ನಿಶ್ಚಿತಾರ್ಥಕ್ಕೆ ಹೊರಟಿದ್ದ ಮಿನಿ ಬಸ್ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನ ಗಾಯ! | Janata news
ಕೊಪ್ಪಳ : ಮಿನಿ ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ಶುಕ್ರವಾರ ಕುಕನೂರು ತಾಲೂಕಿನ ನಿಟ್ಟಾಲಿ ಕ್ರಾಸ್ ಬಳಿ ನಡೆದಿದೆ.
ಬೈಕ್ ಹಾಗೂ ಟೆಂಪೋ ನಡುವೆ ಡಿಕ್ಕಿ ಸಂಭವಿಸಿ, ಬಳಿಕ ಟೆಂಪೋ ಮರಕ್ಕೆ ಗುದ್ದಿದೆ. ಈ ವೇಳೆ ಸ್ಥಳದಲ್ಲೇ ನಾಲ್ವರು ಸಾನ್ನಪ್ಪಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಅಗಸನಕೊಪ್ಪ ಗ್ರಾಮದಿಂದ ಜನರು ಮಿನಿ ಬಸ್ ನಲ್ಲಿ ಆಗಮಿಸುತ್ತಿದ್ದರು. ನಿಟ್ಟಾಲಿ ಬಳಿ ಬೈಕ್ ಸವಾರ ಅಡ್ಡ ಬಂದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ರಸ್ತೆ ಪಕ್ಕದ ತಗ್ಗಿಗೆ ನುಗ್ಗಿ ಮರಕ್ಕೆ ಗುದ್ದಿದೆ.
10ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಇನ್ನೂ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಸವಾರನ ಅಜಾಗರೂಕತೆಯ ಚಾಲನೆಯೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ.