Thu,May09,2024
ಕನ್ನಡ / English

ಜೆಡಿಎಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದವರೇ, ನೀವೇ ಸಿಎಂ ಅಂತಾ ಮನೆ ಬಾಗಿಲಿಗೆ ಬಂದಿದ್ದರು: ಕುಮಾರಸ್ವಾಮಿ! | Janata news

28 Oct 2020
795

ಬೆಂಗಳೂರು : ಈಗ ಜೆಡಿಎಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ಹೇಳುವ ನಾಯಕರೇ ಈ ಹಿಂದೆ ಅವರಪ್ಪನಾಣೆ ನಾನು ಮುಖ್ಯಮಂತ್ರಿ ಆಗಲ್ಲ ಅಂತಾ ಹೇಳಿದ್ದರು. ಆದರೆ, ಅವರೇ 2018ರಲ್ಲಿ ನಮ್ಮ ಮನೆ ಬಾಗಿಲಿಗೆ ಬಂದು ನೀವೇ ಮುಖ್ಯಮಂತ್ರಿಯಾಗಿ ಎಂದು ದುಂಬಾಲು ಬಿದ್ದಿದ್ದನ್ನು ಇಡೀ ರಾಜ್ಯ ನೋಡಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ತಿರುಗೇಟು ನೀಡಿದರು.

ಜೆಡಿಎಸ್ ಪಕ್ಷದಿಂದ ಬೆಳೆದು ಬೆನ್ನಿಗೆ ಚೂರಿ ಹಾಕಿದ ಸಿದ್ದರಾಮಯ್ಯ ಜೆಡಿಎಸ್ ಪಕ್ಷಕ್ಕೆ ಹೀರೋ ಆಗಲು ಸಾಧ್ಯವೇ ಇಲ್ಲ. ಅವರು ಎಂದಿಗೂ ವಿಲನ್. ಕಾಂಗ್ರೆಸ್ ಪಕ್ಷದ ಒಂದು ವರ್ಗಕ್ಕೂ ಸಿದ್ದರಾಮಯ್ಯ ವಿಲನ್ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಮುಂದೆ ಕೂಡ ಸಿದ್ದರಾಮಯ್ಯ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತ ಸ್ಥಿತಿಗೆ ಬರುವ ಕಾಲ ಬಹಳ ದೂರವಿಲ್ಲ ಎಂದರು.

ಜೆಡಿಎಸ್‌ ಬಡವರು, ಶ್ರಮಿಕರು, ರೈತರು ಬೆಳೆಸಿದ ಪಕ್ಷ. ನಮ್ಮ ಹೊಣೆಗಾರಿಕೆ ಏನಿದ್ದರೂ ಜನರದ್ದು, ನಾವು ಅಂಬಾನಿ, ಆದಾನಿಗೆ ನಮ್ಮ ಪಕ್ಷದ ಜವಾಬ್ದಾರಿ ನೀಡಿಲ್ಲ. ಸಾಮಾನ್ಯ ಕಾರ್ಯಕರ್ತನಿಗೆ ನಾವು ಟಿಕೆಟ್‌ ನೀಡಿದ್ದೇವೆ. ಜೆಡಿಎಸ್‌ನ್ನು ಯಾರು ಕೊಂಡುಕೊಳ್ಳುವುದಕ್ಕೆ ಆಗಲ್ಲ ಎಂದರು.

ಕೊರೋನಾ ಬಂದಾಗ ಪ್ರಧಾನಿ ಮೋದಿ ಚಪ್ಪಾಳೆ ತಟ್ಟಿ ಅಂದ್ರು, ಆಮೇಲೆ ದೀಪ ಬೆಳಗಿಸಿ ಅಂದ್ರು. ಆ ದೀಪ ಹಚ್ಚಿ ಬಿಜೆಪಿಯವರು ತಮ್ಮ ಜೀವನ ಬೆಳಗಿಸಿಕೊಂಡ್ರು. ಜನ ರ ಕಷ್ಟಗಳಿಗೆ ದೀಪ ಹಚ್ಚಿ ಬೆಳಕು ನೀಡಲಿಲ್ಲ ಎಂದ ಅವರು, ಹತ್ತು ವರ್ಷದಿಂದ ಬಿಜೆಪಿ ಕಾಂಗ್ರೆಸ್‌ನವರು ರಾಜ್ಯದಲ್ಲಿ ಅಧಿಕಾರದಲ್ಲಿದ್ದಾರೆ. ಪ್ರತಿವರ್ಷ ಕಾಲುವೆ ದುರಸ್ಥಿಗೆ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಾರೆ. ಆದರೂ, ಮಳೆ ಬಂದಾಗ ಬೆಂಗಳೂರಿನ ಅನೇಕ ಪ್ರದೇಶಗಳಿಗೆ ನೀರು ನುಗ್ಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಮ್ಮ ಸಭೆಗೆ ಅಡ್ಡಿಪಡಿಸಿದವರನ್ನು ಬಂಧಿಸಿ ಎಂದು ಪೊಲೀಸ್‌ ಠಾಣೆ ಎದುರು ರಾತ್ರಿವರೆಗೂ ಪ್ರತಿಭಟನೆ ನಡೆಸುವ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್‌ ನಾಯಕರು, ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯಲ್ಲಿ ತಮ್ಮ ಶಾಸಕರ ಮನೆ, ಪೊಲೀಸ್‌ ಠಾಣೆ ಸುಟ್ಟವರನ್ನು ಬಂಧಿಸಿ ಎಂದು ಧರಣಿ ನಡೆಸಬೇಕಿತ್ತು ಎಂದು ಹೇಳಿದರು.

ಕಾಂಗ್ರೆಸ್‌ ಅಭ್ಯರ್ಥಿ ನಾನು ನೊಂದಿದ್ದೇನೆ. ಬಡ ಕುಟುಂಬಗಳ ರಕ್ಷಣೆಗಾಗಿ ರಾಜಕಾರಣಕ್ಕೆ ಬಂದಿದ್ದೇನೆ ಎಂದು ಹೇಳುತ್ತಾರೆ. ಆದರೆ, ಹಳ್ಳಿಯಲ್ಲಿರುವ ಡಿ.ಕೆ.ರವಿ ಅವರ ತಂದೆ-ತಾಯಿಯನ್ನೇ ನೋಡಲಿಲ್ಲ. ಅವರ ಬದುಕಿಗೆ ಒಂದು ದಾರಿ ಮಾಡಿ ಕೊಡಲಾಗಲಿಲ್ಲ. ಈಗ ನಿಮ್ಮ ಕಷ್ಟಗಳನ್ನೆಲ್ಲಾ ಕೇಳ್ತಾರಾ, ಸಮಸ್ಯೆಗಳನ್ನು ಬಗೆಹರಿಸ್ತಾರಾ ಎಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.

RELATED TOPICS:
English summary :HD Kumaraswamy

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...