ಹಾಸನದಲ್ಲಿ 10 ಮಂದಿ ಶಿಕ್ಷಕರಿಗೆ ಕೊರೊನಾ: ಪೋಷಕರಲ್ಲಿ ಹೆಚ್ಚಿದ ಆತಂಕ | Janata news
ಹಾಸನ : ಜಿಲ್ಲೆಯಲ್ಲಿ 10 ಮಂದಿ ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಪ್ರಾಥಮಿಕ ಶಾಲೆಯ 7 ಮಂದಿ ಮತ್ತು ಪ್ರೌಢಶಾಲೆಯ 3 ಮಂದಿ ಶಿಕ್ಷಕರಿಗೆ ಕೋವಿಡ್ ದೃಢಪಟ್ಟಿದೆ ಎಂದು ಡಿಡಿಪಿಐ ಪ್ರಕಾಶ್ ಮಾಹಿತಿ ನೀಡಿದ್ದಾರೆ..
ಶಾಲೆ ಆರಂಭವಾದ ಬಳಿಕ ಎರಡು ದಿನಗಳಿಂದ 7 ಮಂದಿ ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಆಗಿರುವುದರಿಂದ ಸಂಕಷ್ಟ ಎದುರಾಗಿದೆ. ಚನ್ನರಾಯಪಟ್ಟಣ ತಾಲೂಕಿನ 3, ಹಾಸನ ತಾಲೂಕಿನ 2 ಹಾಗೂ ಹೊಳೆನರಸೀಪುರ ತಾಲೂಕಿನ 2 ಶಿಕ್ಷಕರಿಗೆ ಸೋಂಕು ತಗುಲಿದೆ.
ಹೀಗಾಗಿ ಹೊಳೆನರಸೀಪುರ, ಚನ್ನರಾಯಪಟ್ಟಣ, ಹಾಸನ ತಾಲೂಕಿನ 7 ಶಾಲೆಗಳಿಗೆ ಶಿಕ್ಷಣ ಇಲಾಖೆ ರಜೆ ನೀಡಿ ಆದೇಶ ಹೊರಡಿಸಿದೆ. ಮುಂದಿನ ಮೂರು ದಿನ ರಜೆ ನೀಡಿ ಬಳಿಕ ಪರಿಸ್ಥಿತಿ ನೋಡಿಕೊಂಡು ಶಾಲೆ ತೆರೆಯಲು ನಿರ್ದಾರ ಮಾಡಲಾಗಿದೆ. ಶಿಕ್ಷಕರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ.