ಪ್ರಮಾಣ ವಚನ ಸಮಾರಂಭಕ್ಕೆ ದೇವೇಗೌಡ, ಯಡಿಯೂರಪ್ಪ, ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದ ಡಿಕೆ ಶಿವಕುಮಾರ್ | JANATA NEWS
ಬೆಂಗಳೂರು : ಮುಖ್ಯಮಂತ್ರಿ ಪದಗ್ರಹಣಕ್ಕೂ ಮುಂಚೆ ಡಿಕೆ.ಶಿವಕುಮಾರ್ ಅವರು ಇಂದು ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್. ಡಿ. ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ, ಸಂಜೆ ಲೋಕಭವನದಲ್ಲಿ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ಆತ್ಮೀಯವಾಗಿ ಆಹ್ವಾನಿಸಿದ್ದಾರೆ. ನಾಡಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಹಿರಿಯ ನಾಯಕರ ಸುದೀರ್ಘ ರಾಜಕೀಯ ಅನುಭವ ಹಾಗೂ ಮಾರ್ಗದರ್ಶನ ಸದಾ ಪ್ರೇರಣೆಯಾಗಲಿದೆ.", ಎಂದು ಡಿಕೆ. ಶಿವಕುಮಾರ್ ಹೇಳಿದ್ದಾರೆ.
ಇದಕ್ಕೂ ಮುನ್ನ ಇಂದು ಅವರು, ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿದ್ದರು ಹಾಗೆಯೇ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಸಂಜೆ ಲೋಕಭವನದಲ್ಲಿ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ಆಹ್ವಾನಿಸಿದರು.
ಇಂದು ಪ್ರಮಾಣವಚನ ಸಮಾರಂಭಕ್ಕೆ ಕಾಂಗ್ರೆಸ್ ಆಡಳಿತರೂಡ ರಾಜ್ಯದ ಮುಖ್ಯಮಂತ್ರಿಗಳೂ, ಪಕ್ಷದ ಹಿರಿಯ ನಾಯಕರು ಹಾಗೂ ಗಾಂಧಿ ಪರಿವಾರದ ಸದಸ್ಯರೂ ಆಗಮಿಸಲಿದ್ದಾರೆ ಎನ್ನಲಾಗಿದೆ.