ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ | JANATA NEWS

ಪ್ರಯಾಗರಾಜ : ಕೇಂದ್ರ ಜಲಶಕ್ತಿ ಸಚಿವಾಲಯ ಮತ್ತು ರೈಲ್ವೆ ಸಚಿವಾಲಯದ ರಾಜ್ಯ ಸಚಿವರು ಹಾಗೂ ತುಮಕೂರು ಲೋಕಸಭಾ ಕ್ಷೇತ್ರದ ಸಂಸದರು ಆಗಿರುವ ವಿ.ಸೋಮಣ್ಣ ಅವರು ಪ್ರಯಾಗರಾಜದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ತೀರ್ಥಸ್ನಾನ ಮಾಡಿದ್ದಾರೆ.
ಈ ಕುರಿತು ಮಾತನಾಡಿರುವ ಸೋಮಣ್ಣ ಅವರು, "ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ-ಸಾಂಸ್ಕೃತಿಕ ಸಂಗಮವಾದ ಪ್ರಯಾಗರಾಜ್ ಮಹಾಕುಂಭಮೇಳದಲ್ಲಿಂದು ಪಾಲ್ಗೊಂಡು, ಧರ್ಮಪತ್ನಿ ಶ್ರೀಮತಿ ಶೈಲಜಾ ಸೋಮಣ್ಣ ಅವರೊಂದಿಗೆ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಾಯಿತು."
"144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳದಲ್ಲಿ ಭಾಗವಹಿಸುತ್ತಿರುವುದೇ ನಮ್ಮ ಜೀವಿತಾವಧಿಯ ಪುಣ್ಯ ಎನ್ನಲು ಹೆಮ್ಮೆಯೆನಿಸುತ್ತದೆ. ಧಾರ್ಮಿಕ, ಸಾಂಸ್ಕೃತಿಕವಾಗಿ ಜಗದ್ವಿಖ್ಯಾತವಾದ ಈ ಆಚರಣೆಯ ಪುಣ್ಯದಿಂದ ಲೋಕಕಲ್ಯಾಣವಾಗಲಿ ಎಂದು ಪ್ರಾರ್ಥಿಸುತ್ತೇನೆ.", ಎಂದು ಅವರ ಎಕ್ಸ್ ಪೋಸ್ಟ್ ಒಂದರಲ್ಲಿ ಹಂಚಿಕೊಂಡಿದ್ದಾರೆ.