ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಶುಭಾ ಪೂಂಜಾ! | Filmz news
: ಸ್ಯಾಂಡಲ್ ವುಡ್ ನಟಿ ಶುಭಾ ಪೂಂಜ ತಮ್ಮ ಬಹುಕಾಲದ ಗೆಳೆಯ ಸುಮಂತ್ ಮಹಾಬಲ ಅವರೊಂದಿಗೆ ಬುಧವಾರ ಉಡುಪಿ ಹತ್ತಿರದ ಮಜಲಬೆಟ್ಟು ಬೀಡುವಿನಲ್ಲಿ ಸರಳವಾಗಿ ವಿವಾಹವಾಗಿದ್ದಾರೆ.
ಶುಭ ಪುಂಜಾ ಹುಟ್ಟೂರಾದ ಉಡುಪಿ ಜಿಲ್ಲೆಯ ಶಿರ್ವಾ ಗ್ರಾಮದಲ್ಲಿ ಗುರು ಹಿರಿಯರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ತಾನು ಪ್ರೀತಿಸುತ್ತಿದ್ದ ಸುಮಂತ್ ಮಹಾಬಲ ಅವರ ಜತೆಯೇ ಶುಭಾ ಸರಳವಾಗಿ ಮದುವೆ ಆಗಿದ್ದು, ಆ ಕ್ಷಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದಾರೆ.
ಮದುವೆಯ ಫೋಟೋವೊಂದನ್ನು ಇನ್ಸ್ಟಾಗ್ರಾಂನಲ್ಲಿ ಹಾಕಿಕೊಡಿರುವ ಶುಭಾ, ಇಂದು ನಾನು ಮತ್ತು ಸುಮಂತ್ ಮಹಾಬಲ ಇಬ್ಬರೂ ಗುರು-ಹಿರಿಯರು ಮತ್ತು ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ನಮ್ಮ ಊರು ಮಜಲಬೆಟ್ಟುಬೀಡುವಿನಲ್ಲಿ ಸರಳ ವಿವಾಹ ಮಾಡಿಕೊಂಡೆವು. ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆ ನಮ್ಮ ಮೇಲಿರಲಿ ಎಂದು ಬರೆದುಕೊಂಡಿದ್ದಾರೆ.
English summary :shubha punja