ಮಹಮೂದ್ ಖುರೇಷಿ ಯವರನ್ನು ಕೆರಳಿಸಿ ಕೋಪದಿಂದ ಕೆಂಡವನ್ನಾಗಿಸಿದ್ದಾರೆ. ಪಾಕ್ ರಾಷ್ಟ್ರೀಯ"/>
Sun,May19,2024
ಕನ್ನಡ / English

ಮೋದಿ, ಮೋದಿ ಘೋಷಣೆ ಪಾಕಿಸ್ತಾನದ ಸಂಸತ್ತಿನಾದ್ಯಂತ : ಪ್ರತಿಪಕ್ಷಗಳಿಂದ ಖಾನ್ ಸರ್ಕಾರಕ್ಕೆ ಭಾರಿ ಮುಜುಗರ | Janata news

29 Oct 2020
1148

ಇಸ್ಲಾಮಾಬಾದ್ : ಇಮ್ರಾನ್ ಖಾನ್ ಸರ್ಕಾರಕ್ಕೆ ಉಂಟಾದ ಮತ್ತೊಂದು ದೊಡ್ಡ ಮುಜುಗರದ ಪ್ರಸಂಗದಲ್ಲಿ, ಪಾಕಿಸ್ತಾನದ ಸಂಸತ್ತಿನಾದ್ಯಂತ ಮೋದಿ, ಮೋದಿ ಘೋಷ ವಾಕ್ಯಗಳು ಪ್ರತಿಧ್ವನಿಸಿದೆ. ಈ ಮೂಲಕ ಪ್ರತಿಪಕ್ಷಗಳ ಸದಸ್ಯರು, ಪಾಕ್ ವಿದೇಶಾಂಗ ಸಚಿವ ಷಾ ಮಹಮೂದ್ ಖುರೇಷಿ ಯವರನ್ನು ಕೆರಳಿಸಿ ಕೋಪದಿಂದ ಕೆಂಡವನ್ನಾಗಿಸಿದ್ದಾರೆ.

ಪಾಕ್ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಬುಧವಾರ ಪಾಕಿಸ್ತಾನದ ವಿದೇಶಾಂಗ ಸಚಿವರು ಫ್ರೆಂಚ್ ಉತ್ಪನ್ನಗಳನ್ನು ಬಹಿಷ್ಕರಿಸುವ ಕುರಿತು ಮಾತನಾಡುತ್ತಿದ್ದಾಗ, ಬಲೂಚಿಸ್ತಾನ್ ಸಂಸದರು ಉತ್ತಮ ಆಡಳಿತಕ್ಕಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದಾರೆ. ಇದಲ್ಲದೇ, ಅವರು ಪಾಕ್ ಸಂಸತ್ತಿನಲ್ಲಿ ಆಜಾದಿ ಘೋಷಣೆಗಳನ್ನು ಕೂಡ ಎತ್ತಿದರು.

ನಿರ್ಣಯದ ಕುರಿತು ಮಾತನಾಡಿದ ಖುರೇಷಿ ಅವರು ನಂತರ ಬಲೂಚಿಸ್ತಾನ್ ಚಳವಳಿಯ ಬಗ್ಗೆ ಮತ್ತು ಆಜಾದಿಯ ಘೋಷಣೆಗಳನ್ನು ಹೇಗೆ ಎತ್ತಲಾಯಿತು, ಎಂಬ ಬಗ್ಗೆ ಮಾತನಾಡಲು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ವಿರೋಧ ಪಕ್ಷದ ಸದಸ್ಯರು ಅವರ ಭಾಷಣವನ್ನು ಪದೇ ಪದೇ ಅಡ್ಡಿಪಡಿಸಿದ್ದಾರೆ.

ವಿರೋಧ ಪಕ್ಷದ ನಾಯಕರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುತ್ತಿರುವ ಹಾಗೂ ಕೋವಿಡ್-19 ಸೇರಿದಂತೆ ಇತರೇ ಸಂದರ್ಭಗಳಲ್ಲಿ ದುರಾಡಳಿತದ ಆರೋಪ ಎದುರಿಸುತ್ತಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಬಗ್ಗೆ ದೇಶದಲ್ಲಿ ಅಸಹನೆ ಕೋಪ ಹೆಚ್ಚುತ್ತಿದೆ, ಎಂದು ಈ ಘಟನೆ ಸಾಕ್ಷಿಯಾಗಿದೆ.

ಪಿಎಂಎಲ್-ಎನ್ ನ ಖವಾಜಾ ಆಸಿಫ್ ಅವರನ್ನು ಬೊಟ್ಟುಮಾಡಿ ಸೂಚಿಸಿದ ವಿದೇಶಾಂಗ ಸಚಿವ ಖುರೇಷಿ, ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಆತ್ಮವನ್ನು ಅವರೊಳಗೆ ಹೊಕ್ಕಂತೆ ಕಾಣಿಸಿಸುತ್ತಿದೆ, ಎಂದು ಟೀಕಿಸಿದ್ದಾರೆ.

ಅಲ್ಲದೇ, ಸಚಿವ ಖುರೇಷಿ ವಿರೋಧಪಕ್ಷವನ್ನು ಟೀಕಿಸುತ್ತಾ, ಭಾರತದ ನಿರೂಪಣೆಯನ್ನು ಮೆಲುಕು ಹಾಕುತ್ತಾರೆ ಮತ್ತು ರಾಷ್ಟ್ರೀಯ ಸಂಸ್ಥೆಗಳನ್ನು ವಿವಾದಾಸ್ಪದ ವನ್ನಾಗಿ ಮಾಡಿದ್ದಾರೆ, ಎಂದು ಪ್ರತಿಪಕ್ಷಗಳ ಮೇಲೆ ಆರೋಪ ಹೊರಿಸಿದ್ದಾರೆ. ಹಾಗೂ, ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಘೋಷಣೆಗಳನ್ನು ನಿಮ್ಮ ವೇದಿಕೆಯಿಂದ ಎತ್ತಿದ್ದಕ್ಕೆ ನೀವು ನಾಚಿಕೆಪಡಬೇಕು, ಎಂದು ಅವರು ವಿರೋಧ ಪಕ್ಷಗಳನ್ನು ಉದ್ದೇಶಿಸಿ ಹೇಳಿದರು.

RELATED TOPICS:
English summary :Modi Modi slogan in Pakistan parliament : Great embarrassment for Khan Govt. by opposition

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...