Fri,Apr26,2024
ಕನ್ನಡ / English

ಒಂದೇ ಮನೆಯಲ್ಲಿ ಅಕ್ಕ-ತಂಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ! | Janata news

08 Dec 2020
2130

ಕಲಬುರಗಿ : ಒಂದೇ ಮನೆಯಲ್ಲಿ ಅಕ್ಕ-ತಂಗಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಐನಾಪುರ ಗ್ರಾಮದಲ್ಲಿ ಸೋಮವಾರ ನಡೆದಿದೆ.

ವಿಶ್ವನಾಥ ಸುತಾರ ಎಂಬುವರ ಪುತ್ರಿಯರಾದ ಐಶ್ವರ್ಯ ಸುತಾರ(20) ಹಾಗೂ ಸಾರಿಕಾ ಸುತಾರ(17) ಮೃತ ದುರ್ದೈವಿಗಳು. ಮನೆಯಲ್ಲಿ ಯಾರೂ‌ ಇಲ್ಲದೆ ಇರುವ ಸಮಯದಲ್ಲಿ ಇಬ್ಬರೂ ನೇಣು ಬಿಗಿದುಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ತಂದೆ ವಿಶ್ವನಾಥ ಸುತಾರ ಐನಾಪುರ ಗ್ರಾಮದಲ್ಲೇ ಚಹಾ ಅಂಗಡಿ ನಡೆಸುತ್ತಿದ್ದಾರೆ. ಇವರಿಗೆ ಒಟ್ಟು ಐವರು ಹೆಣ್ಣು ಮಕ್ಕಳೇ ಇದ್ದಾರೆ. ಈಗಾಗಲೇ ಮೂವರ ಮದುವೆಯಾಗಿದೆ. ಐದನೆಯವಳಾದ ಸಾರಿಕಾಗೆ ಒಂದೂವರೆ ತಿಂಗಳ ಹಿಂದೆ ಮದುವೆ ನಿಶ್ಚಯವಾಗಿತ್ತು. ನಾಲ್ಕನೇಯವಳಾದ ಐಶ್ವರ್ಯಗೆ ವರನನ್ನು ಹುಡುಕಲಾಗುತಿತ್ತು ಎನ್ನಲಾಗಿದೆ.

ಎಂದಿನಂತೆ ಸೋಮವಾರ ಮಧ್ಯಾಹ್ನ ಊಟಕ್ಕೆಂದು ಅಂಗಡಿಯಿಂದ ಮನೆಗೆ ಬಂದ ತಂದೆಗೆ ಈ ಸಹೋದರಿಯರೇ ಊಟ ಬಡಿಸಿದ್ದರು. ಊಟ ಮಾಡಿ ತಂದೆ ಅಂಗಡಿಗೆ ತೆರಳುತ್ತಿದ್ದಂತೆ ನೇಣುಬಿಗಿದುಕೊಂಡು ಅಕ್ಕ-ತಂಗಿ ಇಬ್ಬರೂ ಮೃತಪಟ್ಟಿದ್ದಾರೆ.

ಸಂಜೆ ತಾಯಿ ಹೊಲದಿಂದ ಮನೆಗೆ ಬಂದಾಗ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದು, ಬೆಳಕಿಗೆ ಬಂದಿದೆ. ಪಾಲಕರ ಆಕ್ರಂದನ ಮುಗಿಲುಮುಟ್ಟಿದೆ.

ಈ ಸಂಬಂಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Kalburgi

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...