Sun,May05,2024
ಕನ್ನಡ / English

ಸಲಿಂಗಕಾಮ ತೊರೆದು ಯುವತಿಯ ಹಿಂದೆ ಹೋದನೆಂಬ ಕಾರಣಕ್ಕೆ: ಬರ್ಬರವಾಗಿ ಕೊಂದು ರೈಲು ಹಳಿ ಮೇಲೆ ಹಾಕಿದ ಗೆಳೆಯರು ! | Janata news

14 Jan 2021
1601

ಬೆಂಗಳೂರು : ಯಶವಂತಪುರದ ಆರ್​ಎಂಸಿ ಯಾರ್ಡ್ ನಿವಾಸಿ ಅಫ್ರೋಜ್ (34) ಕೊಲೆಯಾದವ. ಸಲಿಂಗಕಾಮ ತೊರೆದು ಯುವತಿಯ ಹಿಂದೆ ಹೋದನೆಂಬ ಕಾರಣಕ್ಕೆ ಅಫ್ರೋಜ್​ನನ್ನು ಈತನ ಸ್ನೇಹಿತ ಸಿದ್ದಿಕಿಯೇ ಹತ್ಯೆ ಮಾಡಿದ್ದಾನೆ.

ಘಟನೆ ಸಬಂಧ ಮೂವರು ಆರೋಪಿಗಳನ್ನು ಬೆಂಗಳೂರು ನಗರ ರೈಲ್ವೇ ಪೊಲೀಸರು ಬಂಧಿಸಿದ್ದಾರೆ.‌ ಪಾದರಾಯನಪುರ ನಿವಾಸಿಗಳಾದ ಮಹಮ್ಮದ್ ಸಿದ್ಧಿಕ್ (26) ಮುಬಾರಕ್ ಪಾಶಾ (21) ಹಾಗೂ ಖಲೀಲ್ ಅಹಮದ್(23) ಬಂಧಿತರು.

ಜನವರಿ 6ರಂದು ಮೊಹಮ್ಮದ್ ಅಪ್ರೋಜ್ ಶವ ನಾಯಂಡಹಳ್ಳಿ-ಮೆಜೆಸ್ಟಿಕ್ ನಡುವಿನ ರೈಲ್ವೇ ಮಾರ್ಗದಲ್ಲಿ ಪತ್ತೆಯಾಗಿತ್ತು. ಮಾಹಿತಿ ಆಧರಿಸಿ ಸ್ಥಳಕ್ಕೆ ಡೌಡಾಯಿಸಿ ಪರಿಶೀಲನೆ ನಡೆಸಿದ ಪೊಲೀಸರು ಅನುಮಾನಸ್ಪಾದ ಸಾವು ಪ್ರಕರಣ ದಾಖಲಿಸಿಕೊಂಡಿದ್ದರು‌.

ಬಿಹಾರ ಮೂಲದ ಅಫ್ರೋಜ್, ಹಲವು ವರ್ಷಗಳಿಂದ ಯಶವಂತಪುರದ ಆರ್​ಎಂಸಿ ಯಾರ್ಡ್​ನಲ್ಲಿ ಹೋಟೆಲ್ ನಡೆಸುತ್ತಿದ್ದ. ಕೌಟುಂಬಿಕ ಕಲಹದಿಂದ ಪತ್ನಿಯಿಂದ ದೂರಾಗಿ ಹೋಟೆಲ್​ನಲ್ಲೇ ನೆಲೆಸಿದ್ದ. ಕೆಲ ವರ್ಷಗಳ ಹಿಂದೆ ಮಸೀದಿಯಲ್ಲಿ ಶಾಲೆಯ ಸ್ನೇಹಿತ ಸಿದ್ದಿಕಿ ಸಿಕ್ಕಿದ್ದ. ಇಬ್ಬರ ನಡುವೆ ಆತ್ಮೀಯತೆ ಮೂಡಿ ಸಲಿಂಗಕಾಮಕ್ಕೂ ತಿರುಗಿತ್ತು.
ಸಿದ್ದಿಕಿಗೆ ಹಣದಾಸೆ ತೋರಿಸಿ ಆತನ ಜತೆ ಅಫ್ರೋಜ್ ಲೈಂಗಿಕ ಕ್ರಿಯೆ ನಡೆಸುತ್ತಿದ್ದ.

ಅಫ್ರೋಜ್​ಗೆ ಯುವತಿಯೊಬ್ಬಳ ಸ್ನೇಹ ಬೆಳೆದು ಆಕೆಯ ಜತೆ ಸಲುಗೆಯಿಂದ ಇರುತಿದ್ದ, ಇದರಿಂದ ಕೋಪಗೊಂಡ ಸಿದ್ದಿಕಿ, ತನ್ನ ಸ್ನೇಹಿತರ ಜತೆ ಸೇರಿ ಅಫ್ರೋಜ್ ಕೊಲೆಗೆ ಸಂಚು ರೂಪಿಸಿದ್ದ.

ಅದರಂತೆ ಸಿದ್ದಿಕಿ, ಅಫ್ರೋಜ್​ಗೆ ಜ.2ರ ರಾತ್ರಿ ಹಂಪಿನಗರದ ಶ್ರೀ ಕೃಷ್ಣದೇವರಾಯ ರೈಲು ನಿಲ್ದಾಣ ಬಳಿಗೆ ಬರುವಂತೆ ಹೇಳಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದರು. ಬಳಿಕ ರೈಲು ಹಳಿಗಳ ಮೇಲೆ ಶವ ಎಸೆದು ಪರಾರಿಯಾಗಿದ್ದರು. ರೈಲು ಹರಿದು ಮೃತದೇಹ ತುಂಡಾಗಿತ್ತು.

ಪೊಲೀಸರಿಗೆ ಅನುಮಾನ ಬಾರದಿರಲು ರೈಲ್ವೇ ಟ್ರ್ಯಾಕ್​ನಲ್ಲಿ ಶವ ಬಿಸಾಡಿ ರೈಲು ಅಪಘಾತ ಎಂಬಂತೆ ಬಿಂಬಿಸಿದ್ದಾರೆ. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ವ್ಯಕ್ತಿ ಸಾವಿಗೆ ಬಲವಂತ ಆಯುಧದಿಂದ ಹಲ್ಲೆಯಾಗಿದೆ ಎಂದು ವೈದ್ಯರು ವರದಿ ಸಲ್ಲಿಸಿದ್ದರು. ತನಿಖೆ ಚುರುಕುಗೊಳಿಸಿದ ಪೊಲೀಸರು, ಮೊಬೈಲ್​ಗೆ ಬಂದಿದ್ದ ಕೊನೇ ಕರೆಯ ಬೆನ್ನತ್ತಿದ್ದಾಗ ಪಾದರಾಯನಪುರದ ಸಿದ್ದಿಕಿ ಸಿಕ್ಕಿಬಿದ್ದಿದ್ದಾನೆ.

RELATED TOPICS:
English summary :Bangalore

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...