ಬಸ್ -ಆಟೋ ನಡುವೆ ಡಿಕ್ಕಿ: ಬಾಲಕಿ ಸ್ಥಳದಲ್ಲೇ ಸಾವು | JANATA NEWS

ತುಮಕೂರು : ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಆಟೋ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಹೊಸಹಳ್ಳಿ (ಗೇರೆಹಳ್ಳಿ) ಬಳಿ ನಡೆದಿದೆ.
ತುಮಕೂರಿನಿಂದ ಕೊರಟಗೆರೆ ಕಡೆಹೊಗುತ್ತಿದ್ದ ಕೆ.ಎಸ್.ಆರ್ ಟಿ.ಸಿ ಬಸ್ ಮತ್ತು ಕೊರಟಗೆರೆಯಿಂದ ತುಮಕೂರು ಕಡೆಗೆ ಬರುತ್ತಿದ್ದ ಆಟೋರಿಕ್ಷಾ ನಡುವೆ ಈ ಭೀಕರ ಅಪಘಾತ ಸಂಭವಿಸಿ, ಓರ್ವ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತಿಬ್ಬರಿಗೆ ಗಾಯಗಳಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಆಟೋದಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಇಬ್ಬರು ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆ ಗೆ ದಾಖಲು ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಗ್ರಾಮಾಂತರ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
English summary :Collision between bus-auto, Girl killed on the spot