ಟೊಯೋಟಾ ಕಿರ್ಲೋಸ್ಕರ್ ಕಂಪನಿ ಆಡಳಿತ"/>
Thu,May09,2024
ಕನ್ನಡ / English

ಬಿಡದಿ : ಟೊಯೋಟಾ ಕಂಪನಿ ಆಡಳಿತ ಮಂಡಳಿ, ನೌಕರರ ನಡುವಿನ ಸಮಸ್ಯೆ ಪರಿಹಾರ ಸಭೆ ಯಶಸ್ವಿ | Janata news

17 Nov 2020
1120

ಬೆಂಗಳೂರು : ಬಿಡದಿಯ ಟೊಯೋಟಾ ಕಿರ್ಲೋಸ್ಕರ್ ಮೋಟರ್ಸ್ ಕಂಪನಿ ಆಡಳಿತ ಮಂಡಳಿ ಮತ್ತು ನೌಕರರ ನಡುವೆ ಉಂಟಾಗಿರುವ ಸಮಸ್ಯೆಯನ್ನು ಪರಿಹರಿಸಲು ಇಂದು ವಿಕಾಸಸೌಧದ ಕಛೇರಿಯಲ್ಲಿ ಕಂಪನಿಯ ಆಡಳಿತ ಮಂಡಳಿ ಪ್ರತಿನಿಧಿ ಹಾಗೂ ಕಾರ್ಮಿಕ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆ ಯಶಸ್ವಿಯಾಗಿದೆ.

ಟೊಯೋಟಾ ಕಿರ್ಲೋಸ್ಕರ್ ಕಂಪನಿ ಆಡಳಿತ ಮಂಡಳಿಯ ಕಾರ್ಮಿಕ‌ ವಿರೋಧಿ ನೀತಿ ಖಂಡಿಸಿ, ಕಳೆದ ವಾರದಿಂದ ಕಂಪನಿ ಕಾರ್ಮಿಕರು ಅಹೋರಾತ್ರಿ ಧರಣಿ ನಡೆಸಿದ್ದರು. ಕೆಲಸದಲ್ಲಿ ಶಿಸ್ತಿನ ನೆಪದಲ್ಲಿ ಆಡಳಿತ ಮಂಡಳಿಯಿಂದ ಕಾರ್ಮಿಕರ ಶೋಷಣೆಯನ್ನು ಖಂಡಿಸಿ ಸುಮಾರು 3500 ಕಾರ್ಮಿಕರು ಕಳೆದ ಅನೇಕ ದಿನಗಳಿಂದಲೂ ಈ ಅಹೊರಾತ್ರಿ ಧರಣಿಯಲ್ಲಿ ಪಾಲ್ಗೊಂಡಿದ್ದರು. ಕಾರ್ಮಿಕ ಸಂಘದ ಪದಾಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡಿದ್ದನ್ನು ಖಂಡಿಸಿ ಸಾವಿರಾರು ಕಾರ್ಮಿಕರು ದಿಢೀರ್ ಪ್ರತಿಭಟನೆಗಿಳಿದ ಬೆನ್ನಲ್ಲೇ, ಆಡಳಿತವು ಘಟಕದಲ್ಲಿ ಅನಿರ್ದಿಷ್ಟಾವಧಿಯ ಲಾಕೌಟ್ ಘೋಷಿಸಿತ್ತು.

ಕಂಪನಿಯ ಮ್ಯಾನೇಜ್ಮೆಂಟ್ ಹಾಗೂ ಕಾರ್ಖಾನೆ ನೌಕರರ ನಡುವೆ ಉಲ್ಬಣಗೊಂಡಿರುವ ಸಮಸ್ಯೆ ತಾರಕಕ್ಕೆರಿದ್ದು, ಉಂಟಾಗಿರುವ ಸಮಸ್ಯೆಯನ್ನು ಪರಿಹರಿಸಲು ಡಿಸಿಎಂ ಡಾ.ಅಶ್ವತನಾರಾಯಣ ಹಾಗೂ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅವರ ನೇತ್ರತ್ವದಲ್ಲಿ ಈ ಸಭೆ ನಡೆದಿದೆ.

ಈ ಸಭೆಯಲ್ಲಿ ಸಮಸ್ಯೆಯನ್ನು ಯಶಸ್ವಿಯಾಗಿ ಪರಿಹರಿಸಲಾಗಿದ್ದು, ಲಾಕ್ ಔಟ್ ಆಗಿರುವ ಟೊಯೋಟಾ ಕಾರ್ಖಾನೆಯನ್ನು ನಾಳೆಯಿಂದ ಪುನರಾರಂಭಿಸುವಂತೆ ಆಡಳಿತ ಮಂಡಳಿಯ ಪ್ರತಿನಿಧಿಗಳಿಗೆ ಸೂಚಿಸಲಾಯಿತು ಮತ್ತು ಕಾರ್ಮಿಕರು ಸಹಕರಿಸುವಂತೆ ತಿಳಿಸಲಾಯಿತು.

ಈ ಕುರಿತು ಸಂಜೆ ಒಳಗಾಗಿ ಕಾರ್ಮಿಕ ಇಲಾಖೆಯಿಂದ ಆದೇಶ ಹೊರಡಿಸಲಾಗುವುದು, ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಸಮಸ್ಯೆ ಉಂಟಾದರೆ ಕಾರ್ಮಿಕರೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಹಾಗೂ ಕಾರ್ಮಿಕರ ಹಿತ ಕಾಪಾಡುವುದು ನಮ್ಮ ಸರಕಾರದ ಆಧ್ಯ ಕರ್ತವ್ಯವಾಗಿದೆ, ಎಂದು ಹೆಬ್ಬಾರ್ ತಿಳಿಸಿದ್ದಾರೆ.

ಈ ಸಭೆಯಲ್ಲಿ ಮಾಗಡಿ ಶಾಸಕರಾದ ಎ.ಮಂಜುನಾಥ, ಟೊಯೋಟಾ ಕಿರ್ಲೋಸ್ಕರ್ ಮೋಟರ್ಸ್ ನ ಆಡಳಿತ ಮಂಡಳಿ ಸದಸ್ಯರು, ಕಂಪನಿಯ ಕಾರ್ಮಿಕ ಪ್ರತಿನಿಧಿಗಳು ಹಾಜರಿದ್ದರು.

RELATED TOPICS:
English summary :Bidadi : Issues between Toyota company management, laborer resolving meeting successful

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...