Thu,Apr25,2024
ಕನ್ನಡ / English

ಮೇಲಧಿಕಾರಿಗಳ ಕಿರುಕುಳಕ್ಕೆ ಕೆಎಸ್‌ಆರ್‌ಟಿಸಿ ನಿರ್ವಾಹಕ ಆತ್ಮಹತ್ಯೆಗೆ ಯತ್ನ | Janata news

12 Jan 2021
2948

ಮಂಗಳೂರು : ಮೇಲಾಧಿಕಾರಿಗಳ ಕಾಟದಿಂದ ಬೇಸತ್ತು, ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕರೊಬ್ಬರು ಕೆಎಸ್‌ಆರ್‌ಟಿಸಿ ವಿಭಾಗೀಯ ಕಚೇರಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ಕಾಶಿಬೆಟ್ಟು ನಿವಾಸಿ ಕೆ. ನಾಗೇಶ್ ಆತ್ಮಹತ್ಯೆಗೆ ಯತ್ನಿಸಿದ ಕೆಎಸ್‌ಆರ್‌ಟಿಸಿ ನಿರ್ವಾಹಕ. ನಾಗೇಶ್ ಅವರು ಕೆಎಸ್‌ಆರ್‌ಟಿಸಿಯ ಮಂಗಳೂರಿನ ಬಿ.ಸಿ.ರೋಡ್ ಡಿಪೋದಲ್ಲಿ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಅವರ ಮೇಲಧಿಕಾರಿಗಳು ಅವರಿಗೆ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.

ಜ.11 ರಂದು ನಾಗೇಶ್ ಅವರು ಕರ್ತವ್ಯಕ್ಕೆ ಹಾಜರಾಗಿದ್ದರು. ಈ ವೇಳೆ, ಅವರಿಗೆ ದೂರದ ಕಾಸರಗೋಡು ಟು ಬಿ.ಸಿ ರೋಡ್ ರೂಟ್‌ನಲ್ಲಿ ಡ್ಯೂಟಿಗೆ ಹಾಕಿದ್ದರು. ಈ ಬಗ್ಗೆ ಪ್ರಶ್ನಿಸಿದಾಗ ಅಧಿಕಾರಿಗಳು ಉಡಾಫೆಯಾಗಿ ವರ್ತಿಸಿ ನಿಂದಿಸಿದ್ದಾರೆ. ಈ ನಿಟ್ಟಿನಲ್ಲಿ ಡಿಸಿಗೆ ದೂರು ನೀಡುವ ಬಗ್ಗೆ ಹೇಳಿದಾಗ ಅದಕ್ಕೂ ಉಡಾಫೆ ಉತ್ತರ ನೀಡಿದ್ದಾರೆ.

5 ನಿಮಿಷ ತಡವಾದರೂ ನಿನಗೆ ಇಂದು ಕೆಲಸವಿಲ್ಲ ಎಂದು ವಾಪಸ್ ಕಳುಹಿಸುತ್ತಿದ್ದರು. ಜೊತೆಗೆ ಸಾರ್ವಜನಿಕವಾಗಿ ಅವಾಚ್ಯವಾಗಿ ಏಕವಚನದಲ್ಲಿ ನಿಂದಿಸಿ ಕಿರುಕುಳ ನೀಡುತ್ತಿದ್ದರು.

ಇನ್ನು ಈ ಬಗ್ಗೆ ಕೆಎಸ್‌ಆರ್‌ಟಿಸಿ ಡಿಸಿಗೆ ದೂರು ನೀಡಿದ ವೇಳೆ ಅಲ್ಲೂ ಸಕಾರಾತ್ಮಕ ಸ್ಪಂದನೆ ದೊರೆತಿಲ್ಲ. ಇದರಿಂದ ಬೇಸತ್ತು ಅಲ್ಲೇ ಶೌಚಾಲಯಕ್ಕೆ ತೆರಳಿ ವಿಷ ಸೇವನೆ ಮಾಡಿದ್ದಾರೆ. ಇದಕ್ಕೆ ಮೇಲಧಿಕಾರಿಗಳ ಕಿರುಕುಳವೇ ಕಾರಣ ಎಂದು ನಾಗೇಶ್ ಅವರ ಕುಟುಂಬಸ್ಥರು ಆರೋಪಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ನಾಗೇಶ್ ಅವರ ಮನೆ ಮಂದಿ ಕೆಎಸ್‌ಆರ್‌ಟಿಸಿ ಬಿ.ಸಿ.ರೋಡ್ ಘಟಕದ ಟಿಐ ಗಣೇಶ್ ಪೈ ಮತ್ತು ಡಿಪೋ ಮ್ಯಾನೇಜರ್ ಶ್ರೀಶ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.

RELATED TOPICS:
English summary :Mangalore

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...