ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಜಯಾ ವಿಧಿವಶ! | Filmz news
: ಸ್ಯಾಂಡಲ್ವುಡ್ ಹಿರಿಯ ನಟಿ ಬಿ. ಜಯಾ ನಿಧನರಾಗಿದ್ದಾರೆ. 300 ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ ಅವರು ಹಾಸ್ಯ ಪಾತ್ರಗಳ ಮೂಲಕ ಗಮನಸೆಳೆದಿದ್ದರು.
ಕೆಲ ದಿನದಿಂದ ಜಯಾ ಅವರಿಗೆ ವಯೋಸಹಜ ಅನಾರೋಗ್ಯ ಕಾಡುತ್ತಿತ್ತು. ಹೀಗಾಗಿ ಜಯಾ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ರಂಗಭೂಮಿ ಹಿನ್ನೆಲೆಯಿಂದ ಬಂದಿದ್ದ ಬಿ. ಜಯಾ ಸಿನಿಮಾ ಜೊತೆಗೆ ಹಲವಾರು ಧಾರಾವಾಹಿಗಳಲ್ಲಿಯೂ ಅಭಿನಯಿಸಿದ್ದಾರೆ. ವರ ನಟ ಡಾ. ರಾಜಕುಮಾರ್ ಅವರ ಹೆಚ್ಚಿನ ಚಿತ್ರಗಳಲ್ಲಿ ಪೋಷಕ ಪಾತ್ರದಲ್ಲಿ ಅವರು ಅಭಿನಯಿಸಿದ್ದಾರೆ.
English summary :Sandalwood