Tue,May07,2024
ಕನ್ನಡ / English

ಬಾಕಿ ವೇತನಕ್ಕೆ ಆಗ್ರಹಿಸಿ ಐಫೋನ್ ಉತ್ಪಾದನಾ ಘಟಕದಲ್ಲಿ ನೌಕರರಿಂದಲೇ ದಾಂಧಲೆ: ಕಚೇರಿ ಮೇಲೆ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ | Janata news

12 Dec 2020
1136

ಬೆಂಗಳೂರು : ಬೆಂಗಳೂರು ಬಳಿಯ ನರಸಾಪುರದಲ್ಲಿರುವ (ಕೋಲಾರ ಜಿಲ್ಲೆಯ) ತೈವಾನ್ ಮೂಲದ ಐಫೋನ್‌ ಘಟಕದಲ್ಲಿ ಸರಿಯಾಗಿ ವೇತನ ನೀಡುತ್ತಿಲ್ಲ ಎಂಬ ಕಾರಣಕ್ಕೆ ರೊಚ್ಚಿಗೆದ್ದ ಉದ್ಯೋಗಿಗಳು ಐ-ಫೋನ್ ಉತ್ಪಾದನಾ ಘಟಕದಲ್ಲಿ ದಾಂದಲೆ ನಡೆಸಿದ್ದಾರೆ.

ಕೋಲಾರದ ನರಸಾಪುರದ ಕೈಗಾರಿಕಾ ಪ್ರದೇಶದಲ್ಲಿರುವ ವಿಸ್ಟ್ರಾನ್ ಕಂಪನಿ ತನ್ನ ಕಾರ್ಮಿಕರಿಗೆ ಸರಿಯಾದ ವೇತನ ನೀಡದೇ ವಂಚಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಹೆಚ್ಚು ಹೊತ್ತು ದುಡಿಸಿಕೊಂಡು ಕಡಿಮೆ ಸಂಬಳ ನೀಡಲಾಗುತ್ತಿದೆ. ಕಳೆದ ನಾಲ್ಕು ತಿಂಗಳಿಂದ ಸರಿಯಾಗಿ ವೇತನ ನೀಡಿಲ್ಲ ಎಂದು ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಬೆಳಗ್ಗೆ 4 ಗಂಟೆಯಿಂದಲೇ ಕಾರ್ಮಿಕರು ಇಲ್ಲಿ ಮುಷ್ಕರ ಪ್ರಾರಂಭಿಸಿದ್ದರು.

ಇದೀಗ ಪ್ರತಿಭಟನೆ ಉಗ್ರ ಸ್ವರೂಪ ತಾಳಿದ್ದು, ಬಾಕಿ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಂತ ನೌಕರರು ವಿಸ್ಟ್ರಾನ್ ಕಂಪನಿಯ ಕಚೇರಿಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

janata

ನೂರಾರು ಸಂಖ್ಯೆಯಲ್ಲಿ ಐ-ಫೋನ್ ಉತ್ಪಾದನಾ ಘಟಕಕ್ಕೆ ನುಗ್ಗಿದ ಜನರು ಅಲ್ಲಿನ ಪೀಠೋಪಕರಣಗಳು ಸೇರಿದಂತೆ ಸಿಕ್ಕ ಸಿಕ್ಕ ವಸ್ತುಗಳನ್ನೆಲ್ಲಾ ಹಾಳು ಮಾಡಿದ್ದಾರೆ. ಭಾರೀ ಪ್ರಮಾಣದಲ್ಲಿ ಗ್ಲಾಸ್‌ಗಳನ್ನೆಲ್ಲಾ ಪುಡಿ ಮಾಡಲಾಗಿದೆ. ಜೊತೆಗೆ ಕಾರುಗಳನ್ನು ಕೂಡ ಜಖಂಗೊಳಿಸಲಾಗಿದೆ.

ಕಂಪನಿ ನಮಗೆ ನಾಲ್ಕು ತಿಂಗಳಿಂದ ವೇತನ ಕೊಟ್ಟಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದರೆ. ಹಾಗಾಗಿ, ಆಕ್ರೋಶಗೊಂಡ ಕಾರ್ಮಿಕರಿಂದ ಕಚೇರಿಯ ಮೇಲೆ ದಾಳಿ ಮತ್ತು ಕಲ್ಲು ತೂರಾಟ ನಡೆದಿದೆ ಎಂದು ಹೇಳಲಾಗಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ವೇಮಗಲ್ ಪೊಲೀಸರು ಪರಿಶೀಲನೆ ನಡೆಸಿದರು.

janata

ಸುಮಾರು 11,000 ಕಾರ್ಮಿಕರು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿಯ ಪಾಳಿಗೆ ಬಂದಂತಹ ಸಾವಿರಾರು ಕಾರ್ಮಿಕರು ಈ ಕೃತ್ಯವೆಸಗಿದ್ದು, ಕಂಪನಿಯ ಗಾಜಿನ ಆವರಣಗಳನ್ನು ಒಡೆದು ಹಾಕಿದ್ದಲ್ಲದೆ ಕಂಪನಿಯಲ್ಲಿದ್ದ ಬೆಲೆಬಾಳುವ ಲ್ಯಾಪ್ ಟಾಪ್, ಐಪೋನ್ ಪೋನ್ ಗಳನ್ನು ತೆಗೆದುಕೊಂಡು‌ ಹೋಗಿದ್ದಾರೆ ಎಂದು ಕಂಪನಿ ಮೂಲಗಳು ತಿಳಿಸಿವೆ.

ಪರಿಸ್ಥಿತಿ ಕೈ ಮೀರಿದ ಕಾರಣ ಸ್ಥಳಕ್ಕಾಗಮಿಸಿದ ವೇಮಗಲ್ ಪೊಲೀಸ್ ಠಾಣೆಯ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಉದ್ರಿಕ್ತ ನೌಕರರನ್ನು ಅಲ್ಲಿಂದ ಚದುರಿಸಿದ್ದಾರೆ.

janata

RELATED TOPICS:
English summary : Violence at iPhone production plant run by Taiwan-based Wistron Corp at Narasapura (in Kolar district) near Bengaluru.

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...