ಯಶ್ ಗೆ ಆರೋಗ್ಯ ಇಲಾಖೆಯಿಂದ ನೋಟಿಸ್, ಯಾಕೆ ಗೊತ್ತಾ? | Filmz news
: ರಾಕಿಂಗ್ ಸ್ಟಾರ್ ಯಶ್ ಬರ್ತಡೇಗೆ ಕೆಜಿಎಫ್ ಚಾಪ್ಟರ್-2 ಟೀಸರ್ ರಿಲೀಸ್ ಆಗಿದ್ದು, ಎಲ್ಲಾ ದಾಖಲೆಗಳನ್ನು ಮುರಿದು ಯೂಟ್ಯೂಬ್ನಲ್ಲಿ ಧೂಳೆಬ್ಬಿಸ್ತಿದೆ.
ಟೀಸರ್ ಹಿಟ್ ಆದ ಸಂಭ್ರಮದಲ್ಲಿರುವ ನಟ ಯಶ್ ಗೆ ರಾಜ್ಯ ಆರೋಗ್ಯ ಇಲಾಖೆ ಶಾಕ್ ನೀಡಿದೆ.
ಕೆಜಿಎಫ್ -2 ಟೀಸರ್ ನಲ್ಲಿ ಸಿಗರೇಟ್ ಸೇವನೆ ಪ್ರಚೋದಿಸುವ ದೃಶ್ಯವಿರುವ ಹಿನ್ನೆಲೆಯಲ್ಲಿ ನಟ ಯಶ್ ಗೆ ಆರೋಗ್ಯ ಇಲಾಖೆ ನೋಟಿಸ್ ನೀಡಿದೆ.
ಟೀಸರ್ನಲ್ಲಿ ಯಶ್ ಸಿಗರೇಟ್ ಹಚ್ಚುವ ದೃಶ್ಯವಿದ್ದು, ಇದಕ್ಕೆ ಧೂಮಪಾನ ಆರೋಗ್ಯಕ್ಕೆ ಹಾನಿಕರ ಅನ್ನೋ ಸೂಚನೆ ಹಾಕಿರಲಿಲ್ಲ. ಇದು ಧೂಮಪಾನವನ್ನ ಪ್ರಚೋದಿಸುತ್ತದೆ ಹಾಗೂ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ-2003 ಸೆಕ್ಷನ್ 5ರ ಉಲ್ಲಂಘನೆಯಾಗಿದೆ. ಹೀಗಾಗಿ, ಸಿಗರೇಟ್ ಸೇದುವ ದೃಶ್ಯವನ್ನು ತೆಗೆದು ಹಾಕುವಂತೆ ಆರೋಗ್ಯ ಇಲಾಖೆ ನಟ ಯಶ್ಗೆ ನೋಟಿಸ್ ಕೊಟ್ಟಿದೆ.
ಲಕ್ಷಾಂತರ ಜನ ಯುವ ಅಭಿಮಾನಿಗಳನ್ನ ನೀವು ಹೊಂದಿದ್ದೀರಾ ಹಾಗೂ ಆ ಯುವ ಸಮುದಾಯ ನಿಮ್ಮನ್ನ ಅನುಸರಿಸುತ್ತದೆ. ಯುವ ಸಮುದಾಯ ಸಿಗರೇಟ್ ಸೇದುವ ಪ್ರಚೋದನೆಗೆ ಒಳಗಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಸಾಮಾಜಿಕ ಜಾಲತಾಣದಲ್ಲಿ ಇರುವ ಟೀಸರ್ನಲ್ಲಿ ಸಿಗರೇಟ್ ಸೇದುವ ದೃಶ್ಯ ತೆಗೆಯಿರಿ ಎಂದು ಆರೋಗ್ಯ ಇಲಾಖೆ ಸೂಚಿಸಿದೆ.