Fri,Apr26,2024
ಕನ್ನಡ / English

ಯಾರನ್ನೋ ಮಂತ್ರಿ ಮಾಡಬೇಡಿ ಎನ್ನುವ ಕೀಳು ಮಟ್ಟಕ್ಕೆ ಇಳಿದಿಲ್ಲ, ಚನ್ನಪಟ್ಟಣಕ್ಕೆ ನಾನೇ ಮಂತ್ರಿ - ನಾನೇ ಸರ್ಕಾರ! | Janata news

27 Nov 2020
1182

ಚನ್ನಪಟ್ಟಣ : ಯಾರನ್ನೋ ಸಚಿವರನ್ನಾಗಿ ಮಾಡುತ್ತಾರೆಂದು ನಾನು ಹೆದರುತ್ತೇನಾ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಪರೋಕ್ಷವಾಗಿ ಸಿಪಿ‌ ಯೋಗೇಶ್ವರ್‌ ವಿರುದ್ಧ ಕಿಡಿಕಾರಿದರು.

ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ನಂತರ ಮಾತನಾಡಿದ ಅವರು, ತಾಲೂಕಿನ ನುಣ್ಣೂರು ಗ್ರಾಮದಲ್ಲಿ ಬಡವರ ಭೂಮಿ ಕಬಳಿಸಲು ಹೋದವರು ಈಗ ಮಂತ್ರಿಯಾಗಲು ಹೊರಟ್ಟಿದ್ದಾರೆಂದು ಕಿಡಿಕಾರಿದರು. ಯಾರನ್ನೋ ಮಂತ್ರಿ ಮಾಡುತ್ತಾರೆಂದು ನಾನು ಹೆದರುತ್ತೇನಾ. ನಮ್ಮ ಕುಟುಂಬದಲ್ಲಿ ಬಹಳ ಜನರನ್ನ ನೋಡಿದ್ದೇವೆ.

ಚನ್ನಪಟ್ಟಣಕ್ಕೆ ನಾನೇ ಮಂತ್ರಿ, ನಾನೇ ಸರ್ಕಾರ ಎಂದು ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಬಿಜೆಪಿಯಲ್ಲಿ ಯಾರನ್ನೋ ಮಂತ್ರಿ ಮಾಡಬೇಡಿ ಎಂದು ಹೇಳಿದ್ದೀನಂತೆ. ಯಾರನ್ನೋ ಮಂತ್ರಿ ಮಾಡಿದ್ರೆ ನಾನು ಹೆದರಿಕೊಳ್ಳುವವನಲ್ಲ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ಇನ್ನು ಕ್ಷೇತ್ರದ ಅಭಿವೃದ್ಧಿಗಾಗಿ ನಾನು ಸಿಎಂ ಅವರನ್ನು ಭೇಟಿ ಮಾಡಿದ್ದೇನೆ ಅಷ್ಟೇ, ಬೇರೆ ಯಾವ ಕಾರಣಕ್ಕೂ ಅಲ್ಲ. ಇಲ್ಲಿ 20 ಕೆರೆ ತುಂಬಿಸಿ ಭಗೀರಥ ಆದ್ರೂ, ಆದರೆ ನಾನು 128 ಕೆರೆ ತುಂಬಿಸಿದ್ದೇನೆ, ಆದರೆ ನಾನೇನು ಬೋರ್ಡ್ ಹಾಕಿಕೊಂಡಿಲ್ಲ ಎಂದರು.

ಇನ್ನು ನಾನು ಇಲ್ಲಿ ಇರುವವರೆಗೂ ಬಡವರರಿಗೆ ಅನ್ಯಾಯವಾಗಲೂ ಬಿಡಲ್ಲ, ಸಿಎಂ ಯಡಿಯೂರಪ್ಪನವರು ಈ ಜಿಲ್ಲೆಯಿಂದ ಇನ್ನು 4 ಜನರನ್ನ ಮಂತ್ರಿ ಮಾಡಲಿ ಹೆದರಿಸುವ ಶಕ್ತಿ ನನಗಿದೆ. ನನ್ನ ಬೆನ್ನಿಗೆ ಜನರಿದ್ದಾರೆ. ನಾನು ಯಾರನ್ನೋ ಮಂತ್ರಿ ಮಾಡಬೇಡಿ ಎನ್ನುವ ಕೀಳು ಮಟ್ಟಕ್ಕೆ ಇಳಿಯಲ್ಲ ಎಂದರು.

ಲಿಂಗಾಯತ ಸಮುದಾಯವನ್ನ ಒಬಿಸಿಗೆ ಸೇರಿಸುವ ವಿಚಾರವಾಗಿ ಈಗಿನ ರಾಜಕೀಯ ಪ್ರಸಂಗಗಳ ಬಗ್ಗೆ ಚರ್ಚೆ ಮಾಡುವುದಿಲ್ಲ. ಮೀಸಲಾತಿ, ಪ್ರಾಧಿಕಾರ ರಚನೆ ಮಾಡುವುದು ಅವರವರ ಇಚ್ಛೆ. ಅಧಿಕಾರ ನಡೆಸುವವರಿಗೆ ನಾನು ಸಲಹೆ ಕೊಡುತ್ತೇನೆ. ಪ್ರತಿ ಕುಟುಂಬಕ್ಕೂ ವಸತಿ, ಶಿಕ್ಷಣ, ಆರೋಗ್ಯ ಕಲ್ಪಿಸಬೇಕು. ಉದ್ಯೋಗ ಕಲ್ಪಿಸುವುದು ಸರ್ಕಾರದ ಕೆಲಸ ಎಂದು ಕುಮಾರಸ್ವಾಮಿ ಹೇಳಿದರು.

RELATED TOPICS:
English summary :HD Kumaraswamy

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...