ಐಎಂಎ ಹಗರಣ: ಮಾಜಿ ಸಚಿವ ರೋಷನ್ ಬೇಗ್ ಆಸ್ಪತ್ರೆಗೆ ದಾಖಲು | Janata news
ಬೆಂಗಳೂರು : ಐಎಂಎ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಐಎಂಎ ಸಂಸ್ಥಾಪಕ ಮನ್ಸೂರ್ ಖಾನ್ನಿಂದ 400 ಕೋಟಿ ರೂಪಾಯಿ ಪಡೆದ ಆರೋಪದಲ್ಲಿ ರೋಷನ್ ಬೇಗ್ ಅವರನ್ನ ಸಿಬಿಐ ಅರೆಸ್ಟ್ ಮಾಡಿತ್ತು.
ರೋಷನ್ ಬೇಗ್ ಅವರನ್ನು ಸಿಬಿಐ ವಶಕ್ಕೆ ಒಪ್ಪಿಸಿ ವಿಶೇಷ ನ್ಯಾಯಾಲಯ ಬುಧವಾರ ಆದೇಶ ಹೊರಡಿಸಿತ್ತು. ಈ ಸಂಬಂಧ ಬೇಗ್ ಅವರನ್ನು ಹೆಬ್ಬಾಳದಲ್ಲಿರುವ ಸಿಬಿಐ ಕಚೇರಿಗೆ ಕರೆತಂದು ವಿಚಾರಣೆಗೆ ಒಳಪಡಿಸುವ ಸಲುವಾಗಿ ಕರೆತರಲು ಪರಪ್ಪನ ಅಗ್ರಹಾರ ಜೈಲಿಗೆ ಅಧಿಕಾರಿಗಳು ತೆರಳಿದ್ದರು.
ಬೇಗ್ ಈಗಾಗಲೇ ಹಾರ್ಟ್ ಆಂಜಿಯೋಗ್ರಾಮ್ ಚಿಕಿತ್ಸೆಗೆ ಒಳಗಾಗಿದ್ದರು. ಹೀಗಾಗಿ ಮೆಡಿಕಲ್ ಡಯೆಟ್ನಲ್ಲಿದ್ದು, ಬಿಪಿ ಶುಗರ್ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು.
RELATED TOPICS:
English summary :Roshan Baig