Mon,Jun24,2024
ಕನ್ನಡ / English

ನನ್ನನ್ನು ಕೆಣಕಿ ಮರ್ಯಾದೆ ಕಳೆದುಕೊಳ್ಳಬೇಡಿ: ಸಚಿವ ಗೋಪಾಲಯ್ಯಗೆ ಡಿಕೆಶಿ ಎಚ್ಚರಿಕೆ | Janata news

26 Apr 2020
693

ಬೆಂಗಳೂರು : ಕೇಂದ್ರ ಸರಕಾರ ಕೊಟ್ಟ ಅಕ್ಕಿಯನ್ನು ಎಷ್ಟು ಬೆಲೆಗೆ ಯಾರು ಯಾರಿಗೆ ಮಾರುತ್ತಿದ್ದಾರೆ ಎಂಬ ಬಗ್ಗೆ ನನ್ನ ಬಳಿ ಸ್ಪಷ್ಟ ಮಾಹಿತಿ ಇದೆ, ಸುಮ್ಮನೆ ನನ್ನನ್ನು ಕೆಣಕಿ ಮಾನ ಕಳೆದುಕೊಳ್ಳಬೇಡಿ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಚಿವ ಗೋಪಾಲಯ್ಯ ಅವರಿಗೆ ಎಚ್ಚರಿಕೆ ನೀಡಿದ್ದಾರೆ.

ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಅವರು, ನಾನು ಸಚಿವ ಗೋಪಾಲಯ್ಯರಿಗಿಂತ ಮೊದಲೇ ಸಚಿವನಾಗಿದ್ದವನು. ಈ ವ್ಯವಸ್ಥೆ ಹೇಗೆ ಕಾರ್ಯ ನಿರ್ವಹಿಸುತ್ತದೆಂದು ಚೆನ್ನಾಗಿ ಗೊತ್ತಿದೆ. ಸುಮ್ಮನೆ ನನ್ನನ್ನು ಕೆಣಕಿ ಮಾನ ಕಳೆದುಕೊಳ್ಳಬೇಡಿ ಎಂದು ಎಚ್ಚರಿಕೆ ನೀಡಿದರು.

ಗೋಪಾಲಯ್ಯ ಅವರಿಗೆ ತಮ್ಮ ಅಧಿಕಾರಿಗಳನ್ನು ಮುಚ್ಚಿಟ್ಟುಕೊಳ್ಳಬೇಕಾದ ಅನಿವಾರ್ಯತೆ ಇದೆ. ನಮ್ಮ ವ್ಯವಸ್ಥೆಯಲ್ಲಿ ನ್ಯಾಯಬೆಲೆ ಅಂಗಡಿಯಲ್ಲಿ ದಿನಸಿ ಪದಾರ್ಥವನ್ನು ಸಂಗ್ರಹಿಸಬೇಕಾದರೆ ಅನೇಕ ಕಾನೂನು ಪ್ರಕ್ರಿಯೆಗಳಿವೆ. ಇಂಥ ಸಂದರ್ಭದಲ್ಲಿ ಅನುಮತಿ ಇಲ್ಲದ ಕಡೆ ಅಷ್ಟು ದೊಡ್ಡ ಪ್ರಮಾಣದಲ್ಲಿ ಅಕ್ಕಿ ಸಂಗ್ರಹಿಸಿ ಇಟ್ಟುಕೊಂಡಿದ್ದು ಯಾಕೆ, ಸರ್ಕಾರ ನೂರಾರು ಗೋದಾಮು, ಛತ್ರಗಳನ್ನು ಪಡೆದು ಅವುಗಳನ್ನು ದಿನಸಿ ಪದಾರ್ಥ ಸಂಗ್ರಹಕ್ಕೆ ಬಳಸಲಾಗುವುದು ಎಂದು ಘೋಷಿಸಿದ್ದೇಕೆ, ಅಷ್ಟು ಕಟ್ಟಡಗಳಲ್ಲಿ ಸಂಗ್ರಹಿಸಲು ಅವಕಾಶ ಇರುವಾಗ ಇಲ್ಲಿ, ಖಾಸಗಿ ಜಾಗದಲ್ಲಿ ಬಚ್ಚಿಟ್ಟುಕೊಂಡಿದ್ದೇಕೆ ಎಂದು ಅವರು ಪ್ರಶ್ನಿಸಿದರು.

ಎಷ್ಟು ಅಧಿಕಾರಿಗಳ ಜತೆ ಏನೇನು ಮಾತುಕತೆ ಆಗಿದೆ, ಸರ್ಕಾರದ ಅಕ್ಕಿಯನ್ನು ಯಾರು ಎಲ್ಲಿ ಎಷ್ಟಕ್ಕೆ ಖರೀದಿಸಿದ್ದಾರೆ ಎಂಬುದೂ ನನಗೆ ಗೊತ್ತಿದೆ. ಈಗ ಜನರ ಆರೋಗ್ಯ ಕಾಪಾಡಿ, ಅವರ ಜೀವಗಳನ್ನು ಉಳಿಸೋಣ. ಜೀವ ಇದ್ದರೆ ನಂತರ ಉಳಿದದ್ದು. ಹೀಗಾಗಿ, ಈಗ ಆರೋಗ್ಯ ವಿಚಾರವಾಗಿ ಮಾತ್ರ ಚರ್ಚೆ ಮಾಡೋಣ ಎಂದು ಡಿಕೆಶಿ ಹೇಳಿದರು.

