Wed,May08,2024
ಕನ್ನಡ / English

ಡಾರ್ಕ್ ವೆಬ್ ಮೂಲಕ ಅಕ್ರಮ ನಡೆಸುತ್ತಿದ್ದ ಬೆಂಗಳೂರಿನ ಕುಖ್ಯಾತ ಹ್ಯಾಕರ್ ಶ್ರೀಕಿ ಬಂಧನ! | Janata news

18 Nov 2020
1181

ಬೆಂಗಳೂರು : ಸರ್ಕಾರದ ಮತ್ತು ಅಂತಾರಾಷ್ಟ್ರೀಯ ಮಟ್ಟದ ವೆಬ್‍ಸೈಟ್‍ಗಳನ್ನು ಹ್ಯಾಕ್ ಮಾಡಿ ಹಣ ಮಾಡುತ್ತಿದ್ದ ಕುಖ್ಯಾತ ಹ್ಯಾಕರ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ಈತನನ್ನು ಬಂಧಿಸಿದ್ದು ಸುದ್ದಿಗೋಷ್ಠಿ ನಡೆಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್‍ ಪಂತ್‌ ಈತನ ಬಗ್ಗೆ ವಿವರಣೆ ನೀಡಿದ್ದಾರೆ.

ಡಾರ್ಕ್ ವೆಬ್ ಮೂಲಕ ಅಕ್ರಮ ಹಣ ಸಂಪಾದನೆ ಮಾಡುತ್ತಿದ್ದ ಅಂತಾರಾಷ್ಟ್ರೀಯ ಕುಖ್ಯಾತಿಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸರ್ಕಾರಿ ವೆಬ್ ಸೈಟ್​ಗಳ ಜೊತೆಗೆ ಅಂತರರಾಷ್ಟ್ರೀಯ ವೆಬ್​​ಸೈಟ್​ಗಳನ್ನೂ ಹ್ಯಾಕ್ ಮಾಡುತ್ತಿದ್ದ ಶ್ರೀಕಿ ಡ್ರಗ್ಸ್ ದಂಧೆಕೋರರಿಗೆ ಸಹಾಯ ಮಾಡುತ್ತಿದ್ದನೆನ್ನಲಾಗಿದೆ.

ಶ್ರೀಕೃಷ್ಣ ಬೆಂಗಳೂರಿನ ನಿವಾಸಿಯಾಗಿದ್ದು, 2014 ರಿಂದ 2017ರವರೆಗೆ ಈತ ನೆದರ್‌ಲ್ಯಾಂಡ್‌ ಆಮ್‌ಸ್ಟರ್‌ಡ್ಯಾಮ್ ಕಂಪ್ಯೂಟರ್ ಸೈನ್ಸ್‌ನಲ್ಲಿ ಬಿಎಸ್‍ಸಿ ಪದವಿ ಪಡೆದ ಬಳಿಕ ವೆಬ್‍ಸೈಟ್ ಹ್ಯಾಕ್ ಮಾಡಲು ಆರಂಭಿಸಿದ್ದ.

ಶ್ರೀಕಿ ಸರ್ಕಾರಿ ವೆಬ್​ಸೈಟ್​ಗಳನ್ನ ಹ್ಯಾಕ್ ಮಾಡುತ್ತಿದ್ದ. ಅಲ್ಲಿ ಟೆಂಡರ್​ಗೆ ಸಂಬಂಧಪಟ್ಟ ಮಾಹಿತಿಯನ್ನು ಹ್ಯಾಕ್ ಮಾಡಿ ಪಡೆಯುತ್ತಿದ್ದ. ಅಂತರರಾಷ್ಟ್ರೀಯ ವೆಬ್ ಸೈಟ್​ಗಳನ್ನೂ ಹ್ಯಾಕ್ ಮಾಡಿ ಅಕ್ರಮ ಮಾರ್ಗದಲ್ಲಿ ಹಣ ಸಂಪಾದನೆ ಮಾಡುತ್ತಿದ್ದ.

ಈ ಹಿಂದೆ ಯುಬಿ ಸಿಟಿಯ ಸ್ಕೈ ಬಾರ್​ನಲ್ಲಿ ನಡೆದಿದ್ದ ಗಲಾಟೆ ಪ್ರಕರಣದಲ್ಲೂ ಈತನಿದ್ದನೆನ್ನಲಾಗಿದೆ. ವಿದ್ವತ್ ಮೇಲೆ ಯುಬಿ ಸಿಟಿಯಲ್ಲಿ ಹಲ್ಲೆ ಎಸಗಿದ್ದ ನಲಪಾಡ್ ಮತ್ತವನ ತಂಡದಲ್ಲಿ ಶ್ರೀಕಿಯೂ ಇದ್ದ. ಆ ಪ್ರಕರಣದಲ್ಲಿ ಈತ ಮೂರನೇ ಆರೋಪಿ.

ಸರ್ಕಾರಗಳು ಟೆಂಡರ್ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಬೇಕು ಎನ್ನುವ ಕಾರಣಕ್ಕಾಗಿ ಆನ್‍ಲೈನ್‍ನಲ್ಲಿ ಟೆಂಡರ್ ಕರೆಯುವ ವ್ಯವಸ್ಥೆ ಮಾಡಿಕೊಂಡಿವೆ. ಈತ ಈ ಟೆಂಡರ್ ನಡೆಯುವ ವೆಬ್‍ಸೈಟ್‍ಗಳನ್ನೇ ಹ್ಯಾಕ್ ಮಾಡುತ್ತಿದ್ದ. ಟೆಂಡರ್ ವೇಳೆ ಬೇಕಾದ ವ್ಯಕ್ತಿಗಳಿಗೆ ಟೆಂಡರ್ ಸಿಗುವಂತೆ ಮಾಡುತ್ತಿದ್ದ. ಹೀಗಾಗಿ ಬಹಳಷ್ಟು ದೊಡ್ಡ ವ್ಯಕ್ತಿಗಳ ಈತನ ಹಿಂದೆ ಇರುವ ಅನುಮಾನ ವ್ಯಕ್ತವಾಗಿದೆ.

ಹಲವು ವರ್ಷಗಳಿಂದ ತಲೆ ಮರೆಸಿಕೊಂಡು ಓಡಾಡುತ್ತಿದ್ದ ಈತ ಈಗ ಸಿಕ್ಕಿಬಿದ್ದಿದ್ದಾನೆ. ಸಿಸಿಬಿ ಪೊಲೀಸರು ಇದೀಗ ಈತನನ್ನು ಕೋರ್ಟ್​ಗೆ ಹಾಜರುಪಡಿಸಿ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

RELATED TOPICS:
English summary :Bangalore Hacker

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...