Sat,May18,2024
ಕನ್ನಡ / English

ಜಲಾಂತರ್ಗಾಮಿ ವಿರೋಧಿ ಸ್ಟೀಲ್ತ್ ಯುದ್ಧ ನೌಕೆ ಐಎನ್ಎಸ್ ಕವರಟ್ಟಿ ರಾಷ್ಟ್ರಕ್ಕೆ ಸಮರ್ಪಣೆ | Janata news

22 Oct 2020
2254

ವಿಶಾಖಪಟ್ಟಣ : ಸಂಪೂರ್ಣ ಸ್ವದೇಶಿ ನಿರ್ಮಿತ ಜಲಾಂತರ್ಗಾಮಿ ವಿರೋಧಿ ಸ್ಟೀಲ್ತ್ ಯುದ್ಧ ನೌಕೆಗಳ ಸರಣಿಯಲ್ಲಿ ಕೊನೆಯ ಹಾಗೂ ನಾಲ್ಕನೇ ನೌಕೆಯಾದ ಐಎನ್ಎಸ್ ಕವರಟ್ಟಿ ಯನ್ನು ಇಂದು ಗುರುವಾರ ಭಾರತೀಯ ನೌಕಾಪಡೆಗೆ ಅಧಿಕೃತವಾಗಿ ನಿಯೋಜಿಸಲಾಗಿದೆ. ಪ್ರಾಜೆಕ್ಟ್ 28(ಕಮೋರ್ಟಾ ಕ್ಲಾಸ್) ಅಡಿಯಲ್ಲಿ ಸ್ವದೇಶಿ ನಿರ್ಮಿತ ಕೊನೆಯ ಹಾಗೂ 4ನೇ ಜಲಾಂತರ್ಗಾಮಿ ವಿರೋಧಿ ಯುದ್ಧ(ಎಎಸ್ಡಬ್ಲ್ಯೂ) ಸ್ಟೆಲ್ತ್ ಕಾರ್ವೆಟ್ ಐಎನ್ಎಸ್ ಕವರಟ್ಟಿ ಇಂದು ಔಪಚಾರಿಕವಾಗಿ ಭಾರತೀಯ ನೌಕಾಪಡೆಗೆ ನಿಯೋಜನೆಗೊಂಡಿದೆ.

ದೇಶದ ರಕ್ಷಣಾ ಕ್ಷೇತ್ರದ ಸಕ್ಷಮತೆ ಗಣನೀಯವಾಗಿ ಹೆಚ್ಚಿಸುತ್ತಿರುವ ಜೊತೆಗೆ, ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾಗೆ ಇತ್ತೀಚೆಗೆ ಹೆಚ್ಚಿನ ಪ್ರಾಶಸ್ತ್ಯ ಕೊಡಲಾಗುತ್ತಿರುವುದು ಗಮನಾರ್ಹವಾಗಿದೆ.

ಇಂದು ಬೆಳಗ್ಗೆ ಭಾರತೀಯ ಭೂಸೇನೆ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಣೆ ವಿಶಾಖಪಟ್ನಂನ ನೌಕಾನೆಲೆಯಲ್ಲಿ ಭಾರತೀಯ ನೌಕಾಪಡೆಗೆ ನಿಯೋಜಿಸಿ ಮಾತನಾಡಿದರು. ಐಎನ್ಎಸ್ ಕವರಟ್ಟಿ ಕಾರ್ಯಾರಂಭವು ನಮ್ಮ ದೇಶದ ಕಡಲ ಗುರಿಗಳನ್ನು ಭದ್ರಪಡಿಸುವ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಕವರಟ್ಟಿ ತಂಡಕ್ಕೆ ನನ್ನ ಅಭಿನಂದನೆಗಳು ಮತ್ತು ಶುಭಾಶಯಗಳು, ಎಂದು ಜನರಲ್ ನರವಣೆ ಶುಭಕೋರಿದ್ದಾರೆ.

janata


ಪ್ರಬಲ ಜಲಾಂತರ್ಗಾಮಿ ವಿರೋಧಿ ಯುದ್ಧ ಯುದ್ಧನೌಕೆ ಐಎನ್‌ಎಸ್ ಕವರಟ್ಟಿಯನ್ನು ಭಾರತೀಯ ನೌಕಾಪಡೆಯ ವಿನ್ಯಾಸ ನಿರ್ದೇಶನಾಲಯವು ವಿನ್ಯಾಸಗೊಳಿಸಿದ್ದು, ಇದನ್ನು ಗಾರ್ಡನ್ ರೀಚ್ ಶಿಪ್‌ಬಿಲ್ಡರ್ಸ್ ಮತ್ತು ಎಂಜಿನಿಯರ್ಸ್ ಕೋಲ್ಕತಾ ಶಾಖೆಯಲ್ಲಿ ನಿರ್ಮಿಸಲಾಗಿದೆ. ಹಡಗಿನ ನಿರ್ಮಾಣದಲ್ಲಿ ಶೇಕಡಾ 90% ಗಳಷ್ಟು ಸ್ವದೇಶಿ ಸಾಮಗ್ರಿಗಳನ್ನು ಬಳಸಲಾಗಿದೆ.

ಕವರಟ್ಟಿ ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು ಜಲಾಂತರ್ಗಾಮಿ ನೌಕೆಗಳನ್ನು ಪತ್ತೆ ಹಚ್ಚುವ ಮತ್ತು ಸಂಶೋಧನೆಗೆ ಒಳಪಡಿಸುವ ಸಂವೇದಕವನ್ನು ಹೊಂದಿದೆ. ಜಲಾಂತರ್ಗಾಮಿ ವಿರೋಧಿ ಯುದ್ಧ ಸಾಮರ್ಥ್ಯದ ಜೊತೆಗೆ, ಹಡಗು ವಿಶ್ವಾಸಾರ್ಹ ಸ್ವರಕ್ಷಣೆ ಸಾಮರ್ಥ್ಯ ಮತ್ತು ದೀರ್ಘ-ಶ್ರೇಣಿಯ ನಿಯೋಜನೆಗಳಿಗೆ ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿದೆ.

RELATED TOPICS:
English summary :Commissioning of INS Kavaratti to Indian Navy

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...