English summary :DKShivakumar

ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ ದೆಹಲಿ ಸಿಎಂ ಕೇಜ್ರಿವಾಲ್
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ ದೆಹಲಿ ಸಿಎಂ ಕೇಜ್ರಿವಾಲ್
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ನಟ ದರ್ಶನ್ ಜುಲೈ 4 ರವರೆಗೆ ನ್ಯಾಯಾಂಗ ಬಂಧನಕ್ಕೆ
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ನಟ ದರ್ಶನ್ ಜುಲೈ 4 ರವರೆಗೆ ನ್ಯಾಯಾಂಗ ಬಂಧನಕ್ಕೆ
ಭ್ರಷ್ಟಾಚಾರ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ ಜಾಮೀನು ಆದೇಶವನ್ನು ತಡೆಹಿಡಿದ ದೆಹಲಿ ಹೈಕೋರ್ಟ್
ಭ್ರಷ್ಟಾಚಾರ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ ಜಾಮೀನು ಆದೇಶವನ್ನು ತಡೆಹಿಡಿದ ದೆಹಲಿ ಹೈಕೋರ್ಟ್
10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
ರಾಹುಲ್ ಗಾಂಧಿ ವಿರುದ್ಧ ಹೇಳಿಕೆ : ಪತ್ರಕರ್ತ ಭಾರ್ತಿಗೆ  ಸಮನ್ಸ್ ನೀಡಲು ಬೆಂಗಳೂರಿನಿಂದ ನೋಯ್ಡಾಕ್ಕೆ ಹೋದ ಮೂವರು ಪೊಲೀಸರ ತಂಡ
ರಾಹುಲ್ ಗಾಂಧಿ ವಿರುದ್ಧ ಹೇಳಿಕೆ : ಪತ್ರಕರ್ತ ಭಾರ್ತಿಗೆ ಸಮನ್ಸ್ ನೀಡಲು ಬೆಂಗಳೂರಿನಿಂದ ನೋಯ್ಡಾಕ್ಕೆ ಹೋದ ಮೂವರು ಪೊಲೀಸರ ತಂಡ
ಪೆಟ್ರೋಲ್‌ ಡೀಸೆಲ್‌ ದರ ಏರಿಕೆ ಖಂಡಿಸಿ ಬಿಜೆಪಿ ಸೈಕಲ್‌,  ಎತ್ತಿನಗಾಡಿ ಮೇಲೇರಿ ಪ್ರತಿಭಟನೆ
ಪೆಟ್ರೋಲ್‌ ಡೀಸೆಲ್‌ ದರ ಏರಿಕೆ ಖಂಡಿಸಿ ಬಿಜೆಪಿ ಸೈಕಲ್‌, ಎತ್ತಿನಗಾಡಿ ಮೇಲೇರಿ ಪ್ರತಿಭಟನೆ
ನಗರದಲ್ಲಿ ನೀರಿನ ಶುಲ್ಕವನ್ನು ಸದ್ಯದಲ್ಲೇ ಹೆಚ್ಚಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಸೂಚನೆ
ನಗರದಲ್ಲಿ ನೀರಿನ ಶುಲ್ಕವನ್ನು ಸದ್ಯದಲ್ಲೇ ಹೆಚ್ಚಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಸೂಚನೆ
ನಳಂದ ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್ ಉದ್ಘಾಟಿಸಿದ ಪ್ರಧಾನಿ ಮೋದಿ
ನಳಂದ ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್ ಉದ್ಘಾಟಿಸಿದ ಪ್ರಧಾನಿ ಮೋದಿ
ದರ್ಶನ್ ಅರೆಸ್ಟ್ , ಘಟನೆ ಕುರಿತು ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ ರಚಿತಾ ರಾಮ್
ದರ್ಶನ್ ಅರೆಸ್ಟ್ , ಘಟನೆ ಕುರಿತು ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ ರಚಿತಾ ರಾಮ್
ರೇಣುಕಾಸ್ವಾಮಿ ಹತ್ಯೆ ಕೇಸ್ ನ ‌ ಪೋಸ್ಟ್‌ ಮಾರ್ಟಮ್  ವರದಿ, ಆಘಾತ, ಮೆದುಳು ರಕ್ತಸ್ರಾವದಿಂದ ಸ್ವಾಮಿ ಸಾವು!
ರೇಣುಕಾಸ್ವಾಮಿ ಹತ್ಯೆ ಕೇಸ್ ನ ‌ ಪೋಸ್ಟ್‌ ಮಾರ್ಟಮ್ ವರದಿ, ಆಘಾತ, ಮೆದುಳು ರಕ್ತಸ್ರಾವದಿಂದ ಸ್ವಾಮಿ ಸಾವು!
ದರ್ಶನ್ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ
ದರ್ಶನ್ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ
ಸಂಸತ್ತಿನಲ್ಲಿ ಎಲ್ಲಾ ಮೂರು ಗಾಂಧಿ ಕುಟುಂಬದ ಸದಸ್ಯರ ಉಪಸ್ಥಿತಿ ಸಾಧ್ಯತೆಗಳೆಷ್ಟು?
ಸಂಸತ್ತಿನಲ್ಲಿ ಎಲ್ಲಾ ಮೂರು ಗಾಂಧಿ ಕುಟುಂಬದ ಸದಸ್ಯರ ಉಪಸ್ಥಿತಿ ಸಾಧ್ಯತೆಗಳೆಷ್ಟು?

ನ್ಯೂಸ್ MORE NEWS...