Mon,May20,2024
ಕನ್ನಡ / English

ನನ್ನ ಸರ್ಕಾರವನ್ನ ಯಾವನೂ ಪರ್ಸಂಟೇಜ್ ಸರ್ಕಾರ ಅಂತಾ ಹೇಳಲು ಸಾಧ್ಯ ಇಲ್ಲ: ಹೆಚ್ ಡಿ ಕುಮಾರಸ್ವಾಮಿ | Janata news

22 Nov 2020
1397

ಬೆಂಗಳೂರು : ನಾನು ಕಷ್ಟಪಟ್ಟು ಕೆಲಸ ಮಾಡುತ್ತೇನೆ. ಆದರೆ, ಜನರು ಮಾತ್ರ ನನ್ನ ಕೈಹಿಡಿಯುತ್ತಿಲ್ಲ ಎಂದು ಮಾಜಿ‌ ಸಿಎಂ ಹೆಚ್ ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮಲ್ಲಸಂದ್ರದ ವಾರ್ಡ್ ಜೆಡಿಎಸ್ ಕಚೇರಿ ಉದ್ಘಾಟನೆಯನ್ನ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೆರವೇರಿಸಿದರು. ಕಾರ್ಯಕರ್ತರು ಹಾಗೂ ದಾಸರಹಳ್ಳಿ ಕ್ಷೇತ್ರದ ಮತದಾರರನ್ನ ಉದ್ದೇಶಿಸಿ ಕುಮಾರಸ್ವಾಮಿ ಮಾತನಾಡಿ, ದಾಸರಹಳ್ಳಿ ಗೆ ಕುಡಿಯುವ ನೀರಿಗಾಗಿ 36 ಲಕ್ಷ ಗ್ರ್ಯಾಂಟ್ ನೀಡಿದ್ದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಎಂದು ಜಾರಿಗೆ ತಂದೆ.

ನಗರದ ಹೊರ ವಲಯದಲ್ಲಿ ಡಾಂಬರೀಕರಣ, ಕಾವೇರಿ ನೀರು ಪೂರೈಕೆಗೆ ಜೆಡಿಎಸ್ ಕಾರಣ. ನಾನು 25 ಸಾವಿರ ಕೋಟಿ ರೂ ಹಣವನ್ನು ಸಾಲ ಮನ್ನಾಗೆಂದು ಕ್ರೋಡಿಕರಿಸಿ ಕೊಟ್ಟೆ ಎಂದು ಹೇಳಿಕೊಂಡರು.

ಕೆರೆಯನ್ನು ನುಂಗಿ ಅಧಿಕಾರಿಗಳು, ರಾಜಕಾರಣಿಗಳು ಹೈಫೈ ಕಾಲೋನಿ ಮಾಡಿಕೊಂಡಿದ್ದರು. ಇದರಿಂದಾಗಿ ಅಕ್ಕ ಪಕ್ಕದ ಜನರು ಮಳೆ ಬಂದ್ರೆ ಸಾಕು ನೀರು ತುಂಬಿಕೊಂಡು ತೊಂದರೆ ಎದುರಿಸುತ್ತಿದ್ದರು. ಈ ಬಗ್ಗೆ ಕ್ರಮ ಕೈಗೊಂಡು, ಸಮಸ್ಯೆಯನ್ನು ನನ್ನ ಅವಧಿಯಲ್ಲಿ ಬಗೆಹರಿಸಿದ್ದೆ. ಈ ಖುಷಿಯಲ್ಲಿ ಹೆಲಿಕ್ಯಾಪ್ಟರ್ ನಲ್ಲಿ ಹೂಮಳೆಯನ್ನೇ ಸುರಿಸಿದ್ದರು. ವಿಪರ್ಯಾಸ ಅಂದ್ರೆ ಚುನಾವಣೆಯಲ್ಲಿ ಜನರು ಮಾತ್ರ ನಮ್ಮ ಪಕ್ಷಕ್ಕೆ ಮತ ಹಾಕಲೇ ಇಲ್ಲ. ಏನೂ ಕೆಲಸ ಮಾಡದವರಿಗೆ ಮಾತ್ರ ವೋಟು ಹಾಕಿ ಗೆಲ್ಲಿಸುತ್ತಾರೆ. ಇದು ಇಂದಿನ ಪರಿಸ್ಥಿತಿ ಎಂದು ನೋವು ತೋಡಿಕೊಂಡರು.

ನಾಡಿನ ಜನತೆಗೆ ಕೆಲ ವಿಚಾರಗಳನ್ನು ತಿಳಿಸಲು ಬಯಸುವೆ. ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ಅಭಿವೃದ್ಧಿ ಬಗ್ಗೆ ಚಿಂತನೆ ಇಲ್ಲ. ಬೆಂಗಳೂರಿನ ಅಭಿವೃದ್ಧಿ ಬಗ್ಗೆ ತಿಳುವಳಿಕೆ ಇಟ್ಟುಕೊಂಡ ಪಕ್ಷ ಜೆಡಿಎಸ್ ಮೈತ್ರಿಸರ್ಕಾರದ 14 ತಿಂಗಳ ಆಡಳಿತದ ಕಷ್ಟ ನನಗೆ ಗೊತ್ತು, ಬಿಜೆಪಿ 10% ಸರ್ಕಾರ ಅಂತ ಸಿದ್ದರಾಮಯ್ಯ ಹೇಳ್ತಾರೆ, ಕಾಂಗ್ರೆಸ್ ಸಹ ಪರ್ಸೆಂಟೇಜ್ ಸರ್ಕಾರ ಅಂತ ಮೋದಿನು ಹೇಳ್ತಾರೆ ನನ್ನ ಬಗ್ಗೆ ಹಾಗೆ ಹೇಳಲು ಸಾಧ್ಯ ಇಲ್ಲ ಎಂದರು.

ನನ್ನ ಸರ್ಕಾರಕ್ಕೆ ಯಾವನಾದರೂ ಹಾಗೆ‌ ಹೇಳಿದ್ದಾನಾ?. ಕೋವಿಡ್ ಕಾರಣ ಶಾಲೆಗಳು ನಡೆಯುತ್ತಿಲ್ಲ. ಆದರೂ ಖಾಸಗಿ ಶಾಲೆಗಳಿಂದ ಶುಲ್ಕ ವಸೂಲಿ ನಿಂತಿದೆಯಾ? ಎಂದು ಪ್ರಶ್ನಿಸಿದರು.

RELATED TOPICS:
English summary :HD Kumaraswamy

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...