ದಲೈ ಲಾಮಾ ಅವರನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಚೀನಾ ಸರ್ಕಾರದ ಹಸ್ತಕ್ಷೇಪವನ್ನು ಅಮೆರಿಕ(ಯುಎಸ್) ಬಲವಾಗಿ ವಿರೋಧಿಸಿದೆ. ಟಿಬೆಟ್‌ನಲ್ಲಿ ಧಾರ್ಮಿಕ ಸ್ವಾತಂತ್ರ್ಯವನ್ನು ಬೆಂಬಲ"/>
Sat,May18,2024
ಕನ್ನಡ / English

ಚೀನಾ ವಿರುದ್ಧ, ಟಿಬೆಟ್ ಬೆಂಬಲಿಸಿ ಐತಿಹಾಸಿಕ ಕಾನೂನು ಅಂಗಿಕರಿಸಿದ ಅಮೇರಿಕ ಸಂಸತ್ತು | Janata news

23 Dec 2020
1415

ವಾಷಿಂಗ್ಟನ್ : ಭಾರತದೊಂದಿಗೆ ಚೀನಾದ ಎಲ್‌ಎಸಿ(ಟಿಬೆಟ್ ಗಡಿ) ಉದ್ದಕ್ಕೂ ನಡೆಯುತ್ತಿರುವ ಮುಖಾಮುಖಿಯ ಮಧ್ಯೆ, ಟಿಬೆಟ್‌ನಲ್ಲಿ ದಲೈ ಲಾಮಾ ಅವರನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಚೀನಾ ಸರ್ಕಾರದ ಹಸ್ತಕ್ಷೇಪವನ್ನು ಅಮೆರಿಕ(ಯುಎಸ್) ಬಲವಾಗಿ ವಿರೋಧಿಸಿದೆ.

ಟಿಬೆಟ್‌ನಲ್ಲಿ ಧಾರ್ಮಿಕ ಸ್ವಾತಂತ್ರ್ಯವನ್ನು ಬೆಂಬಲ ವ್ಯಕ್ತಪಡಿಸುತ್ತ ಯುಎಸ್ ಸಂಸತ್ತು ಹೊಸ ಕಾನೂನನ್ನು ಅಂಗೀಕರಿಸಿದೆ. ಭಾರತ, ನೇಪಾಳ, ಭೂತಾನ್ ಮತ್ತು ಮಂಗೋಲಿಯಾದಂತಹ ದೇಶಗಳಲ್ಲಿಯೂ ಬೌದ್ಧಧರ್ಮವನ್ನು ಆಚರಿಸಿದಾಗ, ಚೀನಾದ ಕಮ್ಯುನಿಸ್ಟ್ ಸರ್ಕಾರವು ಮಾತ್ರ, ಧಾರ್ಮಿಕ ಗುರುವನ್ನು(ದಲೈ ಲಾಮಾ) ಆರಿಸುವಲ್ಲಿ ಏಕೆ ಅಡ್ಡಿಪಡಿಸುತ್ತಿದೆ, ಎಂದು ಹೊಸ ಕಾನೂನು ಸ್ಪಷ್ಟವಾಗಿ ಹೇಳುತ್ತದೆ.

ಸೋಮವಾರ ರಾತ್ರಿ, ಅಮೇರಿಕ ಸಂಸತ್ತು ಟಿಬೆಟ್ ನೀತಿ ಮತ್ತು ಬೆಂಬಲ ಕಾಯ್ದೆಯನ್ನು ಅಂಗೀಕರಿಸಿತು. ಮಸೂದೆಯು ಟಿಬೆಟ್‌ನಲ್ಲಿ ಧಾರ್ಮಿಕ-ಸ್ವಾತಂತ್ರ್ಯಯನ್ನು ಬೆಂಬಲಿಸುತ್ತದೆ ಮತ್ತು ಪ್ರಜಾಪ್ರಭುತ್ವವನ್ನು ಬಲಪಡಿಸುವ, ಪರಿಸರ ಸಂರಕ್ಷಣೆ, ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಉಳಿಸುವ ಕುರಿತು ಬೆಂಬಲಿಸಲಾಗಿದೆ.

ಅಮೇರಿಕಾದ ಹೊಸ ಕಾನೂನು ದಲೈ-ಲಾಮಾ ಬೆಂಬಲಿತ ಪ್ರಜಾಪ್ರಭುತ್ವ ಸರ್ಕಾರವನ್ನು ಸಂಪೂರ್ಣವಾಗಿ ಅನುಮೋದಿಸಿದ್ದು, ಟಿಬೆಟ್‌ಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲು ಚೀನಾ ಸರ್ಕಾರವನ್ನು ಕೋರಲಾಗಿದೆ. ಇದನ್ನು ಮಾಡದಿದ್ದರೆ, ಚೀನಾ ಮೇಲೆ ನಿರ್ಬಂಧ ಹೇರಲು ಹೊಸ ಕಾನೂನಿನಲ್ಲಿ ಹೇಳಲಾಗಿದೆ.

ಮಂಗಳವಾರ ದೇಶದಿಂದ ಹೊರಹಾಕಲ್ಪಟ್ಟಿರುವ ಟಿಬೆಟಿಯನ್ನರ ರಾಜಕೀಯ ಮುಖ್ಯಸ್ಥರು, ಚೀನಾ ವಿರುದ್ಧದ, ಯು.ಎಸ್. ಅಂಗೀಕರಿಸಿದ ಶಾಸನವನ್ನು ಸ್ವಾಗತಿಸಿದರು, ಇದು ತಮ್ಮ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲು ಟಿಬೆಟಿಯನ್ನರ ಹಕ್ಕುಗಳನ್ನು ಪುನರುಚ್ಚರಿಸುತ್ತದೆ, ಎಂದು ಹರ್ಷ ವ್ಯಕ್ತ ಪಡಿಸಿದ್ದಾರೆ.

ಚೀನಾ ಕಮ್ಯುನಿಸ್ಟ್ ಸರ್ಕಾರ, ದಲೈ ಲಾಮಾ ಅವರನ್ನು ಅಪಾಯಕಾರಿ ಪ್ರತ್ಯೇಕತಾವಾದಿ ಎಂದು ಪರಿಗಣಿಸುತ್ತಿದ್ದು, ಟಿಬೆಟ್ ಕುರಿತಾದ ಯು.ಎಸ್. ಸಂಸತ್ತಿನ ಈ ಬೆಂಬಲವು, ಅಮೇರಿಕ-ಚೀನಾ ದೇಶಗಳ ನಡುವೆ ಈಗಾಗಲೇ ಉದ್ವಿಗ್ನ ಸಂಬಂಧವನ್ನು ಹೆಚ್ಚಿಸಬಹುದಾಗಿದೆ.

RELATED TOPICS:
English summary :US congress passes landmark bill in support of Tibet, against China

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...