Sat,May18,2024
ಕನ್ನಡ / English

ಮಧ್ಯವರ್ತಿಗಳ ಲಾಬಿ ಕಾಪಾಡಲು ಪ್ರತಿಭಟನೆ :ರೈತಪರ ಯೋಜನೆ ವಿವರಿಸಿದ ಕೇಂದ್ರ ಸಚಿವ ಡಿ.ವಿ.ಎಸ್.ಗೌಡ | Janata news

02 Oct 2020
1067

ಬೆಂಗಳೂರು : ರೈತರ ಆದಾಯವನ್ನು ಹೆಚ್ಚಿಸುವಲ್ಲಿ ತೊಡಕಾಗಿದ್ದ ಕೃಷಿ ಸಂಬಂಧಿ ಕಾನೂನುಗಳನ್ನು ಪರಿಷ್ಕರಿಸುವ ಮೂಲಕ ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಹೊಸ ಕೃಷಿ ಸುಧಾರಣಾ ಕಾಯ್ದೆಗಳನ್ನು ಜಾರಿ ಮಾಡಿದೆ, ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಅವರು ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ರೈತರ(ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಒಪ್ಪಂದ ಕಾಯ್ದೆಯು ರೈತರು ಸ್ವಾವಲಂಬನೆ ಸಾಧಿಸುವಲ್ಲಿ ಪ್ರಮುಖ ಹೆಜ್ಜೆಯಾಗಿದೆ. ಈ ಕಾಯ್ದೆಯ ಅನುಸಾರ, ರೈತರು ಸಂಸ್ಕರಣಾ ಘಟಕಗಳು, ಸಗಟು ವ್ಯಾಪಾರಿಗಳು, ದೊಡ್ಡ ಚಿಲ್ಲರೆ ವ್ಯಾಪಾರಿಗಳು, ರಫ್ತುದಾರರೊಂದಿಗೆ ತೊಡಗಿಸಿಕೊಳ್ಳಲು ಅಧಿಕಾರ ನೀಡುತ್ತದೆ, ಎಂದು ಅವರು ತಿಳಿಸಿದ್ದಾರೆ.

ಭಾರತವು ಆಹಾರದ ಕೊರತೆ ಎದುರಿಸುತ್ತಿದ್ದ ಕಾಲದಲ್ಲಿ ರೂಪಿತವಾದ ಕಾನೂನುಗಳು ರೈತರರಿಗೆ ನೆರವಾಗುವ ಬದಲು ಸಂಕೋಲೆಗಳಾಗಿದ್ದವು. ಆರ್ಥಿಕ ಉದಾರೀಕರಣದ ಲಾಭವನ್ನು ಕೈಗಾರಿಕೆಗಳೂ ಸೇರಿದಂತೆ ಇತರ ವಲಯಗಳು ಪಡೆದವು. ಆದರೆ, ಕಾನೂನುಗಳ ತೊಡಕಿನಿಂದಾಗಿ ಕೃಷಿ ಕ್ಷೇತ್ರಕ್ಕೆ ಮಾತ್ರ ಇದರ ಲಾಭ ದೊರಕಲಿಲ್ಲ. ಈ ತೊಡಕುಗಳನ್ನು ನಿವಾರಿಸಿ ಕೃಷಿ ವಲಯದ ಆಮೂಲಾಗ್ರ ಸುಧಾರಣೆಗಾಗಿ ಹೊಸ ಕೃಷಿ ಸುಧಾರಣಾ ಕಾಯ್ದೆಗಳನ್ನು ತರಲಾಗಿದೆ. ದಶಕಗಳಿಂದ ಸಂಕೋಲೆಯಲ್ಲಿದ್ದ ರೈತರನ್ನು ಬಂಧಮುಕ್ತಗೊಳಿಸಲಾಗಿದೆ, ಎಂದು ಹೇಳಿದರು.

