ಮಹಿಳೆಯರಿಗೆ ಅಶ್ಲೀಲ ಫೋಟೋ ಕಳುಹಿಸುತ್ತಿದ್ದವ ಅರೆಸ್ಟ್! | Janata news
ಚಿತ್ರದುರ್ಗ : ಮಹಿಳೆಯರಿಗೆ ಅಶ್ಲೀಲ ಫೋಟೋ ಕಳುಹಿಸಿದ್ದ 55 ವರ್ಷದ ಚಪಲ ಚನ್ನಿಗರಾಯನನ್ನು ಪೊಲೀಸರು ಬಂಧಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತ್ಯಾಗರಾಜ ನಗರದ ಓ.ರಾಮಕೃಷ್ಣ (54) ಎಂಬ ವ್ಯಕ್ತಿಯು ಸುಮಾರು 200ಕ್ಕೂ ಹೆಚ್ಚು ಮಹಿಳೆಯರಿಗೆ ಅಶ್ಲೀಲ ಫೋಟೊ ಸಂದೇಶ ಕಳಿಸಿದ್ದಾನೆಂಬ ಆರೋಪ ಕೇಳಿ ಬಂದಿದೆ.
ಮೊಬೈಲ್ ನಂಬರ್ ಗಳನ್ನು ಸಂಗ್ರಹಿಸಿ ಅವರಿಗೆ ಈ ವ್ಯಕ್ತಿ ಫೋಟೋ ಕಳುಹಿಸುತ್ತಿದ್ದ. ಈ ವ್ಯಕ್ತಿ ಮಹಿಳೆಯರಿಗೆ ಅಶ್ಲೀಲ ಫೋಟೋ ಕಳುಹಿಸುತ್ತಿದ್ದಾನೆ ಎಂದು ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ದಾಳಿ ನಡೆಸಿದ ಪೊಲೀಸರು, ಆತನನ್ನು ಬಂಧಿಸಿದ್ದಾರೆ. ಅಲ್ಲದೇ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಚಳ್ಳಕೆರೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ನ್ಯಾಯಾಧೀಶರು ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಅಲ್ಲದೇ, ಬಂಧಿತ ಆರೋಪಿ ಕೂಡ 200ಕ್ಕೂ ಹೆಚ್ಚು ಮಹಿಳೆಯರಿಗೆ ಅಶ್ಲೀಲ ಫೋಟೋ ಕಳುಹಿಸಿರುವುದಾಗಿ ಒಪ್ಪಿಕೊಂಡಿದ್ದಾನೆ.