ನಿರ್ಮಾಪಕ ಹಾಗೂ ನಟಿ ಮಾಲಾಶ್ರೀ ಪತಿ ರಾಮು ವಿಧಿವಶ: ನಿಧನಕ್ಕೆ ಚಿತ್ರರಂಗ ಕಂಬನಿ | Filmz news

2021-04-27
837
Sandalwood

: ಕೋಟಿ ನಿರ್ಮಾಪಕ ಎಂದೇ ಖ್ಯಾತರಾಗಿದ್ದ ನಟಿ ಮಾಲಾಶ್ರೀ ಅವರ ಪತಿ ರಾಮು ಕೊರೋನಾದಿಂದ ಮೃತಪಟ್ಟಿದ್ದಾರೆ.

ಕಳೆದವಾರ ಸೋಂಕು ತಗಲಿದ ಅವರನ್ನು ಮೂರು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಇಂದು ಅಂತ್ಯಸಂಸ್ಕಾರ ನೆರವೇರಲಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕೋಡಿಗೆಹಳ್ಳಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಹೇಳಲಾಗಿದೆ.

ಅವರ ಸಾವಿಗೆ ಚಿತ್ರರಂಗದ ಅನೇಕ ನಟ-ನಟಿಯರು ಕಂಬನಿ ಮಿಡಿದಿದ್ದಾರೆ. ನಟ ಪುನೀತ್​, ಮಾಜಿ ಸಿಎಂ ಕುಮಾರಸ್ವಾಮಿ, ರಕ್ಷಿತಾ ಪ್ರೇಮ್​, ಮಾಜಿ ಸಿಎಂ ಕುಮಾರಸ್ವಾಮಿ. ಸಂಸದೆ ಸುಮಲತಾ ಅಂಬರೀಶ್, ಶಿವರಾಜ್ ಕುಮಾರ್, ಪುನಿತ್ ರಾಜ್ ಕುಮಾರ್, ಗಣೇಶ್, ದರ್ಶನ್, ಸುದೀಪ್, ಜಗ್ಗೇಶ್, ದುನಿಯಾ ವಿಜಯ್, ಸಾ.ರಾ. ಗೋವಿಂದು, ಶ್ರೀಮುರಳಿ, ದೇವರಾಜ್ ಸೇರಿದಂತೆ ಚಿತ್ರರಂಗದ ಅನೇಕ ತಾರೆಯರು ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.

ಕನ್ನಡದ ಖ್ಯಾತ ನಿರ್ಮಾಪಕ ರಾಮು ಅವರು ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದು ಕೇಳಿ ನನ್ನ ಮನಸ್ಸಿಗೆ ತೀವ್ರ ನೋವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಕನ್ನಡ ಚಲನಚಿತ್ರ ನಿರ್ಮಾಣದಲ್ಲಿ ಅದಮ್ಯ ಆಸಕ್ತಿ ಹೊಂದಿದ ರಾಮು ಅವರು ಇನ್ನಿಲ್ಲ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪುನೀತ್​ ರಾಜ್​ಕುಮಾರ್​ ತಿಳಿಸಿದ್ದಾರೆ.

ಈ ಹಿನ್ನೆಲೆ ಸಂತಾಪ ವ್ಯಕ್ತಪಡಿಸಿರುವ ನಟ ದರ್ಶನ್.. ರಾಮು ಕನ್ನಡ ಚಿತ್ರರಂಗದ ಹೆಮ್ಮೆಯ ನಿರ್ಮಾಪಕರಲ್ಲೊಬರು ಎಂದಿದ್ದಾರೆ. ಕನ್ನಡ ಚಿತ್ರರಂಗದ ಹೆಮ್ಮೆಯ ನಿರ್ಮಾಪಕರಲ್ಲೊಬ್ಬರು - ಕೋಟಿ ರಾಮು ರವರು ಇಂದು ನಮ್ಮನ್ನು ಅಗಲಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ತಡೆದುಕೊಳ್ಳುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ ಎಂದು ಬರೆದುಕೊಂಡಿದ್ದಾರೆ. ಅಲ್ಲದೇ.. ದಯಮಾಡಿ ಮನೆಯಲ್ಲಿರಿ. ಎಲ್ಲಾ ಸುರಕ್ಷತೆಯ ಕ್ರಮಗಳನ್ನು ಪಾಲಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.

