ಕುಮಾರಸ್ವಾಮಿ ವಿಧಾನ ಪರಿಷತ್ ನಲ್ಲಿ ಧರ್ಮೇಗೌಡರನ್ನು ಹಿಡಿದು ಎಳೆದಾಡಿದವರನ್ನು ಪರೋಕ್ಷವಾಗಿ ತರಾಟೆ ತೆಗೆದುಕೊಂಡಿದ್ದಾರೆ ಹಾಗೂ ಆತ್ಮಾವಲೋಕನ ಮಾಡಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಎಚ್‌ಡಿಕೆ ಅವರು, ಧರ್ಮೇಗೌಡರ ಆತ್ಮಹತ್ಯೆಯು ಇವತ್ತಿನ ಕಲುಷಿತ, ತತ್ವ"/>
Sun,May19,2024
ಕನ್ನಡ / English

ಧರ್ಮೇಗೌಡರ ಆತ್ಮಹತ್ಯೆ ತತ್ವ ರಹಿತ, ಸ್ವಾರ್ಥ ರಾಜಕಾರಣಕ್ಕೆ ನಡೆದ ಬಲಿ - ಎಚ್‌ಡಿಕೆ | Janata news

29 Dec 2020
2758

ಚಿಕ್ಕಮಗಳೂರು : ಉಪ ಸಭಾಪತಿ ಧರ್ಮೇಗೌಡರ ಆತ್ಮಹತ್ಯೆಗೆ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ವಿಧಾನ ಪರಿಷತ್ ನಲ್ಲಿ ಧರ್ಮೇಗೌಡರನ್ನು ಹಿಡಿದು ಎಳೆದಾಡಿದವರನ್ನು ಪರೋಕ್ಷವಾಗಿ ತರಾಟೆ ತೆಗೆದುಕೊಂಡಿದ್ದಾರೆ ಹಾಗೂ ಆತ್ಮಾವಲೋಕನ ಮಾಡಿಕೊಳ್ಳುವಂತೆ ಸಲಹೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಎಚ್‌ಡಿಕೆ ಅವರು, ಧರ್ಮೇಗೌಡರ ಆತ್ಮಹತ್ಯೆಯು ಇವತ್ತಿನ ಕಲುಷಿತ, ತತ್ವ ರಹಿತ, ಸ್ವಾರ್ಥ ರಾಜಕಾರಣಕ್ಕೆ ನಡೆದ ಬಲಿ. ಸಭಾಪತಿ ಸ್ಥಾನಕ್ಕಾಗಿ ಜೆಡಿಎಸ್‌ನ ಜಾತ್ಯತೀತತೆ ಪರೀಕ್ಷೆ ಮಾಡಲಾಯಿತು. ಆದರೆ, ಈ ಪರೀಕ್ಷೆಯಲ್ಲಿ ಧರ್ಮೇಗೌಡ ಎಂಬ ಹೃದಯವಂತನ ಬಲಿಯಾಗಿದೆ. ಪರೀಕ್ಷೆ ಮಾಡಿದವರಿಗೆ ಈಗ ಉತ್ತರ ಸಿಕ್ಕಿರಬಹುದು. ಫಲಿತಾಂಶದಿಂದಲಾದರೂ ಅವರ ಆತ್ಮಾವಲೋಕನ ಆಗಲಿ, ಎಂದು ಸಲಹೆ ನೀಡಿದ್ದಾರೆ.

ಇದಕ್ಕೂ ಮೊದಲು ಅಗಲಿದ ಪಕ್ಷದ ಮುಖಂಡರ ಕುರಿತು ಸಂತಾಪ ವ್ಯಕ್ತ ಪಡಿಸಿದ ಎಚ್‌ಡಿಕೆ ಅವರು, ವಿಧಾನಪರಿಷತ್ ಉಪಸಭಾಪತಿ, ಜೆಡಿಎಸ್ ಪಕ್ಷದ ಹಿರಿಯ ಮುಖಂಡರು ಹಾಗೂ ನನ್ನ ಸಹೋದರರಂತಿದ್ದ ಎಸ್.ಎಲ್.ಧರ್ಮೇಗೌಡರ ಆತ್ಮಹತ್ಯೆ ಸುದ್ದಿ ತೀವ್ರ ಆಘಾತವನ್ನುಂಟುಮಾಡಿದೆ. ನಿಷ್ಕಲ್ಮಶ ವ್ಯಕ್ತಿತ್ವದ ಸಜ್ಜನ ರಾಜಕಾರಣಿಯೊಬ್ಬರನ್ನು ನಾವು ಕಳೆದುಕೊಂಡಿದ್ದೇವೆ. ಧರ್ಮೇಗೌಡರ ಕುಟುಂಬ ಮತ್ತು ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿ ಭಗವಂತ ಕರುಣಿಸಲಿ, ಎಂದು ಟ್ವೀಟ್ ಮಾಡಿದ್ದರು.

ಉಪಸಭಾಪತಿ ಎಸ್.ಎಲ್.ಧರ್ಮೇಗೌಡ ಅವರು ನಿನ್ನೆ ಸೋಮವಾರ ರಾತ್ರಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ನಲ್ಲಿ ಬೆಳಕಿಗೆ ಬಂದಿದೆ.

ನಿನ್ನೆ ತಡರಾತ್ರಿ ಚಿಕ್ಕಮಗಳೂರು ಜಿಲ್ಲೆ ಗುಣಸಾಗರದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದ್ದು, ರಾತ್ರಿ 11:30ರ ಸುಮಾರಿಗೆ ಘಟನೆ ನಡೆದಿದೆ, ಎಂದು ಹೇಳಲಾಗಿದೆ.

RELATED TOPICS:
English summary :DharmeGowda suicide is victim selfish politics - HDK

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...