Fri,May17,2024
ಕನ್ನಡ / English

ಎಂ ಎಸ್ ಧೋನಿ ಪುತ್ರಿ ಜಿವಾಗೆ ಅತ್ಯಾಚಾರ ಬೆದರಿಕೆ! | Janata news

10 Oct 2020
1349

ನವದೆಹಲಿ : ಕಳೆದ ಮಂಗಳವಾರ ರಾತ್ರಿ ನಡೆದ ಐಪಿಎಲ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್(ಕೆಕೆಆರ್) ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಸೋಲು ಕಂಡ ನಂತರ ಸೋಷಿಯಲ್ ಮೀಡಿಯಾ ಟ್ರೋಲ್ಸ್ ನಲ್ಲಿ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿಯವರ 5 ವರ್ಷದ ಪುತ್ರಿ ಜೀವಾ ಧೋನಿಗೆ ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಬಂದಿದೆ.

ಬುಧವಾರ ಕೊಲ್ಕತ್ತಾ ನೈಟ್‌ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ಗೆಲ್ಲುವ ಪಂದ್ಯವನ್ನ ಕೈ ಚೆಲ್ಲಿತು. ಈ ಪಂದ್ಯದಲ್ಲಿ ಧೋನಿ ಚೆನ್ನಾಗಿ ಆಡಿಲ್ಲವೆಂದು ಆತನ ಮಗಳಿಗೆ ಅತ್ಯಾಚಾರದ ಬೆದರಿಕೆ ಹಾಕಿರುವ ಹೇಯ ಘಟನೆಯೊಂದು ಬೆಳಕಿಗೆ ಬಂದಿದೆ.

ಬುಧವಾರ ಶೇಖ್ ಝಾಯೆದ್ ಕ್ರೀಡಾಂಗಣದಲ್ಲಿ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯದಲ್ಲಿ ಸಿಎಸ್​ಕೆ 10 ರನ್​ಗಳಿಂದ ಸೋಲನ್ನಪ್ಪಿತು. ಈ ಪಂದ್ಯದಲ್ಲಿ ವಿಫಲರಾದ ಸಿಎಸ್​ಕೆ ಮಹೇಂದ್ರ ಸಿಂಗ್ ಧೋನಿ ಮತ್ತು ಕೇದಾರ್ ಜಾಧವ್​ ಸಾಮಾಜಿಕ ತಾಣದಲ್ಲಿ ಟ್ರೋಲ್ ಆಗಿದ್ದರು.


ಧೋನಿ ಚೆನ್ನಾಗಿ ಆಡಿಲ್ಲವೆಂದು, ಧೋನಿ ಮಗಳು ಜೀವಾಳನ್ನ ಅತ್ಯಾಚಾರ ಮಾಡೋದಾಗಿ ಬೆದರಿಕೆ ಹಾಕಿದ್ದಾರೆ. ಮಿಸ್ಟರ್ ವಿಜಯ್ ಎಂಬ ಈ ನೀಚ ಮನಸ್ಸಿನ ಕ್ರಿಮಿ, ಧೋನಿ ಮಗಳು ಜೀವಳನ್ನು ರೇಪ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ. ಧೋನಿ ಮಗಳಿಗೆ ಬೆದರಿಕೆಯೊಡ್ಡಿರುವ ಸ್ಕ್ರೀನ್ ಶಾಟ್, ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಜೀವಾ ಹೆಸರನ್ನ ಬಳಸಿ ಅಶ್ಲೀಲ ಕಮೆಂಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿಕೃತಿ ಮೆರೆದಿದ್ದಾರೆ.

ಈ ಬೆದರಿಕೆ ನಂತರ ಸಾಕಷ್ಟು ಮಂದಿ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ, ನಮ್ಮ ದೇಶ ಯಾವ ದಿಕ್ಕಿನತ್ತ ಸಾಗುತ್ತಿದೆ ಎಂದು ಕೇಳಿದ್ದಾರೆ. ಸಿಎಸ್ ಕೆ ಕೆಕೆಆರ್ ವಿರುದ್ಧ ಸೋತಿದ್ದಕ್ಕೆ ಧೋನಿಯವರ 5 ವರ್ಷದ ಪುಟ್ಟ ಮಗಳು ಜೀವಾಗೆ ಬೆದರಿಕೆ ಬರುತ್ತಿರುವುದು ತೀರಾ ಅಸಹ್ಯಕರ, ಪ್ರಧಾನ ಮಂತ್ರಿಯವರೇ ನಮ್ಮ ದೇಶದಲ್ಲಿ ಏನು ನಡೆಯುತ್ತಿದೆ ಎಂದು ಕೇಳಿದ್ದಾರೆ.

RELATED TOPICS:
English summary :MS Dhoni s daughter Ziva gets rape threats for dad s failure.

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...