Sun,Apr28,2024
ಕನ್ನಡ / English

ಡಿಕೆಎಸ್​ಗೆ ಮೀರ್​ ಸಾದಿಕ್ ಎಂದ ಡಿಸಿಎಂ ವಿರುದ್ಧ ಡಿ.ಕೆ. ಸುರೇಶ್ ತೀವ್ರ ಆಕ್ರೋಶ | Janata news

20 Oct 2020
1518

ಬೆಂಗಳೂರು : ಡಿಸಿಎಂ ಅಶ್ವತ್ಥ್ ನಾರಾಯಣ್ ಡಿ.ಕೆ. ಶಿವಕುಮಾರ್ ಅವರನ್ನು ಮೀರ್ ಸಾದಿಕ್​ ಎಂದ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಡಿ.ಕೆ. ಸುರೇಶ್ ಅಶ್ವತ್ಥ್ ನಾರಾಯಣ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಇಷ್ಟು ದಿನ ಡಿಸಿಎಂ ಎಂದು ಗೌರವ ಕೊಟ್ಟು ನಾನು ಸುಮ್ನಿದ್ದೆ. ಅವನು ನಾಲಗೆ ಬಿಗಿ ಹಿಡಿದು ಮಾತನಾಡಲಿ ಎಂದು ಡಿ.ಕೆ.ಶಿವಕುಮಾರ್‌ರನ್ನ ಡಿಸಿಎಂ ಡಾ.ಅಶ್ವತ್ಥ್‌ ನಾರಾಯಣ ಮೀರ್‌ ಸಾದಿಕ್‌ಗೆ ಹೋಲಿಕೆ ಮಾಡಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷರ ಸಹೋದರ ಸಂಸದ ಡಿ.ಕೆ.ಸುರೇಶ್‌ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಯಡಿಯೂರಪ್ಪ ಅವರನ್ನು ಕೆಳಗಿಳಿಸಲು ಹೊರಟಿರುವ ಮೀರ್​ ಸಾದಿಕ್​ ಕೂಡ ಈತನೆ. ಈತನ ಹೆಸರನ್ನು ನಾನು ಹೇಳಲ್ಲ. ಮೀರ್ ಸಾದಿಕ್ ತನ ಬಿಜೆಪಿಯವರಿಗೆ ಸಂಬಂಧಿಸಿದ್ದೇ ಹೊರತು ಡಿಕೆಶಿ ಗಲ್ಲ. ಸಿಎಂ ಸ್ಥಾನದಿಂದ ಬಿಎಸ್​ವೈನ ಇಳಿಸಲು ಹಿಂಬಾಗಿಲಿಂದ ಯತ್ನ ನಡೆಸಲಾಗುತ್ತಿದೆ. ಯಾರು ಯಾರ ಮನೆ ಬಾಗಿಲು ತಟ್ಟುತ್ತಿದ್ದಾರೆಂದು ಗೊತ್ತಿದೆ. ಹಾಗಾಗಿ, ಮೀರ್ ಸಾದಿಕ್ ಯಾರೆಂದು ಆತ್ಮವಿಮರ್ಶೆ ಮಾಡಿಕೊಳ್ಳಲಿ ಎಂದು ಸುರೇಶ್​ ತಿರುಗೇಟು ನೀಡಿದ್ದಾರೆ.

ನಾಳೆ ಬೆಳಗ್ಗೆ ಬಿಡಲಿ ಬೇಕಿದರೆ ಆಡಿಯೋವನ್ನು, ಅದೇನು ಡಬ್ಬಾ ಬಿಡೋದಕ್ಕೆ ಚಿತ್ರ ಕೆಟ್ಟೋಯ್ತಾ ಎಂದು ಹರಿಹಾಯ್ದರು. ಚಿಕ್ಕ ವಯಸ್ಸಲ್ಲಿ ಬಿಜೆಪಿಯವರು ಏನೋ ಅವಕಾಶ ಕೊಟ್ಡಿದ್ದಾರೆ. ಯಡಿಯೂರಪ್ಪ ಇಳಿಸೋದಕ್ಕೆ ಮೀರ್ ಸಾದಕ್ ತನ ಮಾಡಿ ಮಾಧ್ಯಮದ ಮುಂದೆ ಪ್ರಾಮಾಣಿಕ ಫೋಸ್​ ಕೊಡುತ್ತಾನೆ.

ಬೆಂಗಳೂರು ಹಣವನ್ನು ಲೂಟಿ ಹೊಡೆದಿದ್ದಾರೆ. ಇವರು ಲೂಟಿ ಹೊಡೆಯೋದು, ಬೇಕಿದರೆ ನಿಮ್ಮ ಜೀವ ನೀವೇ ಉಳಿಸಿಕೊಳ್ಳಿಅಂತ ಜನರಿಗೆ ಹೇಳೋದು. ಕೇಂದ್ರದಿಂದ ಒಂದೇ ಒಂದು ಪರಿಹಾರ ತರೋ ಯೋಗ್ಯತೆ ಇಲ್ಲ ಇವರಿಗೆ. ಬರೀ ಲೂಟಿಕೋರರು ಎಂದು ಉಪಮುಖ್ಯಮಂತ್ರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿಸಿಎಂ ಅಶ್ವಥ್ ನಾರಾಯಣ ದೇವರ ಮುಂದೆ ಪ್ರಮಾಣ ಮಾಡ್ಲಿ, ಡಿ.ಕೆ. ಶಿವಕುಮಾರ್​ಗೆ ಪ್ರಮಾಣ ಮಾಡುವಂತೆ ಕೇಳಲು ಇವನಿಗೆ ಯಾವ ಯೋಗ್ಯತೆ ಇದೆ.? ಅವನಿಗೆ ಮಾನ ಮರ್ಯಾದೆ ಇದೀಯಾ, ನಾಲಿಗೆ ಬಿಗಿ ಹಿಡಿದು ಮಾತನಾಡಲಿ ಎಂದು ಡಿಸಿಎಂಗೆ ಮಾತಿನ ಮೂಲಕವೇ ಸಂಸದ ಸುರೇಶ್ ಎಚ್ಚರಿಕೆ ನೀಡಿದ್ದಾರೆ.

ಕೊರೊನಾ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ ಹೊಡೆದು ಬೇಕಿದ್ರೆ ನಿಮ್ಮ ಜೀವ ನೀವೇ ಉಳಿಸಿಕೊಳ್ಳಿರೆಂದು ಹೇಳುತ್ತಾರೆ. ಇವರಿಗೆ ಕೇಂದ್ರದಿಂದ ಪರಿಹಾರ ತರುವ ಯೋಗ್ಯತೆಯೇ ಇಲ್ಲ. ಸಾರ್ವಜನಿಕರ ತೆರಿಗೆ ಹಣ ಲೂಟಿ ಹೊಡೆಯುವುದೇ ಕಾಯಕ. ಇದೊಂದು ಲೂಟಿಕೋರರ ಸರ್ಕಾರವೆಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

RELATED TOPICS:
English summary :D K Suresh

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...