Fri,May10,2024
ಕನ್ನಡ / English

ನೂತನ ಸಂಸತ್ ಭವನ ನಿರ್ಮಾಣಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶಿಲಾನ್ಯಾಸ | Janata news

10 Dec 2020
1776

ನವದೆಹಲಿ: : ದೆಹಲಿಯಲ್ಲಿ 971 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ನೂತನ ಸಂಸತ್ ಭವನದ ಕಟ್ಟಡಕ್ಕೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಭೂಮಿ ಪೂಜೆ ಮಾಡಿ, ಶಿಲಾನ್ಯಾಸ ನೆರವೇರಿಸಿದ್ದಾರೆ.

ಬಿಜೆಪಿ, ಕಾಂಗ್ರೆಸ್ ಸೇರಿದಂತೆ ನಾನಾ ರಾಜಕೀಯ ಪಕ್ಷಗಳ ನಾಯಕರು, ಸಚಿವರು, ವಿವಿಧ ದೇಶಗಳ ರಾಯಭಾರಿಗಳು, ರತನ್ ಟಾಟಾ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭಕ್ಕೆ ಸಾಕ್ಷಿಯಾದರು.

ದೆಹಲಿಯಲ್ಲಿ ಹೊಸ ಸಂಸತ್​ ಭವನ ಕಟ್ಟಡಕ್ಕೆ ಶಿಲಾನ್ಯಾಸ ನಡೆಸಿದ ನಂತರ ಮಾತನಾಡಿದ ಮೋದಿ, ಇಂದು ನಾವು ನೂತನ ಸಂಸತ್​ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಿದ್ದೇವೆ. ಈ ಐತಿಹಾಸಿಕ ದಿನಕ್ಕೆ 130 ಕೋಟಿ ಜನರು ಸಾಕ್ಷಿಯಾಗಿದ್ದಾರೆ. ಅವಶ್ಯಕತೆಗೆ ಅನುಗುಣವಾಗಿ ನಾವು ಈ ಬದಲಾವಣೆ ಮಾಡುತ್ತಿದ್ದೇವೆ ಎಂದರು.

ಬಸವಣ್ಣನವರ ಅನುಭವ ಮಂಟಪದ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, 12ನೇ ಶತಮಾನದಲ್ಲಿ ಅನುಭವ ಮಂಟಪ ಅಸ್ತಿತ್ವದಲ್ಲಿತ್ತು. ಅನುಭವ ಮಂಟಪ ನಾಡಿನ ಅಭಿವೃದ್ಧಿ ಮತ್ತು ಉನ್ನತಿಗೆ ಕೆಲಸ ಮಾಡಿತ್ತು ಎಂದು ಕೊಂಡಾಡಿದರು. ಬಸವಣ್ಣನವರ ಮಾತನ್ನು ಮೋದಿ ಕನ್ನಡದಲ್ಲೇ ಹೇಳಿದ್ದು ವಿಶೇಷವಾಗಿತ್ತು.

ದೆಹಲಿಯ ಸಂಸತ್ತು ಭವನ ಆವರಣದಲ್ಲಿಯೇ ನೂತನ ಸಂಸತ್ತು ಭವನ ತಲೆಯೆತ್ತಲಿದ್ದು, 2022ರ ವೇಳೆಗೆ ನಿರ್ಮಾಣ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

ಕರ್ನಾಟಕದ ಶೃಂಗೇರಿ ಮಠದ ಅರ್ಚಕರ ನೇತೃತ್ವದಲ್ಲಿ ಭೂಮಿ ಪೂಜೆ ನೆರವೇರಿತು. ನಂತರ ಅಂತರ ಧರ್ಮ ಪ್ರಾರ್ಥನೆಯ ಧ್ಯೋತಕವಾಗಿ ಸರ್ವಧರ್ಮ ಪ್ರಾರ್ಥನೆ ನೆರವೇರಿತು.

RELATED TOPICS:
English summary :New Parliament building live updates: New Parliament will be testament to Atmanirbhar Bharat,

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...