Wed,May08,2024
ಕನ್ನಡ / English

ಯೋಗೇಶ್ ಗೌಡ ಹತ್ಯೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು ವಶಕ್ಕೆ ಪಡೆದ ಸಿಬಿಐ! | Janata news

05 Nov 2020
1107

ಧಾರವಾಡ : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣ (2016)ಕ್ಕೆ ಸಂಬಂಧಿಸಿ ವಿಚಾರಣೆ ಕೈಗೆತ್ತಿಕೊಂಡಿರುವ ಸಿಬಿಐ ಬೆಳಗ್ಗೆಯೇ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಆರಂಭಿಸಿದೆ. ನವೆಂಬರ್ 7ರಂದು ಜನ್ಮದಿನ ಆಚರಿಸಿಕೊಳ್ಳಲಿದ್ದ ವಿನಯ್ ಕುಲಕರ್ಣಿ ಸದ್ಯ ಸಿಬಿಐ ವಶದಲ್ಲಿದ್ದಾರೆ.

ಇಂದು ಬೆಳಗ್ಗೆ ವಿನಯ್ ಕುಲಕರ್ಣಿ ನಿವಾಸಕ್ಕೆ ಭೇಟಿ ನೀಡಿದ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದು ಧಾರವಾಡ ಉಪನಗರ ಠಾಣೆಗೆ ಕರೆದೊಯ್ದಿದ್ದಾರೆ.

2016ರಲ್ಲಿ ಧಾರವಾಡದ ಸಪ್ತಾಪುರದಲ್ಲಿ ಯೋಗೇಶ್​ ಗೌಡ ಮಾಲೀಕತ್ವದ ಜಿಮ್​ ಬಳಿ ಯೋಗೇಶ್ ಗೌಡ ಹತ್ಯೆ ನಡೆದಿತ್ತು. ಸೆಪ್ಟೆಂಬರ್ 2019ರಲ್ಲಿ ಸಿಬಿಐ ಹತ್ಯೆ ಪ್ರಕರಣದ ವಿಚಾರಣೆ ಆರಂಭಿಸಿತ್ತು. ಈಗ ಈ ಸಂಬಂಧ ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆಯಲಾಗಿದೆ.

2016ರ ಜೂನ್ 15ರಂದು ಸಪ್ತಾಪುರದ ಜಿಮ್​​​ನಲ್ಲಿ, ಹುಬ್ಬಳ್ಳಿ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಕೊಲೆ ನಡೆದಿತ್ತು. ವಿನಯ್ ಕುಲಕರ್ಣಿ ಈ ಕೊಲೆ ಹಿಂದೆ ಕೈವಾಡ ಹೊಂದಿದ್ದಾರೆ ಎಂದು ಆರೋಪಿಸಿ ಯೋಗಿಶ್​ಗೌಡ ಸಹೋದರ ಗುರುನಾಥ್​ಗೌಡ ಕೇಸ್​ ದಾಖಲಿಸಿದ್ದರು.

ಆನಂತರ ಯೋಗಿಶ್ ಗೌಡ ಪತ್ನಿ ಮಲ್ಲಮ್ಮ, ಈ ಪ್ರಕರಣವನ್ನ ಸಿಬಿಐಗೆ ನೀಡಲು ಮನವಿ ಮಾಡಿದ್ದರು. ಕೇಸ್​ ಸಿಬಿಐಗೆ ವರ್ಗಾವಣೆಗೊಂಡು, ತನಖೆ ಕೈಗೆತ್ತಿಕೊಳ್ಳಲಾಗಿತ್ತು. ಆದರೆ ಪ್ರಕರಣದ ಆರೋಪಿ ಬಸವರಾಜ್ ಇದರ ವಿರುದ್ಧ ಹೈಕೋರ್ಟ್​​ ಮೆಟ್ಟಿಲೇರಿದ್ದರು. ಅದರಂತೆ ಹೈಕೋರ್ಟ್ ಸಿಬಿಐ ತನಿಖೆಗೆ ತಡೆ ನೀಡಿತ್ತು. ಇದನ್ನ ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಬಳಿಕ ಹೈಕೋರ್ಟ್ ಸ್ಟೇಯನ್ನ ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು.

ಯೋಗೇಶ್ ಗೌಡ ಕೊಲೆ ನಡೆದ ಸಂದರ್ಭದಲ್ಲಿ ವಿನಯ್ ಕುಲಕರ್ಣಿ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕರಾಗಿದ್ದರು. ಈ ವಿಷಯ ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿತ್ತು.

RELATED TOPICS:
English summary :Dharwad

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...