Sun,May05,2024
ಕನ್ನಡ / English

ಸಿಲಿಕಾನ್​ ಸಿಟಿಯ ಮೂವರಲ್ಲಿ ಮ್ಯೂಟಂಟ್​​ ಕೊರೊನಾ ವೈರಸ್ ಪತ್ತೆ: ಆರೋಗ್ಯ ಸಚಿವ ಡಾ. ಕೆ. ಸುಧಾಕರ್ | Janata news

29 Dec 2020
1896

ಬೆಂಗಳೂರು : ನಗರದ ವಸಂತಪುರ ದಲ್ಲಿರುವ ಅಪಾರ್ಟ್​​​ಮೆಂಟ್​​​ನ ಕುಟುಂಬದಲ್ಲಿ ಮೂವರಿಗೆ ಮ್ಯೂಟಂಟ್​​ ಕೊರೊನಾ ಸೋಂಕು ದೃಢಪಟ್ಟಿದೆ.

ರಾಜ್ಯ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಈ ಕುರಿತು ಸ್ಪಷ್ಟಪಡಿಸಿದ್ದು, ಯುಕೆಯಿಂದ ಹಿಂದಿರುಗಿದ್ದ ಮೂವರಲ್ಲಿ ಈ ಹೊಸ ವೈರಸ್ ಪತ್ತೆಯಾಗಿದ್ದು, ಬೆಂಗಳೂರಿನ ನಿಮ್ಹಾನ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತಾಗಿ ಅವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಗಳನ್ನು ಗುರುತಿಸಿದ್ದೇವೆ ಮತ್ತು ಅವರನ್ನು ಕ್ವಾರಂಟೈನ್‌ನಲ್ಲಿಡಲಾಗಿದೆ. ಜೊತೆಗೆ ಆರೋಗ್ಯವನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ.

ನಗರದ 34 ವರ್ಷದ ಮಹಿಳೆ ಮತ್ತು ಅವರ ಆರು ವರ್ಷದ ಮಗುವಿಗೆ ಬ್ರಿಟನ್‌ ರೂಪಾಂತರ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇವರು ನೆಲೆಸಿದ್ದ ವಸಂತನಗರ ವಾರ್ಡ್‌ನ ವಿಠ್ಠಲ ನಗರದ ಅಪಾರ್ಟ್‌ಮೆಂಟ್‌ ಅನ್ನು ಬಿಬಿಎಂಪಿ ಸೀಲ್‌ಡೌನ್ ಮಾಡಿದೆ.

ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ ಇಬ್ಬರು, ದ್ವಿತೀಯ ಸಂಪರ್ಕದಲ್ಲಿ 35 ಮಂದಿ ಇರುವುದು ಗೊತ್ತಾಗಿದೆ. ಸುಮಾರು 40 ಮಂದಿಯನ್ನು ಅಪಾರ್ಟ್​ಮೆಂಟ್​ನಿಂದ ಶಿಫ್ಟ್​ ಮಾಡಿ, ಸಾಂಸ್ಥಿಕ ಕ್ವಾರಂಟೈನ್ ಮಾಡುವ ಉದ್ದೇಶದಿಂದ ಇಲ್ಲಿಗೆ ಬಿಬಿಎಂಪಿ ಅಧಿಕಾರಿಗಳು ಆಗಮಿಸಿದ್ದರು. ಆದರೆ ನಿವಾಸಿಗಳು ಮಾತ್ರ ಯಾವುದೇ ಒತ್ತಾಯಕ್ಕೂ ಜಗ್ಗಲಿಲ್ಲ. ನೀವು ಬೇಕಿದ್ದರೆ ಅಪಾರ್ಟ್​ಮೆಂಟ್​ ಅನ್ನು ಸೀಲ್​ಡೌನ್ ಮಾಡಿ.. ನಾವು ಇಲ್ಲೇ ಇರುತ್ತೇವೆ ಎಂದಿದ್ದಾರೆ

ಈ ಅಪಾರ್ಟ್‌ಮೆಂಟ್‌ನಲ್ಲಿದ್ದ 37 ನಿವಾಸಿಗಳ ಕ್ವಾರಂಟೈನ್‌ ಕೇಂದ್ರಗಳಿಗೆ ಹೋಗಲು ನಿರಾಕರಿಸುತ್ತಿದ್ದಂತೆ ಬಿಬಿಎಂಪಿ ಈ ಕ್ರಮ ಕೈಗೊಂಡಿದೆ. ಎಲ್ಲ ನಿವಾಸಿಗಳ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗಿದ್ದು, ಆರ್‌-ಪಿಸಿಆರ್‌ ಪರೀಕ್ಷೆಗೆ ಮಾದರಿ ಕಳುಹಿಸಲಾಗಿದೆ.

35 ಮಂದಿ ವಾಸವಿರುವ ಶ್ರೀ ಸಾಯಿ ಅಪಾರ್ಟ್‌ಮೆಂಟ್‌ನಲ್ಲೇ ಎಲ್ಲರಿಗೂ ಕ್ವಾರಂಟೈನ್ ಮಾಡಲಾಗಿದ್ದು, ಇದರ ಜತೆಗೆ ಅಪಾರ್ಟ್​ಮೆಂಟ್​ ಏರಿಯಾವನ್ನು ಸೀಲ್​ಡೌನ್​ ಸಹ ಮಾಡಲಾಗಿದೆ ಈಗ ಅಪಾರ್ಟ್‌ಮೆಂಟ್‌ ನಿವಾಸಿಗಳಲ್ಲೆಲ್ಲರೂ ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದು, ಇಬ್ಬರು ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರತಿದಿನ ಅಪಾರ್ಟ್‌ಮೆಂಟ್‌ ಆವರಣವನ್ನು ಸ್ಯಾನಿಟೈಸ್‌ ಮಾಡಿಸಲು ಕ್ರಮ ಕೈಗೊಳ್ಳಲಾಗಿದೆ.

RELATED TOPICS:
English summary :Sudhakar

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...