Sun,May19,2024
ಕನ್ನಡ / English

ಕಾಂಗ್ರೆಸ್ ಶಾಸಕಾಂಗ ಪಕ್ಷದಲ್ಲಿಯೇ ಗೂಂಡಾಗಿರಿ ಮಾಡುವ ಬಗ್ಗೆ ತೀರ್ಮಾನಿಸಲಾಗಿದೆ: ಸಚಿವ ಎಸ್ ಟಿ ಸೋಮಶೇಖರ್ | Janata news

16 Dec 2020
1436

ಮೈಸೂರು : ವಿಧಾನ ಪರಿಷತ್ ಸಭಾಪತಿಗಳ ಖುರ್ಚಿಗೆ ಅದರದ್ದೇ ಆದ ಗೌರವವಿದೆ. ಇದು ಕಾಂಗ್ರೆಸ್ ನವರ ಪೂರ್ವನಿಯೋಜಿತ ಸಂಚು ಎನಿಸುತ್ತದೆ, ಕಾಂಗ್ರೆಸ್ ಶಾಸಕಾಂಗ ಪಕ್ಷದಲ್ಲಿಯೇ ಗೂಂಡಾಗಿರಿ ಮಾಡುವ ಹಾಗೂ ದಾಂಧಲೆ ಮಾಡುವ ಬಗ್ಗೆ ತೀರ್ಮಾನಿಸಲಾಗಿದೆ ಎಂದರು.

ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮೊದಲ ಬಾರಿ ಎಂಎಲ್ಸಿ ಆದವರೂ ಸಹ ಆ ಖುರ್ಚಿಯಲ್ಲಿ ಕೂರುತ್ತಾರೆಂದರೆ ಏನರ್ಥ? ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಪ್ರಶ್ನಿಸಿದರು.

ಸಭಾಪತಿಗಳ ಮೇಲೆ ಅವಿಶ್ವಾಸ ನಿರ್ಣಯವನ್ನು ನಮ್ಮ ಪಕ್ಷದ ಸದಸ್ಯರು ಮಂಡಿಸಿದ್ದು ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲವೇ? ಎಲ್ಲರಿಗೂ ನೀತಿ, ಕಾನೂನು ಹೇಳುವ ಅವರು ತಮ್ಮ ಪಕ್ಷದ ನಾಯರಿಗೆ ಬುದ್ಧಿ ಹೇಳಲಿ, ಗೂಂಡಾಗಿರಿ ಮಾಡಿದವರನ್ನು ಅಮಾನತು ಮಾಡಲಿ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಗೌರವಾನ್ವಿತ ಹಿರಿಯ ಸದಸ್ಯರೂ ಉಪ ಸಭಾಪತಿಗಳಾದ ಧರ್ಮೇಗೌಡರನ್ನು ಎಳೆದಾಡಿ ಗೂಂಡಾಗಿರಿ ಮಾಡಿದ ಹಾಗೆ ಬಲತ್ಕಾರವಾಗಿ ಕುರ್ಚಿಯಿಂದ ಎಳೆದಾಡಿದ್ದು ಖಂಡನೀಯ. ಇದು ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.

ಕಾಂಗ್ರೆಸ್ ನವರಿಗೆ ಮರ್ಯಾದೆ ಉಳಿಸಿಕೊಳ್ಳಬೇಕೆಂದಿದ್ದರೆ ಹೀಗೆ ಗೂಂಡಾಗಿರಿ ಮಾಡಿದವರನ್ನು ಪಕ್ಷದಿಂದ ಅಮಾನತು ಮಾಡಬೇಕು. ಚಿಂತಕರ, ಬುದ್ದಿವಂತರ ಚಾವಡಿ ಎಂದೇ ಹೆಸರಾಗಿದ್ದ ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಇಂತಹ ಕೀಳುಮಟ್ಟದ ರಾಜಕೀಯಕ್ಕೆ ಇಳಿಯುತ್ತದೆ ಎಂದರೆ ಹೇಗೆ ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ಇದು ಅವರ ಸಂಸ್ಕೃತಿಯನ್ನು ಎತ್ತಿ ತೋರಿಸುತ್ತದೆ. ಕಾಂಗ್ರೆಸ್ ವರ್ತನೆ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿದ್ದೇವೆ ಎಂದು ಸಚಿವರಾದ ಸೋಮಶೇಖರ್ ಹೇಳಿದರು.

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...