Fri,May03,2024
ಕನ್ನಡ / English

ಮಕ್ಕಳ ಮಧ್ಯಾಹ್ನದ ಊಟ ನೀಡಲು ಯೋಗ್ಯತೆಯಿಲ್ಲ, ಈಗ ಪ್ರಾಧಿಕಾರಕ್ಕೆ ಹಣ ಎಲ್ಲಿಂದ ಬಂತು? | Janata news

18 Nov 2020
1049

ಬೆಂಗಳೂರು : ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿಚಾರವಾಗಿ ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದು, ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ವೈಜ್ಙಾನಿಕ ಅಧ್ಯಯನವಿಲ್ಲದೆ ನಿಗಮ ಮಾಡುವುದು ಸರಿಯಲ್ಲ. ಅಂತಹ ನಿರ್ಧಾರ ಸಮಾಜ ವಿರೋಧಿಯಾಗುತ್ತದೆ. ಅಷ್ಟೇ ಅಲ್ಲದೇ ಅದು ಪ್ರಜಾಪ್ರಭುತ್ವ ವಿರೋಧಿ ಧೋರಣೆಯಾಗುತ್ತದೆ. ಚುನಾವಣೆಯನ್ನು ಸಾಧನೆ ಬಲದಿಂದ ಗೆಲ್ಲೋಕೆ ಆಗದವರು, ಮತಿಹೀನ ಬಿಜೆಪಿ ಇಂತಹ ಅಗ್ಗದ ತಂತ್ರಕುತಂತ್ರದಿಂದ ಮಾಡುತ್ತಿದೆ.

ಬಡತನ ನಿರ್ಮೂಲನೆ ವೈಜ್ಙಾನಿಕ ಅಧ್ಯಯನ ಆಧಾರಿತವಾಗಬೇಕು. ಪ್ರಾಮಾಣಿಕ ಕಾಳಜಿ ಇದ್ದರೆ ಜಾತಿಗಣತಿ ಒಪ್ಪಿಕೊಳ್ಳಿ ಎಂದು ಸಿದ್ದರಾಮಯ್ಯ ಅವರು ಮರಾಠ ಅಭಿವೃದ್ಧಿ ನಿಮಗದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ನಮ್ಮ ವಿರೋಧವಿಲ್ಲ. ಬಡತನ ಜಾತಿ-ಧರ್ಮಗಳನ್ನು ಮೀರಿದ್ದು. ಕೇವಲ ತಳ ಸಮುದಾಯ ಮಾತ್ರವಲ್ಲ. ಮೇಲ್ಜಾತಿಗಳಲ್ಲೂ ಬಡವರಿದ್ದಾರೆ.

ಎಲ್ಲಾ ಸಮುದಾಯಗಳಿಗೆ ರೂಪಿಸುವ ಕಾರ್ಯಕ್ರಮಕ್ಕೆ ಸ್ವಾಗತ. ಕ್ಷುಲ್ಲಕ ಬುದ್ಧಿಯ ಕಸರತ್ತುಗಳನ್ನು ಖಂಡಿಸುತ್ತೇನೆ. ಈಗ ಅನಗತ್ಯವಾಗಿ ಮರಾಠ ನಿಗಮ ಘೋಷಿಸಿದ್ದು ಏಕೆ? ಅನಗತ್ಯವಾಗಿ ಕನ್ನಡಿಗರನ್ನು ಕೆರಳಿಸಿದ್ದು ಏಕೆ? ಶಾಂತಿ ಸುವ್ಯವಸ್ಥೆಗೆ ಭಂಗ ಉಂಟಾದರೆ ಸರ್ಕಾರವೇ ಹೊಣೆ ಎಂದು ಪರೋಕ್ಷವಾಗಿ ಸರ್ಕಾರಕ್ಕೆ‌ ಎಚ್ಚರಿಕೆ ನೀಡಿದರು.

