Sun,May19,2024
ಕನ್ನಡ / English

ಐರ್ಲೆಂಡ್​ನಲ್ಲಿ ಮೈಸೂರು ಮೂಲದ ಮಹಿಳೆ, ಮಕ್ಕಳಿಬ್ಬರ ಸಾವು, ಪತಿಯಿಂದಲೇ ದುಷ್ಕೃತ್ಯದ ಶಂಕೆ! | Janata news

01 Nov 2020
745

ಮೈಸೂರು : ಮೈಸೂರು ಮೂಲದ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳನ್ನು ಐರ್ಲೆಂಡಿನಲ್ಲಿ ಕೊಲೆ ಮಾಡಲಾಗಿದೆ. ಐರ್ಲೆಂಡ್‌ ನ ದಕ್ಷಿಣ ಡಬ್ಲಿನ್‌ನಲ್ಲಿ ನೆಲೆಸಿರುವ ಬ್ಯಾಲಿಂಟೀರ್ ಲೆವೆಲಿನ್ ಎಸ್ಟೇಟ್‌ನಲ್ಲಿರುವ ಬಾನು(37), ಮಗಳು ಅಫ್ರಿಯಾ(11) ಮಗ ಫಜಾನ್(6) ತಮ್ಮ್ ನಿವಾಸದಲ್ಲಿ ಮೃತಪಟ್ಟಿದ್ದಾರೆ.

ಇಬ್ಬರು ಮಕ್ಕಳು ಒಂದು ಕೊಠಡಿಯಲ್ಲಿ, ತಾಯಿಯ ಶವ ಮತ್ತೊಂದು ಕೊಠಡಿಯಲ್ಲಿ ಪತ್ತೆಯಾಗಿದೆ. ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎನ್ನಲಾಗುತ್ತಿದೆ.

ಐರ್ಲೆಂಡ್‌ನ ಡಬ್ಲಿನ್‌ನಲ್ಲಿ ಈ ಘಟನೆ ನಡೆದಿದ್ದು, ಕಳೆದ ಅಕ್ಟೋಬರ್‌ 28ರಂದು ಮೈಸೂರಿನಲ್ಲಿರುವ ಮೃತಳ ಪೋಷಕರಿಗೆ ವಿಚಾರ ತಿಳಿದು ಬಂದಿದೆ. ತಾಯಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎಂದು ಮರಣೋತ್ತರ ಪರೀಕ್ಷೆಯಿಂದ ತಿಳಿದು ಬಂದಿದೆ.

janata

ಸೀಮಾ ಬಾನು ಮತ್ತು ಮಕ್ಕಳನ್ನು ಆಕೆಯ ಪತಿಯೇ ಕೊಲೆ ಮಾಡಿರುವುದಾಗಿ ಮೃತಳ ಪೋಷಕರು ಆರೋಪಿಸಿದ್ದು, ಮೂವರ ಶವವನ್ನು ಭಾರತಕ್ಕೆ ತರಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಹಲಗನಹಳ್ಳಿಯ ಅಬ್ದುಲ್ ಗಫಾರ್ ಅವರ ಪುತ್ರಿ ಸೀಮಾ ಬಾನು ಅವರನ್ನು ಮೈಸೂರಿನ ಸಾಫ್ಟ್‌ವೇರ್ ಇಂಜಿನಿಯರ್ ಸಮೀರ್ ಅವರಿಗೆ ಕಳೆದ 13 ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿದ್ದು, ಈತ ಉದ್ಯೋಗಕ್ಕಾಗಿ ದುಬೈಗೆ ಹೋಗಿದ್ದ. ನಂತರ ಕಳೆದ ಫೆಬ್ರವರಿ ತಿಂಗಳಲ್ಲಿ ಹೆಚ್ಚಿನ ಸಂಭಾವನೆ ಪಡೆಯುವ ಉದ್ದೇಶದಿಂದ ಕಂಪನಿ ಬದಲಾವಣೆ ಮಾಡಿ ಕುಟುಂಬ ಸಮೇತರಾಗಿ ಐರ್ಲೆಂಡಿನ ಡಬ್ಲಿನ್‌ಗೆ ಕರೆದೊಯ್ದಿದ್ದಾನೆ.

