ಬಸ್ ಗಾಗಿ ಕಾಯುತ್ತಿದ್ದ ಇಬ್ಬರ ಮೇಲೆ ಹರಿದ ಕಾರು, ಸ್ಥಳದಲ್ಲಿಯೇ ಇಬ್ಬರ ಸಾವು! | Janata news
ಉಡುಪಿ : ಬಸ್ ಗಾಗಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಇಬ್ಬರಿಗೆ ಕಾರು ಡಿಕ್ಕಿಯಾಗಿ ಇಬ್ಬರೂ ಸಾವನ್ನಪ್ಪಿದ ಘಟನೆ ಪಡುಬಿದ್ರಿ ಸಮೀಪದ ಎರ್ಮಾಳಿನಲ್ಲಿ ನಡೆದಿದೆ.
ಮೃತರನ್ನು ಎರ್ಮಾಳ್ ನಿವಾಸಿ ಸಂಜೀವ ದೇವಾಡಿಗ (45) ಮತ್ತು ಉತ್ತರ ಪ್ರದೇಶ ಮೂಲದ ಅರವಿಂದ್ (22) ಎಂದು ಗುರುತಿಸಲಾಗಿದೆ.
ಉಡುಪಿ ಕಡೆಯಿಂದ ಮಂಗಳೂರಿನತ್ತ ಚಲಿಸುತ್ತಿದ್ದ ಮಾರುತಿ ಅಲ್ಟೋ ಕಾರು ರಾಷ್ಟ್ರೀಯ ಹೆದ್ದಾರಿ 66ರ ತೆಂಕ ಎರ್ಮಾಳ್ ಸರಕಾರಿ ಶಾಲೆ ಮುಂಭಾಗದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಇಬ್ಬರಿಗೆ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
English summary :Udupi