ಅಂತಹ ಕಾರ್ಯಕ್ರಮಗಳನ್ನು ನಾವು ಸ್ವಾಗತ ಮಾಡುತ್ತೇವೆ. ಆದರೆ ಕೇವಲ ರಾಜಕೀಯ ಲಾಭಕ್ಕೆ ಇಂತಹ ಕಸರತ್ತು ಮಾಡಬೇಡಿ. ಇಂತಹ ಕ್ಷುಲ್ಲಕ ಬುದ್ಧಿಯ ಕಸರತ್ತುಗಳನ್ನು ಖಂಡಿಸುತ್ತೇನೆ ಎಂದು ಸರ್ಕಾರವನ್ನು ಸಿದ್ದರಾಮಯ್ಯ ಟೀಕಿಸಿದರು.

ಕನ್ನಡಿಗರು, ಮರಾಠಿಗರ ಮಧ್ಯೆ ಆಗಾಗ ಸಂಘರ್ಷವಾಗುತ್ತಿತ್ತು. ಆದ್ರೂ ಅವರು ಪರಸ್ಪರ ಸೌಹಾರ್ದತೆಯಿಂದ ಬದುಕುತ್ತಿದ್ದರು. ಈಗ ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಿ ಅನಗತ್ಯವಾಗಿ ಕನ್ನಡಿಗರನ್ನು ಕೆರಳಿಸುವ ಮುಖಾಂತರ ರಾಜ್ಯ ಸರ್ಕಾರ ಮೂರ್ಖತನದ ಕೆಲಸವನ್ನು ಮಾಡಿದೆ. ಇದರಿಂದ ರಾಜ್ಯದ ಶಾಂತಿ ಸುವ್ಯವಸ್ಥೆ ಹದಗೆಟ್ಟರೆ ಸಿಎಂ ಹೊಣೆ ಎಂದು ಹೇಳಿದರು.

ಮೀಸಲಾತಿ, ಸಾಮಾಜಿಕ ನ್ಯಾಯದ ಬಗ್ಗೆ ನಾವು ಮಾತನಾಡಿದಾಗ ನಮ್ಮನ್ನು ಜಾತಿವಾದಿಗಳೆಂದು ಟೀಕಿಸುವ, ಹಂಗಿಸುವ ಬಿಜೆಪಿ ಈಗ ಮಾಡುತ್ತಿರುವುದೇನು? ಜಾತಿ-ಜಾತಿ ನಡುವೆ ಮಾತ್ರವಲ್ಲ ಭಾಷೆ-ಭಾಷೆ ನಡುವೆ ಕೂಡಾ ಜಗಳ ಹುಟ್ಟುಹಾಕುತ್ತಿದೆ. ಇಂತಹ ತುಘಲಕ್ ನಿರ್ಧಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ.

ಇಂತಗ ತುಘಲಕ್ ನಿರ್ಧಾರದಿಂದ ಅರಾಜಕತೆ ಸೃಷ್ಟಿಯಾಗಿದೆ. ಮಕ್ಕಳ ಮಧ್ಯಾಹ್ನದ ಊಟ ನೀಡೋಕೆ ಯೋಗ್ಯತೆಯಿಲ್ಲ. ವಿಧವಾ ವೇತನ, ಅಂಗವಿಕಲ ವೇತನಕ್ಕೆ ದುಡ್ಡಿಲ್ಲ. ಕೊರೋನಾ ಸೋಂಕಿನಿಂದ ಜ‌ನ ಸಾಯುತ್ತಿದ್ದಾರೆ. ಪ್ರವಾಹದಿಂದ ಜನ ಬೀದಿಗೆ ಬಿದ್ದು ಒದ್ದಾಡುತ್ತಿದ್ದಾರೆ. ಇವೆಲ್ಲಕ್ಕೂ ಸರ್ಕಾರದ ಬಳಿ ಹಣವಿಲ್ಲ. ಈಗ ನಿಗಮ, ಪ್ರಾಧಿಕಾರಕ್ಕೆ ದುಡ್ಡು‌ಎಲ್ಲಿಂದ ಬಂತು ಎಂದು ಸಿದ್ದರಾಮಯ್ಯ ಅವರು ಪ್ರಶ್ನೆ ಮಾಡಿದ್ದಾರೆ.

RELATED TOPICS:
English summary :Bangalore

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...