ಶ್ರೀರಾಮ, ಲಕ್ಷ್ಮಣ ಮತ್ತು ಸೀತಾ ದೇವಿಯ ಕಂಚಿನ ವಿಗ್ರಹಗಳನ್ನು ತಮಿಳುನಾಡಿನ ಐಡಲ್ ವಿಂಗ್‌ಗೆ ಹಸ್ತಾಂತರಿಸಿದರು. ನವದೆಹಲಿಯ ಧರೋಹರ್ ಭವನದಲ್ಲಿರುವ ಎಎಸ್ಐ"/>
Sun,May19,2024
ಕನ್ನಡ / English

ಲಂಡನ್ ನಿಂದ ಮರಳಿ ಪಡೆದ ಶ್ರೀರಾಮ, ಲಕ್ಷ್ಮಣ, ಸೀತಾ ಮಾತೆ ವಿಗ್ರಹ ತಮಿಳುನಾಡಿಗೆ ಹಸ್ತಾಂತರಿಸಿದ ಕೇಂದ್ರ | Janata news

19 Nov 2020
1256

ನವದೆಹಲಿ : ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಖಾತೆ ರಾಜ್ಯ ಸಚಿವ ಶ್ರೀ ಪ್ರಹ್ಲಾದ್ ಸಿಂಗ್ ಪಟೇಲ್ ಅವರು ಇಂದು ನಡೆದ ಸಮಾರಂಭದಲ್ಲಿ ಭಗವಂತ ಶ್ರೀರಾಮ, ಲಕ್ಷ್ಮಣ ಮತ್ತು ಸೀತಾ ದೇವಿಯ ಕಂಚಿನ ವಿಗ್ರಹಗಳನ್ನು ತಮಿಳುನಾಡಿನ ಐಡಲ್ ವಿಂಗ್‌ಗೆ ಹಸ್ತಾಂತರಿಸಿದರು. ನವದೆಹಲಿಯ ಧರೋಹರ್ ಭವನದಲ್ಲಿರುವ ಎಎಸ್ಐ ಪ್ರಧಾನ ಕಚೇರಿಯಲ್ಲಿ ಸಚಿವರು ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈ ಮೊದಲು, ಸೆಪ್ಟೆಂಬರ್ 15, 2020 ರಂದು, ಈ ಕಂಚಿನ ವಿಗ್ರಹಗಳನ್ನು ಲಂಡನ್‌ನ ಮೆಟ್ರೋಪಾಲಿಟನ್ ಪೊಲೀಸರು ಲಂಡನ್‌ನಲ್ಲಿರುವ ಭಾರತದ ಹೈ ಕಮಿಷನ್‌ಗೆ ಹಸ್ತಾಂತರಿಸಿದರು. 1958ರಲ್ಲಿ ಮಾಡಿದ ಫೋಟೊ ದಸ್ತಾವೇಜನ್ನು ಪ್ರಕಾರ, ಈ ವಿಗ್ರಹಗಳು ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯ ಆನಂದಮಂಗಲದಲ್ಲಿರುವ ಶ್ರೀ ರಾಜಗೋಪಾಲ್ ವಿಷ್ಣು ದೇವಸ್ಥಾನಕ್ಕೆ(ವಿಜಯನಗರ ಅವಧಿಯಲ್ಲಿ ನಿರ್ಮಿಸಲಾದ ದೇವಾಲಯ) ಸೇರಿವೆ. ತಮಿಳುನಾಡು ಪೊಲೀಸರ ವಿಗ್ರಹ ವಿಭಾಗ ನಡೆಸಿದ ತನಿಖೆಯ ಪ್ರಕಾರ ಈ ವಿಗ್ರಹಗಳನ್ನು ಶ್ರೀ ರಾಜಗೋಪಾಲ್ ವಿಷ್ಣು ದೇವಸ್ಥಾನದಿಂದ 23/24 ನವೆಂಬರ್ 1978 ರಂದು ಕಳವು ಮಾಡಲಾಗಿದೆ.

janata

ಭಗವಂತ ಶ್ರೀ ರಾಮ, ಲಕ್ಷ್ಮಣ ಮತ್ತು ಸೀತಾ ದೇವಿಯ ಕಂಚಿನ ವಿಗ್ರಹಗಳು ಭಾರತೀಯ ಲೋಹದ ಕಲೆಯ ಮೇರುಕೃತಿಗಳಾಗಿವೆ ಮತ್ತು ಕ್ರಮವಾಗಿ 90.5 ಸೆಂ, 78 ಸೆಂ, ಮತ್ತು 74.5 ಸೆಂ.ಮೀ. ಎತ್ತರ ಇದೆ. ಶೈಲಿಯಲ್ಲಿ, ಈ ಶಿಲ್ಪಗಳು ಕ್ರಿ.ಶ 13 ನೇ ಶತಮಾನಕ್ಕೆ ಸೇರಿದವು, ಎಂದು ಪಿಐಬಿ ಪ್ರಕಟನೆಯಲ್ಲಿ ತಿಳಿಸಿದೆ.

ಹಸ್ತಾಂತರಿಸುವ ಸಮಾರಂಭದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವರು, ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವದಲ್ಲಿ, 2014 ರಿಂದ ಇಲ್ಲಿಯವರೆಗೆ ಒಟ್ಟು 40 ಪ್ರಾಚೀನ ವಸ್ತುಗಳನ್ನು ವಿದೇಶಗಳಿಂದ ಭಾರತಕ್ಕೆ ಮರುಪಡೆಯಲಾಗಿದೆ. ಆದರೆ, 1976 ರಿಂದ 2014 ರ ಅವಧಿಯಲ್ಲಿ ಕೇವಲ 13 ಇಂತಹ ಪ್ರಾಚೀನ ವಸ್ತುಗಳನ್ನು ಮಾತ್ರ ಮರುಪಡೆಯಲು ಸಾಧ್ಯವಾಗಿದೆ, ಎಂದಿದ್ದಾರೆ.

ಈ ವಿಗ್ರಹಗಳನ್ನು ದೇಶಕ್ಕೆ ತರುವಲ್ಲಿ ಅವರ ನಿರಂತರ ಪ್ರಯತ್ನಗಳಿಗಾಗಿ ಭಾರತದ ಪುರಾತತ್ವ ಸಮೀಕ್ಷೆ, ತಮಿಳುನಾಡು ಸರ್ಕಾರದ ವಿಶೇಷ ಐಡಲ್ ವಿಂಗ್, ಡಿಆರ್‌ಐ ಮತ್ತು ಲಂಡನ್ ನ ಭಾರತದ ಹೈ ಕಮಿಷನ್ ಅವರನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಸಾಂಸ್ಕೃತಿಕ ಸಚಿವಾಲಯ, ಎಎಸ್‌ಐ ಮತ್ತು ತಮಿಳುನಾಡು ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

RELATED TOPICS:
English summary :Center handed over recovered statue of Sri Ram, Lakshman, Sita goddess from London to TamilNadu

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...