ರಾಮು ಅವರ ಅಗಲಿಕೆಯಿಂದ ತುಂಬಾ ನೋವಾಗಿದೆ ಎಂದು ನಟ ದೊಡ್ಡಣ್ಣ ಕಣ್ಣೀರಾಕಿದ್ದಾರೆ. ರಾಮು ಮತ್ತು ತನ್ನ ಗೆಳೆತನ ಸುಮಾರು 35 ವರ್ಷಗಳದ್ದು.ಅತ್ಯಂತ ಸೌಜನ್ಯಯುತ ನಿರ್ಮಾಪಕ ಆಗಿದ್ದರು ಎಂದು ದೊಡ್ಡಣ್ಣ ಹೇಳಿದ್ದಾರೆ.

ಖ್ಯಾತ ಸಿನಿಮಾ ನಿರ್ಮಾಪಕ ರಾಮು ಅವರು ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿರುವ ಸುದ್ಧಿ ಕೇಳಿ ಮನಸ್ಸಿಗೆ ಬಹಳ ಆಘಾತವಾಯಿತು ಎಂದು ನಟ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ಖ್ಯಾತ ನಿರ್ಮಾಪಕ ರಾಮು ಸಾವಿಗೆ ಚಂದನವನದ ನಟ-ನಟಿಯರು, ಸಂಗೀತ ನಿರ್ದೇಶಕರು, ನಿರ್ದೇಶಕರು ಹಾಗೂ ಹಿರಿಯ ಕಲಾವಿದರು, ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ರಾಮು ಚಿತ್ರರಂಗಕ್ಕೆ ಕಾಲಿಟ್ಟಿದ್ದು ಕೇವಲ 21ನೇ ವಯಸ್ಸಿನಲ್ಲಿ ಎಂಬುದು ವಿಶೇಷ. ಚಿಕ್ಕ ವಯಸ್ಸಿಗೆ ದೊಡ್ಡ ಯಶಸ್ಸು ಕಂಡಿದ್ದ ರಾಮು ಸ್ಯಾಂಡಲ್​ವುಡ್​ನಲ್ಲಿ ಖ್ಯಾತ ನಿರ್ಮಾಪಕರು. ಕನ್ನಡದಲ್ಲಿ ಅವರು ಸಾಕಷ್ಟು ಸಿನಿಮಾಗಳಿಗೆ ಬಂಡವಾಳ ಹೂಡಿದ್ದಾರೆ. ಲಾಕಪ್​ಡೆತ್, AK-47, ರಾಕ್ಷಸ‌, ಕಲಾಸಿಪಾಳ್ಯ, ಅರ್ಜುನ್ ಗೌಡ ಸೇರಿ ಹಲವು ಚಿತ್ರ ನಿರ್ಮಾಣ ಮಾಡಿದ್ದರು.ಕೋಟಿ ಕೋಟಿ ರೂಪಾಯಿ ವೆಚ್ಚದಲ್ಲಿ ಅದ್ದೂರಿ ಚಿತ್ರಗಳನ್ನು ರಾಮು ನಿರ್ಮಾಣ ಮಾಡುತ್ತಿದ್ದರು. ಅವರು ಕೋಟಿ ರಾಮು ಎಂದೇ ಖ್ಯಾತರಾಗಿದ್ದರು.

English summary :Sandalwood

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ
ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ
 ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರ ನಿವಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪ್ರದಾನ
ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರ ನಿವಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪ್ರದಾನ
ಸುಮಲತಾ ಭೇಟಿಯಾಗಿ ಸಹಕಾರ ಕೋರಿದ ಕುಮಾರಸ್ವಾಮಿ!
ಸುಮಲತಾ ಭೇಟಿಯಾಗಿ ಸಹಕಾರ ಕೋರಿದ ಕುಮಾರಸ್ವಾಮಿ!

ಫೋಟೋ ಗ್ಯಾಲಾರಿ MORE PHOTO...