ದೇಶದ ಕೃಷಿ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆ ಹಾಗೂ ರೈತರ ಆದಾಯವನ್ನು ದುಪ್ಪಟ್ಟು ಮಾಡುವ ಉದ್ದೇಶದಿಂದ ಸರ್ಕಾರವು ಕಳೆದ ಆರು ವರ್ಷಗಳಲ್ಲಿ ಅನೇಕ ರೈತ ಪರ ಯೋಜನೆಗಳನ್ನು ಜಾರಿ ಮಾಡಿದೆ. ಕನಿಷ್ಠ ಬೆಂಬಲ ಬೆಲೆಗಳ ಹೆಚ್ಚಳ, ಕಿಸಾನ್ ಕಾರ್ಡ್, ಮಣ್ಣಿನ ಆರೋಗ್ಯ ಕಾರ್ಡ್, ಇ-ನ್ಯಾಮ್ ಡಿಜಿಟಲ್ ಮಾರುಕಟ್ಟೆ ವೇದಿಕೆ, ಪಿಎಂ-ಕಿಸಾನ್ ಅಡಿ ಪ್ರತಿ ರೈತರಿಗೆ ವರ್ಷಕ್ಕೆ 6 ಸಾವಿರ ನಗದು ಬೆಂಬಲ, ರೈತರ ಪಿಂಚಣಿ, ಬೆಳೆ ವಿಮೆ, ಕಡಿಮೆ ಬಡ್ಡಿದರದಲ್ಲಿ ಸಾಲ, ಸಕಾಲಕ್ಕೆ ರಸಗೊಬ್ಬರ ಪೂರೈಕೆ ಹಾಗೂ ಕೃಷಿ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಒಂದು ಲಕ್ಷ ಕೋಟಿ ರೂ.- ಹೀಗೆ ಸರ್ಕಾರವು ಅನೇಕ ರೈತ ಪರ ಯೋಜನೆಗಳನ್ನು ಜಾರಿ ಮಾಡಿದೆ, ಎಂದು ಸಚಿವರು ಹೇಳಿದರು.

ಹೊಸ ಕಾಯ್ದೆಗಳಿಂದಾಗಿ ರೈತರಿಗೆ ಕೃಷಿ ಉತ್ಪನ್ನಗಳ ಮಾರಾಟದ ಸ್ವಾತಂತ್ರ್ಯ ದೊರೆಯುತ್ತದೆ. ಇದು ರಾಜ್ಯ ಕೃಷಿ ಉತ್ಪಾದನಾ ಮಾರುಕಟ್ಟೆ ಕಾಯ್ದೆಗಳ ಅಡಿಯಲ್ಲಿ ಬರುವ ಮಾರುಕಟ್ಟೆಗಳ ಆವರಣದ ಹೊರಗೆ ತಡೆ ರಹಿತ, ರಾಜ್ಯ ಮತ್ತು ಅಂತರ್-ರಾಜ್ಯ ವ್ಯಾಪಾರ ಮತ್ತು ವಾಣಿಜ್ಯಕ್ಕೆ ಉತ್ತೇಜನ ನೀಡುತ್ತದೆ. ಉತ್ಪನ್ನಗಳನ್ನು ಮಾರಾಟ ಮಾಡಲು ರೈತರಿಗೆ ಯಾವುದೇ ಸೆಸ್ ಅಥವಾ ಲೆವಿ ವಿಧಿಸಲಾಗುವುದಿಲ್ಲ. ವಿದ್ಯುನ್ಮಾನವಾಗಿ ತಡೆರಹಿತ ವ್ಯಾಪಾರವನ್ನು ಖಾತ್ರಿಪಡಿಸಿಕೊಳ್ಳಲು ಎಲೆಕ್ಟ್ರಾನಿಕ್ ವಹಿವಾಟಿಗೆ ಅವಕಾಶ ಕಲ್ಪಿಸುತ್ತದೆ. ಜೊತೆಗೆ, ಜಮೀನಿನಲ್ಲಿ (ಫಾರ್ಮ್‌ಗೇಟ್), ಕೋಲ್ಡ್ ಸ್ಟೋರೇಜ್, ಗೋದಾಮು, ಸಂಸ್ಕರಣಾ ಘಟಕಗಳಲ್ಲಿ ವ್ಯಾಪಾರ ಮಾಡುವ ಸ್ವಾತಂತ್ರ್ಯ ದೊರೆಯುತ್ತದೆ. ರೈತರು ನೇರವಾಗಿ ವ್ಯಾಪಾರೋದ್ಯಮದಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ. ಇದರಿಂದಾಗಿ ಮಧ್ಯವರ್ತಿಗಳ ಹಾವಳಿ ನಿರ್ಮೂಲನೆಯಾಗಿ, ರೈತರಿಗೆ ಸೂಕ್ತ ಬೆಲೆ ದೊರೆಯುತ್ತದೆ, ಎಂದು ಅವರು ತಿಳಿಸಿದರು.

ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಒಪ್ಪಂದ ಕಾಯ್ದೆಯು ರೈತರು ಸ್ವಾವಲಂಬನೆ ಸಾಧಿಸುವಲ್ಲಿ ಪ್ರಮುಖ ಹೆಜ್ಜೆಯಾಗಿದೆ. ಈ ಕಾಯ್ದೆಯ ಅನುಸಾರ, ರೈತರು ಸಂಸ್ಕರಣಾ ಘಟಕಗಳು, ಸಗಟು ವ್ಯಾಪಾರಿಗಳು, ದೊಡ್ಡ ಚಿಲ್ಲರೆ ವ್ಯಾಪಾರಿಗಳು, ರಫ್ತುದಾರರೊಂದಿಗೆ ತೊಡಗಿಸಿಕೊಳ್ಳಲು ಅಧಿಕಾರ ನೀಡುತ್ತದೆ. ಬೆಳೆಗಳ ಬಿತ್ತನೆಗೂ ಮೊದಲೇ ರೈತರಿಗೆ ಬೆಲೆಯ ಭರವಸೆ ದೊರೆಯುತ್ತದೆ. ಇದು ಮಾರುಕಟ್ಟೆಯ ಅನಿಶ್ಚಿತತೆಯ ಅಪಾಯವನ್ನು ರೈತನಿಂದ ಪ್ರಾಯೋಜಕರಿಗೆ ವರ್ಗಾಯಿಸುತ್ತದೆ. ಮುಂಚೆಯೇ ಬೆಲೆ ನಿರ್ಣಯಿಸುವುದರಿಂದ, ಮಾರುಕಟ್ಟೆ ಬೆಲೆಗಳ ಏರಿಳಿತಗಳಿಂದ ರೈತರಿಗೆ ರಕ್ಷಣೆ ನೀಡುತ್ತದೆ. ಆಧುನಿಕ ತಂತ್ರಜ್ಞಾನ, ಉತ್ತಮ ಬೀಜ ಮತ್ತು ಇತರ ಸೌಲಭ್ಯಗಳನ್ನು ಪಡೆಯಲು ರೈತನಿಗೆ ಅನುವು ಮಾಡಿಕೊಡುತ್ತದೆ. ಇದು ಮಾರುಕಟ್ಟೆ ವೆಚ್ಚವನ್ನು ಕಡಿಮೆ ಮಾಡುತ್ತದೆ ಮತ್ತು ರೈತರ ಆದಾಯವನ್ನು ಹೆಚ್ಚಿಸುತ್ತದೆ. ವಿವಾದಗಳ ಪರಿಹಾರಕ್ಕಾಗಿ ಸ್ಪಷ್ಟ ಕಾಲಮಿತಿಯೊಳಗೆ ಪರಿಣಾಮಕಾರಿ ವ್ಯವಸ್ಥೆಯನ್ನು ಒದಗಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಹೊಸ ತಂತ್ರಜ್ಞಾನಕ್ಕೆ ಉತ್ತೇಜನ ದೊರೆಯುತ್ತದೆ, ಎಂದು ಸಚಿವರು ಹೇಳಿದರು.

ಅಗತ್ಯ ಸರಕುಗಳ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ, ಏಕದಳ, ದ್ವಿದಳ ಧಾನ್ಯಗಳು, ಆಲೂಗಡ್ಡೆ, ಈರುಳ್ಳಿ ಮುಂತಾದ ಬೆಳೆಗಳ ಸಾಗಣೆ ಮೇಲಿನ ನಿರ್ಬಂಧಗಳನ್ನು ತೆಗೆದು ಹಾಕಲಾಗಿದೆ ಎಂದು ಅವರು ಹೇಳಿದರು. ಇದರಿಂದಾಗಿ ವಿವಿಧ ರಾಜ್ಯಗಳ ವಿವಿಧ ಬೆಳೆಗಳ ಬೇಡಿಕೆ ಮತ್ತು ಪೂರೈಕೆಯಲ್ಲಿ ಸಮತೋಲನ ಉಂಟಾಗುತ್ತದೆ. ಬೆಲೆಯಲ್ಲಿ ಸ್ಥಿರತೆ ಇರಲಿದೆ. ಆಹಾರ ುದ್ಯಮಗಳ ಬೆಳವಣಿಗೆಗೆ ಉತ್ತೇಜನ ದೊರೆಯಲಿದ್ದು, ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ, ಎಂದು ಕೇಂದ್ರ ಸಚಿವರು ತಿಳಿಸಿದರು.

ಕೃಷಿ ಕಾಯ್ದೆಗಳಲ್ಲಿ ಋಣಾತ್ಮಕ ಅಂಶಗಳನ್ನು ಕಂಡುಹಿಡಿಯಲಾಗದ ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳು ಸುಳ್ಳು ಮಾಹಿತಿಯನ್ನು ಪ್ರಚಾರ ಮಾಡಿ, ರೈತರನ್ನು ದಾರಿ ತಪ್ಪಿಸುತ್ತಿವೆ, ಎಂದು ಶ್ರೀ ಸದಾನಂದ ಗೌಡ ಆರೋಪಿಸಿದರು.

ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿ ನಿಲ್ಲುತ್ತದೆ, ಎಪಿಎಂಸಿ ಮಂಡಿಗಳ ಹೊರಗೆ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಿದರೆ ಎಪಿಎಂಸಿಗಳು ಮುಚ್ಚುತ್ತವೆ, ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಇವೆಲ್ಲವೂ ರೈತರಲ್ಲಿ ಗೊಂದಲಗಳನ್ನು ಸೃಷ್ಟಿಸುವ ಸುಳ್ಳು ತಂತ್ರಗಳು. ಕನಿಷ್ಠ ಬೆಂಬಲ ಬೆಲೆಯ ಖರೀದಿ ಮುಂದುವರಿಯುತ್ತದೆ ಎಂದು ಸ್ವತಃ ಪ್ರಧಾನಿ ಮೋದಿಯವರೇ ಸ್ಪಷ್ಟಪಡಿಸಿದ್ದಾರೆ. ಇದನ್ನು ಪುಷ್ಟೀಕರಿಸಲು 2021-22ನೇ ಸಾಲಿನ ಮಾರುಕಟ್ಟೆ ಹಂಗಾಮಿಗೆ ಎಲ್ಲಾ ರಾಬಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು ಹೆಚ್ಚಿಸಲು ಸಂಪುಟ ಸಭೆಯು ಅನುಮೋದನೆಯನ್ನೂ ನೀಡಿದೆ. ಇನ್ನು ಎಪಿಎಂಸಿಗಳು ರಾಜ್ಯಗಳಡಿ ಬರುವ ವ್ಯವಸ್ಥೆ. ಎಪಿಎಂಸಿ ಮಂಡಿಗಳನ್ನು ಮುಚ್ಚಲಾಗುವುದಿಲ್ಲ. ಬದಲಿಗೆ ರೈತರು ತಮ್ಮ ಉತ್ಪನ್ನಗಳನ್ನು ಮಂಡಿಗಳ ಜೊತೆಗೆ ಇತರ ಸ್ಥಳಗಳಲ್ಲಿಯೂ ಮಾರಾಟ ಮಾಡುವ ಆಯ್ಕೆಯ ಸ್ವಾತಂತ್ರ್ಯವನ್ನು ಪಡೆಯುತ್ತಾರೆ, ಎಂದು ಅವರು ತಿಳಿಸಿದರು.

ಗುತ್ತಿಗೆ ಕೃಷಿಯಡಿಯಲ್ಲಿ, ರೈತರು ಒತ್ತಡಕ್ಕೆ ಒಳಗಾಗುತ್ತಾರೆ. ಅವರ ಜಮೀನು ದೊಡ್ಡ ಕಂಪನಿಗಳ ಪಾಲಾಗುತ್ತದೆ. ಸಣ್ಣ ರೈತರು ಗುತ್ತಿಗೆ ಕೃಷಿಯನ್ನು ಮಾಡಲು ಸಾಧ್ಯವಾಗುವುದಿಲ್ಲ, ಎಂದು ಪ್ರತಿಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ಆದರೆ ವಾಸ್ತವದಲ್ಲಿ ಆಗುವುದೇ ಬೇರೆಯಾಗಿದೆ. ರೈತರ ಭೂಮಿಯ ಮಾರಾಟ, ಗುತ್ತಿಗೆ ಅಥವಾ ಅಡಮಾನವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ರೈತರು ಒಪ್ಪಂದದಿಂದ ಯಾವುದೇ ಸಮಯದಲ್ಲೂ, ಯಾವುದೇ ದಂಡವಿಲ್ಲದೆ ಹಿಂದೆ ಸರಿಯಬಹುದು. ಖಾಸಗಿಯವರು ಒಪ್ಪಂದವನ್ನು ಏಕಪಕ್ಷೀಯವಾಗಿ ರದ್ದುಮಾಡಲು ಸಾಧ್ಯವಿಲ್ಲ, ಇದರಿಂದಾಗಿ ಎಲ್ಲಾ ಆಯಾಮಗಳಲ್ಲೂ ರೈತರಿಗೆ ಸಂಪೂರ್ಣ ರಕ್ಷಣೆ ನೀಡಲಾಗಿದೆ, ಎಂದು ಅವರು ಹೇಳಿದರು.

ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯು ಮಧ್ಯವರ್ತಿಗಳ ಲಾಬಿಯನ್ನು ಕಾಪಾಡಲು ಕೆಲವು ರಾಜಕೀಯ ಹಿತಾಸಕ್ತಿಗಳ ಮತ್ತೊಂದು ಹತಾಶ ಪ್ರಯತ್ನವಾಗಿದೆ. ಆದರೆ ಇಂದು ಮಸೂದೆಗಳನ್ನು ವಿರೋಧಿಸುತ್ತಿರುವವ ರಾಜಕೀಯ ಪಕ್ಷಗಳು ಹಿಂದೆ ಇದೇ ಸುಧಾರಣೆಗಳ ಪರವಾಗಿ ಪ್ರತಿಪಾದಿಸಿದ್ದವು ಎಂಬುದನ್ನು ಮರೆಯಬಾರದು. ವಾಸ್ತವವಾಗಿ, ಕಾಂಗ್ರೆಸ್ ತನ್ನ 2019 ರ ಚುನಾವಣಾ ಪ್ರಣಾಳಿಕೆಯಲ್ಲಿ ಎಪಿಎಂಸಿ ಕಾಯ್ದೆಯಲ್ಲಿ ಸುಧಾರಣೆಗಳನ್ನು ತರುವ ಭರವಸೆ ನೀಡಿತ್ತು. ಆದರೆ ರಾಜಕೀಯ ಕಾರಣಗಳಿಂದಾಗಿ ಈಗ ತಾವೇ ನೀಡಿದ್ದ ಭರವಸೆಗಳನ್ನು ಅವರು ವಿರೋಧಿಸುತ್ತಿದ್ದಾರೆ, ಎಂದು ಸಚಿವರು ದೂರಿದರು.

ಇದು ಮಾಹಿತಿ ಯುಗ. ಸತ್ಯವನ್ನು ಮುಚ್ಚಿಡಲು ಸಾಧ್ಯವಿಲ್ಲ. ಆದ್ದರಿಂದ ತಪ್ಪು ಮಾಹಿತಿ ಪ್ರಚಾರ ಮಾಡದಂತೆ ನಾನು ವಿರೋಧ ಪಕ್ಷಗಳಿಗೆ ವಿನಮ್ರವಾಗಿ ಸಲಹೆ ನೀಡುತ್ತೇನೆ. ನಮ್ಮ ರೈತರು ಪಟ್ಟಭದ್ರ ಹಿತಾಸಕ್ತಿಗಳ ಅಪಪ್ರಚಾರಕ್ಕೆ ಬಲಿಯಾಗುವುದಿಲ್ಲ ಎಂದು ನನಗೆ ಖಾತ್ರಿಯಿದೆ, ನಾವೆಲ್ಲರೂ ರೈತ ಕುಟುಂಬಗಳಿಂದ ಬಂದವರು. ಈಗ ರೈತ ಕುಟುಂಬಗಳಲ್ಲಿ ಹೆಚ್ಚಿನವರು ಕಲಿತವರಿದ್ದಾರೆ. ಕಾಯ್ದೆಗಳ ಬಗ್ಗೆ ರೈತರಿಗೆ ಅವರು ಸೂಕ್ತ ಮಾಹಿತಿ ನೀಡಬೇಕು ಎಂದು ಸಚಿವ ಶ್ರೀ ಸದಾನಂದ ಗೌಡ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಕರ್ನಾಟಕದ ಕೃಷಿ ಸಚಿವ ಶ್ರೀ ಬಿ ಸಿ ಪಾಟೀಲ್ ಉಪಸ್ಥಿತರಿದ್ದರು.

ಅಗತ್ಯ ಸರಕುಗಳ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ, ಏಕದಳ, ದ್ವಿದಳ ಧಾನ್ಯಗಳು, ಆಲೂಗಡ್ಡೆ, ಈರುಳ್ಳಿ ಮುಂತಾದ ಬೆಳೆಗಳ ಸಾಗಣೆ ಮೇಲಿನ ನಿರ್ಬಂಧಗಳನ್ನು ತೆಗೆದು ಹಾಕಲಾಗಿದೆ, ಎಂದು ಅವರು ಹೇಳಿದರು. ಇದರಿಂದಾಗಿ ವಿವಿಧ ರಾಜ್ಯಗಳ ವಿವಿಧ ಬೆಳೆಗಳ ಬೇಡಿಕೆ ಮತ್ತು ಪೂರೈಕೆಯಲ್ಲಿ ಸಮತೋಲನ ಉಂಟಾಗುತ್ತದೆ, ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆಂದು ಪಿಬಿಐ ಪ್ರಕಟಿಸಿದೆ.

English summary :Protests are to safe guard brokers : Pro farmer bill explained by Union Min. DVS Gowda

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...