ಕೋವಿಡ್-19 : ರಾಜ್ಯದಲ್ಲಿ ಇಂದು ಒಟ್ಟು 815 ಹೊಸ ಪ್ರಕರಣಗಳು, 8 ಸಾವು | Janata news | Janata news
ಬೆಂಗಳೂರು : ರಾಜ್ಯದ್ಯಂತ ಕಳೆದ 24 ಗಂಟೆಗಳಲ್ಲಿ 815 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 9,23,353ಕ್ಕೆ ಏರಿಕೆಯಾಗಿವೆ. ಕಳೆದ 24 ಗಂಟೆಯಲ್ಲಿ 8 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ, ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಸೋಂಕಿನಿಂದ ಚೇತರಿಕೆ ಪ್ರಕರಣಗಳಲ್ಲಿ, ಬೆಂಗಳೂರು ನಗರ ಸೇರಿದಂತೆ ಕೋವಿಡ್-19 ಸೊಂಕಿತರು ಸೇರಿದಂತೆ ರಾಜ್ಯಾಧ್ಯಂತ ಇಂದು 1377 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 9,01,579 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕಳೆದ 24ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ ರಾಜ್ಯಾದ್ಯಂತ 8 ಸಾವು ಸಂಭವಿಸಿದ್ದು, ರಾಜ್ಯಾದ್ಯಂತ ಒಟ್ಟು ಕೋವಿಡ್ ಸಾವಿನ ಸಂಖ್ಯೆ 12,118 ಆಗಿದೆ. ಹಾಗೂ ಇಲ್ಲಿಯವರೆಗೆ ಒಟ್ಟು 2,71,851 ಜನರನ್ನು ವಿಮಾನ ನಿಲ್ದಾಣದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ, ಎಂದು ಪ್ರಕಟಣೆಯಲ್ಲಿ ತಿಳಿಸಿದೆ.