ಆಸ್ತಿಯ ವಿಚಾರಕ್ಕೆ ಪತಿಯೊಂದಿಗೆ ಉಂಟಾದ ಕಲಹದಿಂದ ಬೇಸರಗೊಂಡು ಭಾರತಕ್ಕೆ ವಾಪಸ್ ಬಂದಿದ್ದರು. ನಂತರ ಫೆಬ್ರುವರಿಯಲ್ಲಿ ಮತ್ತೆ ಪತಿಯೊಂದಿಗೆ ಐರ್ಲೆಂಡಿಗೆ ತೆರಳಿದ್ದರು. ಮೇ ತಿಂಗಳಿನಲ್ಲಿ ಪತಿ ವಿರುದ್ಧ ಇವರು ಅಲ್ಲಿನ ಪೊಲೀಸರಿಗೆ ದೌರ್ಜನ್ಯ ಎಸಗಿದ ಕುರಿತು ದೂರು ನೀಡಿದ್ದರು.

ಈತ ಐರ್ಲೆಂಡಿನಲ್ಲಿ ಬೇರೊಬ್ಬಳೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು, ಈ ವಿಚಾರವಾಗಿ ಗಂಡ-ಹೆಂಡತಿ ನಡುವೆ ಪ್ರತಿದಿನ ಜಗಳ ನಡೆದು ಪೊಲೀಸ್ ಠಾಣೆ ಮೆಟ್ಟಿಲೇರಿತ್ತು.

ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣ ಇತ್ಯರ್ಥವಾಗುವವರೆಗೂ ಪ್ರತ್ಯೇಕವಾಗಿ ಇರುವಂತೆ ಸೂಚನೆ ನೀಡಿತ್ತು. ಅದರಂತೆ ಸೀಮಾ ಬಾನು ಮಕ್ಕಳೊಂದಿಗೆ ಪ್ರತ್ಯೇಕವಾಗಿ ವಾಸವಿದ್ದರು.. ದೌರ್ಜನ್ಯ ಕುರಿತು ತೀರ್ಪು ಹೊರಬರುವುದಕ್ಕೆ ಕೆಲವೇ ದಿನಗಳು ಇರುವಂತೆ ಕೊಲೆಯಾಗಿದೆ ಎನ್ನಲಾಗಿದೆ.

ಸ್ವಲ್ಪದಿನಗಳ ಹಿಂದೆಯಷ್ಟೇ ಸೀಮಾಬಾನು ವಿಡಿಯೊ ಕಾಲ್ ಮಾಡಿ ಪತಿ ತನ್ನನ್ನು ಉಳಿಸುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದರು. ಅ.25ರಿಂದ ಯಾವುದೇ ಕರೆ ಬಂದಿಲ್ಲ. 28ರಂದು ಕೊಲೆಯಾಗಿರುವ ವಿಚಾರ ಗೊತ್ತಾಯಿತು.

janata

ಸೀಮಾ ಬಾನು ಹಾಗೂ ಆಕೆಯ ಮಕ್ಕಳು ನಾಲ್ಕು ದಿನಗಳ ಕಾಲ ಮನೆಯಿಂದ ಹೊರ ಬಾರದೇ ಇರುವುದನ್ನು ಗಮನಿಸಿದ ನೆರೆಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು, ಮನೆ ಬಾಗಿಲು ತೆರೆದು ಪರಿಶೀಲನೆ ನಡೆಸಿದಾಗ, ತಾಯಿ- ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ತಾಯಿ ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ಸೀಮಾ ಬಾನು ಅವರ ಸಂಬಂಧಿ ಅಬು ಹೇಳಿದ್ದಾರೆ.

RELATED TOPICS:
English summary :mysuru Based Women And Her Children Murdered In Ireland By Husband

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...