್ 25) ಮಧ್ಯಾಹ್ನ 12.30 ಕ್ಕೆ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಆದೇಶನೀಡಿತ್ತು.
2010ರಲ್ಲಿ ಬಳ್ಳಾರಿಯಿಂದ ಕಾರವಾರ ಬಂದರಿನ ಮೂಲಕ ಮ್ಯಾಂಗನೀಸ್ ರಫ್ತು ಮಾಡಲಾಗಿದ್ದು, 2006-07ರಿಂದ 2010-11ರ ಅವಧಿಯಲ್ಲಿ 7.74 ಮಿಲಿಯನ್ ಟನ್ ಕಬ್ಬಿಣದ ಅದಿರನ್ನು ಅಕ್ರಮವಾಗಿ ರಫ್ತು ಮಾಡಲಾಗಿದೆ, ರಾಜ್ಯದ ಬೊಕ್ಕಸಕ್ಕೆ ಗಮನಾರ್ಹ ನಷ್ಟವನ್ನು ಉಂಟುಮಾಡಿದ್ದಾರೆ, ಎಂದು ಅಂದಿನ ಲೋಕಾಯುಕ್ತ ಎನ್.ಸಂತೋಷ್ ಹೆಗ್ಡೆ ಅವರು ತಮ್ಮ ಅಕ್ರಮ ಗಣಿಗಾರಿಕೆ ವರದಿಯಲ್ಲಿ ಹಗರಣವನ್ನು ಬಯಲಿಗೆಳೆದಿದ್ದರು.