ಮನೆಗೆ ನುಗ್ಗಿದ ದರೋಡೆಕೋರರು, ಕತ್ತಿಯಿಂದ ಹಲ್ಲೆ ನಡೆಸಿ ಮನೆ ದರೋಡೆ! | Janata news
ಮಂಗಳೂರು : ಮನೆಯೊಂದಕ್ಕೆ ದರೋಡೆಕೊರರು ನುಗ್ಗಿ ನಗ ನಗದು ದರೋಡೆ ಮಾಡಿದ ಘಟನೆ ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದಲ್ಲಿ ನಡೆದಿದೆ.
ಸೌತಡ್ಕ ದೇವಸ್ಥಾನಕ್ಕೆ ತೆರಳುವ ರಸ್ತೆ ಸಮೀಪದ ನೂಜೆ ತುಕ್ರಪ್ಪ ಶೆಟ್ಟಿ ಎಂಬವರ ಮನೆಗೆ ಸುಮಾರು ಒಂಭತ್ತು ಮಂದಿ ದರೋಡೆಕೋರರ ತಂಡ ನುಗ್ಗಿ ಮನೆಯ ಯಜಮಾನ ಮತ್ತು ಅವರ ಪತ್ನಿ ಮೇಲೆ ಹಲ್ಲೆ ನಡೆಸಿ ಲಕ್ಷಾಂತರ ರೂ. ಮೌಲ್ಯದ ನಗನಗದು ದೋಚಿರುವುದಾಗಿ ದೂರಲಾಗಿದೆ.
ಕೊಕ್ಕಡ ಗ್ರಾಮದ ಸೌತಡ್ಕ ದೇವಸ್ಥಾನಕ್ಕೆ ತೆರಳುವ ರಸ್ತೆ ಅಂಚಿನಲ್ಲಿರುವ ನೂಜೆ ತುಕ್ರಪ್ಪ ಶೆಟ್ಟಿಯವರ ಮನೆಯಲ್ಲಿ ಈ ಆತಂಕಕಾರಿ ಘಟನೆ ನಡೆದಿದ್ದು, ತುಕ್ರಪ್ಪ ಶೆಟ್ಟಿಯವರ ಪತ್ನಿಗೆ ಕತ್ತಿಯಿಂದ ಇರಿದು ತೀವ್ರ ಗಾಯಗಳಾಗಿದ್ದು ಇವರನ್ನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನೆಯಲ್ಲಿ ಪತಿ, ಪತ್ನಿ ಮತ್ತು ಇಬ್ಬರು ಸಣ್ಣ ಮಕ್ಕಳು ಮಾತ್ರ ಇದ್ದ ಸಂದರ್ಭದಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಸಿ ಕೂಡಿ ಹಾಕಿ ಈ ದರೋಡೆ ನಡೆಸಲಾಗಿದೆ ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ದೋಚಿಕೊಂಡು ಡಕಾಯಿತರ ತಂಡ ಬೆಳಗ್ಗಿನ ಜಾವ ಪರಾರಿಯಾಗಿದೆ.
ನೂಜೆ ತುಕ್ರಪ್ಪ ಶೆಟ್ಟಿ ವಿಶ್ವ ಹಿಂದೂ ಪರಿಷತ್ ನ ಕೊಕ್ಕಡ ವಲಯ ಅಧ್ಯಕ್ಷ ಎಂದು ತಿಳಿದುಬಂದಿದೆ. ಡಕಾಯಿತರು ತೆರಳುತ್ತಲೆ ಮನೆಯವರು ಧರ್ಮಸ್ಥಳ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಕೂಡಲೆ ಪೊಲೀಸ್ ಅಧಿಕಾರಿಗಳು ಘಟನೆ ನಡೆದ ಮನೆಗೆ ಧಾವಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.