ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿರುವ ನಿವಾಸದಲ್ಲಿ, ಸುರೇಶ್ ಅಂಗಡಿ ಅವರ ತಾಯಿ ಸೋಮವ್ವ, ಪತ್ನಿ ಮಂಗಳಾ,"/>
Sun,May19,2024
ಕನ್ನಡ / English

ಒಬ್ಬ ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ! ಸುರೇಶ್ ಅಂಗಡಿ ನಿವಾಸಕ್ಕೆ ಮುಖ್ಯಮಂತ್ರಿ ಭೇಟಿ: ಯಡಿಯೂರಪ್ಪ! | Janata news

07 Oct 2020
790

ಬೆಳಗಾವಿ : ನಿಧನರಾದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಬೆಳಗಾವಿಯ ನಿವಾಸಕ್ಕೆ ಬುಧವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿರುವ ನಿವಾಸದಲ್ಲಿ, ಸುರೇಶ್ ಅಂಗಡಿ ಅವರ ತಾಯಿ ಸೋಮವ್ವ, ಪತ್ನಿ ಮಂಗಳಾ, ಪುತ್ರಿಯರಾದ ಶ್ರದ್ಧಾ, ಸ್ಫೂರ್ತಿ ಅವರೊಂದಿಗೆ ಮಾತನಾಡಿ ಸಾಂತ್ವನ ಹೇಳಿದರು.

ಸುರೇಶ್ ಅಂಗಡಿ ಇಲ್ಲ ಎನ್ನುವುದನ್ನು ಕಲ್ಪನೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಒಬ್ಬ ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ ಎಂದು ಅಂಗಡಿ ಅವರ ಜೊತೆಗಿನ ನೆನಪುಗಳನ್ನ ನೆನಪಿಸಿಕೊಂಡಿದ್ದಾರೆ.

ಸುರೇಶ್ ಅಂಗಡಿ ಈ ಬಾರಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಉತ್ತಮ ಕೆಲಸ ಮಾಡುತ್ತಿದ್ದರು. ಅವರ ನಿಧನ ಈಗಲೂ ಅರಗಿಸಿಕೊಳ್ಳಲು ಆಗುತ್ತಿಲ್ಲ. ಅಂಗಡಿಯವರ ಅಂತ್ಯಕ್ರಿಯೆಯನ್ನು ದೆಹಲಿಯಲ್ಲಿ ನೆರವೇರಿಸಲಾಗಿದೆ. ಅದೇ ಸ್ಥಳದಲ್ಲಿ ಸ್ಮಾರಕ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಇದ್ದರು.

RELATED TOPICS:
English summary :BSYediyurappa

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...