Wed,May22,2024
ಕನ್ನಡ / English

ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ: ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಸವಾಲು | Janata news

28 Sep 2020
1108

ಬೆಂಗಳೂರು : ಚುನಾವಣಾ ಪ್ರಣಾಳಿಕೆಯಲ್ಲಿ ಹೇಳದೆ ಇರುವ ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರಕ್ಕೆ ಯಾವ ನೈತಿಕತೆಯೂ ಇಲ್ಲ.

ಈ ತಿದ್ದುಪಡಿಗಳಿಂದ ರೈತರ ಕಲ್ಯಾಣವಾಗುತ್ತದೆ ಎಂಬ ಭರವಸೆ ಇದ್ದರೆ ಬಿ.ಎಸ್.ಯಡಿಯೂರಪ್ಪನವರು ಮೊದಲು ವಿಧಾನಸಭೆಯನ್ನು ವಿಸರ್ಜಿಸಿ ಇದೇ ವಿಷಯವನ್ನು ರಾಜ್ಯದ ಜನತೆಯ ಮುಂದಿಟ್ಟು ಚುನಾವಣೆಯನ್ನು ಎದುರಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೋನಾ ಸಂಕಷ್ಟದ ಸಮಯದಲ್ಲಿ ಈ ಕಾಯ್ದೆ ಜಾರಿಗೆ ತಂದರೆ ರೈತರು ಬೀದಿಗೆ ಬರಲಾರರು ಎಂಬ ಭ್ರಮೆ ನಿಮಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಷಾಮೀಲಾಗಿ ರೈತ ವಿರೋಧಿ ಮಸೂದೆಗಳನ್ನ ತರಾತುರಿಯಲ್ಲಿ ಜಾರಿಗೆ ತರಲು ಹೊರಟಿವೆ. ಆದರೆ, ಇಂದು ಇಡೀ ದೇಶದ ರೈತರು ಪ್ರಾಣವನ್ನು ಲೆಕ್ಕಿಸದೆ ಬೀದಿಗೆ ಇಳಿದು ಹೋರಾಟ ಮಾಡಿದ್ದಾರೆ. ಈ ಮೂಲಕ ಬಿಜೆಪಿಯ ಹುನ್ನಾರವನ್ನು ವಿಫಲಗೊಳಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಮಾತುಮಾತಿಗೆ ತಾನು ರೈತ ನಾಯಕನೆಂದು ಕರೆದುಕೊಳ್ಳುತ್ತಾರೆ. ಸಂಘ ಪರಿವಾರದ ಕೇಸರಿಶಾಲು ಕಿತ್ತುಹಾಕಿ ಹಸಿರು ಶಾಲು ಹೊದ್ದುಕೊಂಡು ಮುಖ್ಯಮಂತ್ರಿಯ ಪ್ರಮಾಣ ವಚನ ಸ್ವೀಕರಿಸಿದರು. ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ಹಸಿರು ಶಾಲಿನ ಒಳಗಿದ್ದ ರೈತ ವಿರೋಧಿ ಕೇಸರಿ ಶಾಲು ಹೊರಗೆ ಬಂದಿದೆ ಎಂದು ವ್ಯಂಗ್ಯವಾಡಿದ್ದಾರೆ.

ಭಾರತೀಯ ಜನತಾ ಪಕ್ಷ ಹುಟ್ಟಿನಿಂದಲೇ ರೈತ ವಿರೋಧಿ. ಅದು ಬಂಡವಾಳಿಗರು,ಉದ್ಯಮಿಗಳು ಮತ್ತು ವರ್ತಕರ ಪಕ್ಷ. ಈ ಪಕ್ಷದ ಡಿಎನ್ ಎನಲ್ಲಿಯೇ ರೈತ ವಿರೋಧಿ ವಿಷ ಇದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಕಾವೇರಿ-ಕೃಷ್ಣ ನದಿನೀರು ಹಂಚಿಕೆಯಲ್ಲಿ ದ್ರೋಹ ಎಸಗಿತು, ಮಹದಾಯಿ-ಮೇಕೆದಾಟು ಯೋಜನೆಗಳಲ್ಲಿ ಮೋಸ ಮಾಡಿದೆ, ಬೀಜ-ರಸಗೊಬ್ಬರ ಪೂರೈಕೆ ಮಾಡದೆ ರೈತರನ್ನು ಗೋಳುಹೊಯ್ಕೊಳ್ಳುತ್ತಾ ಇದೆ.
ಬಿಜೆಪಿಗೆ ಯಾಕೆ ರೈತರ ಮೇಲೆ ಇಷ್ಟೊಂದು ದ್ವೇಷ? ಕರ್ನಾಟಕದ ಬಗ್ಗೆ ಯಾಕೆ ಸೇಡಿನ ಭಾವನೆ? ಎನ್ನುವ ಪ್ರಶ್ನೆಗೆ ರಾಜ್ಯದ ಜನತೆಗೆ ಈಗ ಉತ್ತರ ಸಿಕ್ಕಿದೆ ಎಂದಿದ್ದಾರೆ.

ಯಡಿಯೂರಪ್ಪನವರು ನಿಜವಾಗಿಯೂ ರೈತರ ಪರವಾಗಿದ್ದರೆ ಮೊದಲು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ರೈತರ ಜೊತೆ ನಿಂತುಕೊಳ್ಳಬೇಕು ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

English summary :Siddaramaiah

ಪುಣೆ ಪೋರ್ಶೆ ಕಾರು ಅಪಘಾತ : ಪ್ರಬಂಧ ಬರೆಯುವ ಶಿಕ್ಷೆಯೊಂದಿಗೆ ಯುವಕನಿಗೆ ಜಾಮೀನು, ತಂದೆಯ ಬಂಧನ
ಪುಣೆ ಪೋರ್ಶೆ ಕಾರು ಅಪಘಾತ : ಪ್ರಬಂಧ ಬರೆಯುವ ಶಿಕ್ಷೆಯೊಂದಿಗೆ ಯುವಕನಿಗೆ ಜಾಮೀನು, ತಂದೆಯ ಬಂಧನ
ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ನ್ಯೂಸ್ MORE NEWS...