Sun,May19,2024
ಕನ್ನಡ / English

ರಾಜಸ್ಥಾನ : ದೇವಾಲಯದ ಭೂ ಕಬಳಿಕೆ ವಿರೋಧಿಸಿದ ಅರ್ಚಕನನ್ನು ಜೀವಂತ ಸುಟ್ಟು ಕೊಂದರು | Janata news

09 Oct 2020
834

ಕರೌಲಿ : ದೇವಾಲಯದ ಭೂ ಕಬಳಿಕೆ ವಿರೋಧಿಸಿದ ದೇವಾಲಯದ ಅರ್ಚಕರೊಬ್ಬರನ್ನು ಕೆಲವು ದುಷ್ಕರ್ಮಿಗಳು ಸೇರಿ ಜೀವಂತವಾಗಿ ಸುಟ್ಟುಹಾಕಿದ ಅಮಾನವೀಯ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ನಿನ್ನೆ ಗುರುವಾರ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿಯೋರ್ವನನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ ಮತ್ತು ದೇವಾಲಯದ ಅರ್ಚಕರ ಮೇಲೆ ಹಲ್ಲೆ ನಡೆಸಿ ಜೀವಂತವಾಗಿ ಸುಟ್ಟುಹಾಕಿದ ಇತರ ಆರೋಪಿಗಳನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ, ಎನ್ನಲಾಗಿದೆ.

ರಾಜಸ್ಥಾನದ ಕರೌಲಿ ಜಿಲ್ಲೆಯ ಸಪೋತ್ರಾದ ಬುಕ್ನಾ ಗ್ರಾಮದಲ್ಲಿ ಬುಧವಾರ ಈ ಘಟನೆ ನಡೆದಿದೆ. ಘಟನೆಯ ಬಳಿಕ ದೇವಾಲಯದ ಅರ್ಚಕರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಆದರೂ, ಗುರುವಾರ ರಾತ್ರಿ ತೀವ್ರವಾದ ಸುಟ್ಟ ಗಾಯಗಳಿಂದಾಗಿ ಅರ್ಚಕ ಮೃತಪಟ್ಟಿದ್ದಾರೆ, ಎನ್ನಲಾಗಿದೆ.

ಈ ಘಟನೆ ಕುರಿತು ಅಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು, ಇಂದು ಕರೌಲಿಯಲ್ಲಿ, ದೇವಾಲಯದ ಅರ್ಚಕನನ್ನು ದೇವಾಲಯಕ್ಕೆ ಸೇರಿದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಬಯಸಿದ ಗೂಂಡಾಗಳು ಜೀವಂತವಾಗಿ ಸುಟ್ಟುಹಾಕಿದರು. ರಾಜಸ್ಥಾನದ ಎಲ್ಲಾ ಭಾಗಗಳಿಂದ ಅತ್ಯಾಚಾರದ ಘಟನೆಗಳು ವರದಿಯಾಗುತ್ತಿವೆ, ಎಂದು ಕಳವಳ ವ್ಯಕ್ತ ಪಡಿಸಿದ್ದಾರೆ.

ಅಲ್ಲದೇ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜಕೀಯ ಪ್ರವಾಸಗಳಿಗೆ ಹೋಗುವ ಬದಲು ಈ ವಿಷಯಗಳ ಬಗ್ಗೆ ಅರಿವು ಮೂಡಿಸಬೇಕು. ಅವರು ರಾಜಸ್ಥಾನ ಸರ್ಕಾರವನ್ನು ರಾಜೀನಾಮೆ ನೀಡುವಂತೆ ಕೇಳಬೇಕು ಅಥವಾ ಅದರ ಸುಧಾರಣೆಗೆ ಪ್ರಯತ್ನಿಸಬೇಕು. ಅವರು ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು, ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಒತ್ತಾಯಿಸಿದ್ದಾರೆ.

RELATED TOPICS:
English summary :Rajastan : priest burnt alive for opposing possession of the land belonging to the temple

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...