Tue,May21,2024
ಕನ್ನಡ / English

ಕೆಎಸ್ಆರ್‌ಟಿಸಿ ನಷ್ಟಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಕಾರಣ: ಮುಖ್ಯಮಂತ್ರಿ ಯಡಿಯೂರಪ್ಪ | Janata news

12 Dec 2020
1622

ಬೆಂಗಳೂರು : ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ದುರುದ್ದೇಶದಿಂದ ಕೆಲವು ಸಾರಿಗೆ ನೌಕರರನ್ನು ಎತ್ತಿಕಟ್ಟಿ ಮುಷ್ಕರ ನಡೆಸಲು ಕಾರಣಕರ್ತರಾಗಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್​ ಅವರು ಸಾರಿಗೆ ನೌಕರರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಪ್ರತಿಭಟನೆ, ಮುಷ್ಕರದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಲು, ಬಸ್​ಗಳಿಗೆ ಕಲ್ಲು ತೂರಾಟ ನಡೆಸಿ ನಷ್ಟ ಉಂಟು ಮಾಡಲು ಕೋಡಿಹಳ್ಳಿ ಚಂದ್ರಶೇಖರ್​ರೇ ಕಾರಣ. ಅಲ್ಲದೆ, ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರ ವಿರುದ್ಧ ಅವರು ಆಡಿರುವ ಲಘುವಾದ ಮಾತುಗಳು ಸರಿಯಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅವಶ್ಯಕ ಸೇವೆಯಡಿ ಬರುವ ಸಾರಿಗೆ ಸಂಸ್ಥೆ ನೌಕರರು ಮುಷ್ಕರ ನಡೆಸುತ್ತಿರುವುದು ಅತ್ಯಂತ ದುರದೃಷ್ಟಕರ ಸಂಗತಿ. ಈ ಮುಷ್ಕರದಿಂದ ರಾಜ್ಯದೆಲ್ಲೆಡೆ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಈಗಾಗಲೇ ಸಾರಿಗೆ ಸಂಸ್ಥೆಯ ನೌಕರರ ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ಬಗೆಹರಿಸಲು ಸಾರಿಗೆ ಸಚಿವ ಲಕ್ಷ್ಮಣ್ ಸವದಿಗೆ ಸಲಹೆ ಸೂಚನೆಗಳನ್ನು ನೀಡಿದ್ದು, ಅವರು ಕೂಡಾ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಆದರೆ, ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ಅವರು ದುರುದ್ದೇಶದಿಂದ ಕೆಲವು ನೌಕರರನ್ನು ಎತ್ತಿಕಟ್ಟಿ, ಮುಷ್ಕರ ನಡೆಸಲು ಮತ್ತು ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಲು ಪ್ರಚೋದಿಸಿದ್ದಾರೆ, ಎಂದು ಸಿಎಂ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಸಾರಿಗೆ ನೌಕರರು ಸತ್ಯಾಗ್ರಹ ನಿಲ್ಲಿಸಿ ಕರ್ತವ್ಯಕ್ಕೆ ಮರಳಿ, ಈ ಮುಷ್ಕರದಿಂದ ರಾಜ್ಯದೆಲ್ಲೆಡೆ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಸಾರಿಗೆ ನೌಕರರ ಜತೆ ಮಾತುಕತೆಗೆ ನಾವು ಸಿದ್ಧ. ಸಾರಿಗೆ ಸಿಬ್ಬಂದಿ ಜತೆ ಸಚಿವ ಲಕ್ಷ್ಮಣ ಸವದಿ‌ ನಿರಂತರ ಸಂಪರ್ಕದಲ್ಲಿದ್ದಾರೆ. ಸಾರ್ವಜನಿಕ ಹಿತದೃಷ್ಟಿಯಿಂದ ಕೂಡಲೇ ಸತ್ಯಾಗ್ರಹ ನಿಲ್ಲಿಸಿ ಸಾರಿಗೆ ಸಚಿವರ ಜತೆ ಚರ್ಚೆಗೆ ಬನ್ನಿ ಎಂದು ಯಡಿಯೂರಪ್ಪ ಕೋರಿದ್ದಾರೆ.

janata

RELATED TOPICS:
English summary :BSYediyurappa

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...