Mon,May06,2024
ಕನ್ನಡ / English

ಪುದುಚೇರಿಯಲ್ಲಿ ಪಂಚಾಯತ್ ಚುನಾವಣೆ ನಡೆಸದ ಕೆಲವರು ದೆಹಲಿಯಲ್ಲಿ ಪ್ರಜಾಪ್ರಭುತ್ವದ ಪಾಠ ಮಾಡುತ್ತಿದ್ದಾರೆ: ಪ್ರಧಾನಿ ಮೋದಿ | Janata news

26 Dec 2020
1340

ನವದೆಹಲಿ: : ದೆಹಲಿಯ ಕೆಲವು ವ್ಯಕ್ತಿಗಳು ನನಗೆ ಪ್ರಜಾಪ್ರಭುತ್ವದ ಪಾಠ ಕಲಿಸಲು ಬಯಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಗೆ ತಿರುಗೇಟು ನೀಡಿದ್ದಾರೆ.

ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನಗಳನ್ನು ಕೇಂದ್ರಾಡಳಿತ ಪ್ರದೇಶದ ಎಲ್ಲಾ ನಿವಾಸಿಗಳಿಗೆ ವಿಸ್ತರಿಸಲು ವಿಡಿಯೋ-ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಪಂಚಾಯತ್ ಮತ್ತು ಪುರಸಭೆ ಚುನಾವಣೆಗಳನ್ನು ನಡೆಸದಿರುವ ಕಾಂಗ್ರೆಸ್ ಪ್ರಜಾಪ್ರಭುತ್ವದ ಪಾಠ ಒಪ್ಪಿಸುತ್ತಿದೆ ಎಂದು ವಿಪಕ್ಶಕ್ಕೆ ತಿರುಗೇಟು ಕೊಟ್ಟರು. ಅಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾದ ನಂತರ ಇದೇ ಮೊದಲ ಬಾರಿಗೆ ಮೂರು ಹಂತದಲ್ಲಿ ಇಲ್ಲಿ ಚುನಾವಣೆ ನಡೆದಿದೆ.

ದೆಹಲಿಯ ಕೆಲವು ವ್ಯಕ್ತಿಗಳು ಯಾವಾಗಲೂ ಟೀಕಿಸುತ್ತಾ ನನ್ನ ಅವಮಾನಿಸುತ್ತಿದ್ದಾರೆ. ಅವರು ನನಗೆ ಪ್ರಜಾಪ್ರಭುತ್ವದ ಪಾಠ ಕಲಿಸಲು ಬಯಸುತ್ತಿದ್ದಾರೆ. ಆದರೆ ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ ಅವರು ಪುದುಚೇರಿಯಲ್ಲಿ ಪಂಚಾಯತ್ ಚುನಾವಣೆ ನಡೆಸಲಿಲ್ಲ ಏಕೆ? ಎಂದು ಕೇಳಿದ್ದಾರೆ. ನಾನು ಅವರಿಗೆ ಜಮ್ಮು-ಕಾಶ್ಮೀರದ ಡಿಡಿಸಿ ಚುನಾವಣೆಯನ್ನೇ ಪ್ರಜಾಪ್ರಭುತ್ವದ ಉದಾಹರಣೆಯನ್ನಾಗಿ ತೋರಿಸುತ್ತೇನೆ.

ಕೆಲವು ರಾಜಕೀಯ ಶಕ್ತಿಗಳು ಪ್ರಜಾಪ್ರಭುತ್ವದ ಬಗ್ಗೆ ಉಪನ್ಯಾಸ ನೀಡುತ್ತಲೇ ಇರುತ್ತವೆ ಆದರೆ, ಅವರ ದ್ವಂದ್ವತೆ ಮತ್ತು ಪವಿತ್ರತೆಯನ್ನು ನೋಡಿ ಎಂದು ಕುಟುಕಿದ್ದಾರೆ. ಪುದುಚೇರಿಯಲ್ಲಿ ಆಡಳಿತ ನಡೆಸುವ ಪಕ್ಷವು ಸುಪ್ರೀಂ ಕೋರ್ಟ್‌ನ ಆದೇಶದ ಹೊರತಾಗಿಯೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಿಲ್ಲ, ಆದರೆ, ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾದ ಬಳಿಕ ವರ್ಷದೊಳಗೆ ಪಂಚಾಯತ್ ಮಟ್ಟದ ಚುನಾವಣೆಗಳನ್ನು ನಡೆಸಲಾಯಿತು ಎಂದು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಜಾಪ್ರಭುತ್ವದ ಬೇರುಗಳನ್ನು ಬಲಪಡಿಸಿವೆ ಎಂದ ಪ್ರಧಾನಿ ಚುನಾವಣೆಯಲ್ಲಿ ಮತದಾನ ಮಾಡಿದ ಮತದಾರರಿಗೆ ಅಭಿನಂದನೆಗಳನ್ನು ತಿಳಿಸಿದರು.

RELATED TOPICS:
English summary :Some people in Delhi trying to teach me democracy: PM Narendra Modi

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...